ಬಳ್ಳಾರಿ: ಲೋಕಕಲ್ಯಾಣಾರ್ಥವಾಗಿ ತಾಲೂಕಿನ ಯಾಳ್ಪಿ ಗ್ರಾಮದಲ್ಲಿ ಪಾಲ್ತೂರು ಕಳಹೊಳ್ಳಿ ಮಠದ ಶ್ರೀ ಚೆನ್ನವೀರ ಶಿವಾಚಾರ್ಯ ಸ್ವಾಮೀಜಿಗಳು ಭಾನುವಾರ 48 ದಿನಗಳ ಮೌನ ಅನುಷ್ಠಾನಕ್ಕೆ ಚಾಲನೆ ನೀಡಿದರು.

ಗ್ರಾಮದ ಮುಖಂಡರಾದ ಮೇಟಿ ಪಂಪನಗೌಡ ಪಾಲ್ತೂರು ಕಳಹೊಳ್ಳಿ ಮಠಕ್ಕೆ ಭಕ್ತಿಯಿಂದ ಜಮೀನನ್ನು ದಾನವಾಗಿ ನೀಡಿದ್ದಾರೆ. ಈ ಭೂಮಿಯಲ್ಲಿಯೇ ಶ್ರೀಗಳು (ಮೇ 17) ಜುಲೈ 5ರವರೆಗೆ ಸುಮಾರು ಒಂದೂವರೆ ತಿಂಗಳ ಕಾಲ ಕಠಿಣ ಮೌನ ಅನುಷ್ಠಾನ ಕೈಗೊಳ್ಳಲಿದ್ದಾರೆ.

ಮೌನ ಅನುಷ್ಠಾನ ಆರಂಭಕ್ಕೂ ಮೊದಲು ಭಾನುವಾರ ಬೆಳಿಗ್ಗೆ ಗ್ರಾಮದ ಇತಿಹಾಸ ಪ್ರಸಿದ್ಧ ಶ್ರೀ ಕಲ್ಲೇಶ್ವರ ದೇವಸ್ಥಾನದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ವಿಶೇಷ ರುದ್ರಾಭಿಷೇಕ ಹಾಗೂ ಪೂಜಾ ಕಾರ್ಯಕ್ರಮಗಳು ಜರುಗಿದವು.

ಪೂಜೆಯ ನಂತರ ಕಲ್ಲೇಶ್ವರ ದೇವಸ್ಥಾನದಿಂದ ಸ್ವಾಮೀಜಿಗಳನ್ನು ಮಂಗಲವಾದ್ಯಗಳೊಂದಿಗೆ ಅದ್ಧೂರಿ ಮೆರವಣಿಗೆಯ ಮೂಲಕ ದಾನವಾಗಿ ನೀಡಲಾದ 'ತಪೋನಿಧಿ' ಸ್ಥಳಕ್ಕೆ ಕರೆತರಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260519-25-980668721

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.