ಬೆಳಗಾವಿ: ‘ವಿದ್ಯೆ ಕಲಿಸಿದ ಗುರುಗಳನ್ನು ಸ್ಮರಿಸುವುದರಿಂದ ಸದ್ಗತಿ ದೊರೆಯುತ್ತದೆ ಮತ್ತು ಪುಣ್ಯ ಪ್ರಾಪ್ತಿಯಾಗುತ್ತದೆ’ ಎಂದು ನಿವೃತ್ತ ಮುಖ್ಯಶಿಕ್ಷಕ ಬಾಳಪ್ಪ ರೊಟ್ಟಿ ಹೇಳಿದರು.

ಬೈಲಹೊಂಗಲ ತಾಲ್ಲೂಕಿನ ನೇಸರಗಿ ಗ್ರಾಮದ ವೀರಭದ್ರೇಶ್ವರ ಜಾತ್ರೆ ಅಂಗವಾಗಿ ಬಸವರಾಜ ಕುರಗುಂದ ಕುಟುಂಬ ಹಾಗೂ ಹಿರಿಯ ವಿದ್ಯಾರ್ಥಿಗಳ ಸಹಯೋಗದಲ್ಲಿ ಬುಧವಾರ ಏರ್ಪಡಿಸಿದ್ದ ಗುರುನಮನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ನಾವು ಗಳಿಸಿದ ಆಸ್ತಿ, ಅಂತಸ್ತು ಕೊನೆಯವರೆಗೆ ಉಳಿಯುವುದಿಲ್ಲ. ವಿದ್ಯೆ ಮಾತ್ರ ಕೊನೆಯವರೆಗೂ ಇರುತ್ತದೆ. ಹಾಗಾಗಿ, ಪ್ರತಿಯೊಬ್ಬರ ಬದುಕಿನಲ್ಲಿ ಗುರುವಿನ ಶ್ರಮ ದೊಡ್ಡದು’ ಎಂದರು.

ನಿವೃತ್ತ ಮುಖ್ಯಶಿಕ್ಷಕರಾದ ಗಂಗಪ್ಪ ಸತ್ತೀಗೇರಿ, ಮಲ್ಲಿಕಾರ್ಜುನ ಮದನಬಾವಿ ಮಾತನಾಡಿದರು. ಶಿಕ್ಷಕರಾದ ರಾಜಶೇಖರ ಗೆಜ್ಜಿ, ಬಸನಗೌಡ ಪಾಟೀಲ, ಯಲ್ಲಪ್ಪ ರೊಟ್ಟಿ, ವಕೀಲ ಈಶ್ವರ ಚೋಬಾರಿ, ವರ್ತಕರಾದ ಗುರುರಾಜ ತುಬಚಿ, ಸುರೇಶ ಇಂಚಲ, ಉಮೇಶ ಕರವೀರನವರ, ಮಾಜಿ ಯೋಧ ಈರಪ್ಪ ಹೊಂಡಪ್ಪನವರ, ಬಸವರಾಜ ಕಾಡಣ್ಣವರ, ಗ್ರಾಮದ ಹಿರಿಯರು, ಪುರವಂತರು, ಗ್ರಾಮಸ್ಥರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-21-137181344

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.