ಬಂಟ್ವಾಳ: ‘ಯಕ್ಷಧ್ರುವ ಪಟ್ಲ ಫೌಂಡೇಷನ್ ದಾನಿಗಳ ನೆರವು ಪಡೆದು ಕಲಾವಿದರಿಗೆ ಜೀವನ ಭದ್ರತೆ ಒದಗಿಸುವುದರ ಜೊತೆಗೆ ಯಕ್ಷಗಾನದ ಕಂಪನ್ನು ದೇಶ ವಿದೇಶದಲ್ಲಿ ಪಸರಿಸಿದೆ. ಮುಂದಿನ ದಿನಗಳಲ್ಲಿ ಹಡಗಿನಲ್ಲಿ, ಆಗಸದಲ್ಲಿ ಕೂಡ ಯಕ್ಷಗಾನ ಪ್ರದರ್ಶಿಸಲು ಸಿದ್ಧತೆ ನಡೆಯುತ್ತಿದೆ’ ಎಂದು ಫೌಂಡೇಷನ್ ಅಧ್ಯಕ್ಷ ಪಟ್ಲ ಸತೀಶ ಶೆಟ್ಟಿ ಹೇಳಿದರು.

ಇಲ್ಲಿನ ಬಿ.ಸಿ.ರೋಡು ಅನ್ನಪೂರ್ಣೇಶ್ವರಿ ದೇವಸ್ಥಾನ ಬಳಿ ಯಕ್ಷಧ್ರುವ ಪಟ್ಲ ಫೌಂಡೇಷನ್ ಘಟಕವು ಬುಧವಾರ ಆಯೋಜಿಸಿದ್ದ 3ನೇ ವಾರ್ಷಿಕೋತ್ಸವ, ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಯಕ್ಷಗಾನ ಕಲಾವಿದ ಸರಪಾಡಿ ಅಶೋಕ್ ಶೆಟ್ಟಿ, ದೈವ ನರ್ತಕ ದೇಜಪ್ಪ ಬಾಚಕೆರೆ ಅವರನ್ನು ಸನ್ಮಾನಿಸಲಾಯಿತು.

ದೇವಳದ ಆಡಳಿತ ಸಮಿತಿ ಗೌರವಾಧ್ಯಕ್ಷ ಜಗನ್ನಾಥ ಚೌಟ ಬದಿಗುಡ್ಡೆ, ಅಧ್ಯಕ್ಷ ಭುವನೇಶ್ ಪಚ್ಚಿನಡ್ಕ, ವಕೀಲ ಶ್ರೀಧರ್ ಶೆಟ್ಟಿ ಪುಳಿಂಚ, ಸಂದೇಶ್ ಶೆಟ್ಟಿ ಅರೆಬೆಟ್ಟು,ಗಣ್ಯರು ಭಾಗವಹಿಸಿದ್ದರು.

ಸತೀಶ್ ಶೆಟ್ಟಿ ಮೊಡಂಕಾಪು, ಚಿತ್ತರಂಜನ್ ಶೆಟ್ಟಿ ಬೊಂಡಾಲ ಸನ್ಮಾನಿತರನ್ನು ಪರಿಚಯಿಸಿದರು. ಸಮಿತಿ ಅಧ್ಯಕ್ಷ ದಿವಾಕರ ಶೆಟ್ಟಿ ಪರಾರಿಗುತ್ತು ಸ್ವಾಗತಿಸಿದರು. ದೇವದಾಸ್ ಶೆಟ್ಟಿ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-29-1139637676

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.