ಕೂಡ್ಲಿಗಿ: ‘ಸಮಾನತೆ, ಕಾಯಕ, ದಾಸೋಹ ತತ್ವಗಳ ಮೂಲಕ ವಿಶ್ವಕ್ಕೆ ಪ್ರಜಾಪ್ರಭುತ್ವದ ಮಾದರಿ ನೀಡಿದ ಬಸವಣ್ಣನವರ ವಿಚಾರಧಾರೆಗಳು ಇಂದಿಗೂ ಪ್ರಸ್ತುತವಾಗಿವೆ’ ಎಂದು ಹಿಟ್ನಾಳ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಚಾರ್ಯ ಟಿ.ಎಚ್. ಬಸವರಾಜ ಅಭಿಪ್ರಾಯಪಟ್ಟರು.

ಪಟ್ಟಣದ ಶ್ರೀಮತಿ ಅಂಗಡಿ ವೀರಮ್ಮ, ತಿರುಕಪ್ಪ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಭಾಂಗಣದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು, ಜಾಗತಿಕ ಲಿಂಗಾಯತ ಮಹಾಸಭಾ ಶುಕ್ರವಾರ ಆಯೋಜಿಸಿದ್ದ ‘ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ’ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘12ನೇ ಶತಮಾನದಲ್ಲಿ ಬಸವಣ್ಣಅವರು ಸ್ಥಾಪಿಸಿದ ‘ಅನುಭವ ಮಂಟಪ’ವು ವಿಶ್ವದ ಮೊದಲ ಸಂಸತ್ತು. ಇಲ್ಲಿ ಶರಣರು ವಚನಗಳ ಮೂಲಕ ಸಾಮಾಜಿಕ ಸಂಘರ್ಷಗಳಿಗೆ ಪರಿಹಾರ ಕಂಡುಕೊಳ್ಳುತ್ತಿದ್ದರು’ ಎಂದು ತಿಳಿಸಿದರು.

ಜಾಗತಿಕ ಲಿಂಗಾಯತ ಮಹಾಸಭಾದ ರಾಜ್ಯ ಕಾರ್ಯಕಾರಿಣಿ ಸದಸ್ಯ ಟಿ.ಜಿ. ಮಲ್ಲಿಕಾರ್ಜುನ ಗೌಡ ಮಾತನಾಡಿ, ‘ಬಸವಣ್ಣ ಅವರನ್ನು ಒಂದು ಸಮುದಾಯಕ್ಕೆ ಸೀಮಿತಗೊಳಿಸದೆ ಅವರ ವಿಶ್ವಮಾನವ ಸಂದೇಶವನ್ನು ಎಲ್ಲೆಡೆ ಪಸರಿಸುವ ಅಗತ್ಯವಿದೆ’ ಎಂದರು.

ಪ್ರಾಚಾರ್ಯ ಷಣ್ಮುಖನ ಗೌಡ ಸಂಕಾಳ್, ಶರಣ ಸಾಹಿತ್ಯ ಪರಿಷತ್ತು ಜಿಲ್ಲಾಧ್ಯಕ್ಷ ಕೆ. ರವೀಂದ್ರನಾಥ್, ಲಿಂಗಾಯತ ಮಹಾಸಭಾದ ಜಿಲ್ಲಾಧ್ಯಕ್ಷ ಎಸ್. ಬಸವರಾಜ ಮಾವಿನಹಳ್ಳಿ, ಉಪಾಧ್ಯಕ್ಷ ಎಸ್. ರಾಜೇಂದ್ರ ಪ್ರಸಾದ್, ಜಿಲ್ಲಾ ಕಾರ್ಯದರ್ಶಿ ಎನ್.ಎಂ. ರವಿಕುಮಾರ್, ಸಂಚಾಲಕ ವಿ. ಅನಿಲಕುಮಾರ್, ಸುನೀಲ್ ಗೌಡ, ಲೋಕೇಶ್ ಅವರದಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-25-1286165094

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.