ಬೆಂಗಳೂರು: ‘ಬುದ್ಧನ ಬದುಕೇ ಲೌಕಿಕ ಜಗತ್ತಿಗೆ ಅಗತ್ಯವಾಗಿ ಬೇಕಿರುವ ಕಾವ್ಯೌಷಧವಾಗಿದೆ. ಸಿದ್ಧಾರ್ಥನು ಬುದ್ಧ ನಾಗುವ ಮಾರ್ಗದಲ್ಲಿ ಪದ ಪಾಂಡಿತ್ಯ, ಶಬ್ದ ಚಮತ್ಕಾರಕ್ಕಿಂತ ಸತ್ಯ ಮತ್ತು ಸರಳತೆ ಬುದ್ಧನ ಆಯ್ಕೆಯಾಗಿತ್ತು’ ಎಂದು ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯಪಟ್ಟರು.

ಬೆಂಗಳೂರು ಉತ್ತರ ವಿಶ್ವ ವಿದ್ಯಾಲಯವು ಬುದ್ಧ ಪೂರ್ಣಿಮೆ ಅಂಗವಾಗಿ ಶುಕ್ರವಾರ ಆಯೋಜಿಸಿದ್ದ ‘ಕಾವ್ಯ ಬೆಳದಿಂಗಳು’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಬುದ್ಧ, ಕಾವ್ಯ ಮತ್ತು ಬೆಳದಿಂಗಳ ನಡುವೆ ಒಂದು ಅವಿನಾಭಾವ ಸಂಬಂಧವಿದೆ. ಬುದ್ಧನ ಶಾಂತತೆ, ಕಾವ್ಯದ ಸೌಂದರ್ಯ ಮತ್ತು ಬೆಳದಿಂಗಳ ತಂಪು ಇವೆಲ್ಲವೂ ಸಮಾಜಕ್ಕೆ ಮತ್ತು ಮನುಷ್ಯನ ಮನಸ್ಸಿಗೆ ನೆಮ್ಮದಿಯನ್ನು ನೀಡುವ ಅಂಶಗಳು. ಸಿದ್ಧಾರ್ಥನಿಂದ ಬುದ್ಧನಾದ ಆ ಮಹಾಚೇತನದ ಪಯಣವೇ ಒಂದು ಅದ್ಭುತ ಕಾವ್ಯವಾಗಿದೆ’ ಎಂದರು.

‘ಅಧಿಕಾರ ಮತ್ತು ಅರಮನೆಯ ಸುಖವನ್ನು ತೊರೆದ ಸಿದ್ಧಾರ್ಥ, ಸತ್ಯವನ್ನು ಅರಸಿ ಹೊರಟ ಹೆಜ್ಜೆಗಳು ಇಂದಿಗೂ ಮನುಕುಲಕ್ಕೆ ದಾರಿದೀಪ. ಈ ಮಹಾಚೇತನದ ಪಯಣವೇ ಒಂದು ಅದ್ಭುತ ಕಾವ್ಯ’ ಎಂದು ಬಣ್ಣಿಸಿದರು.

ಮುಖ್ಯಮಂತ್ರಿ ಅವರ ಆಪ್ತ ಕಾರ್ಯದರ್ಶಿ ವೆಂಕಟೇಶಯ್ಯ, ವಿಶ್ವವಿದ್ಯಾಲಯದ ಕುಲಪತಿ ಬಿ.ಕೆ.ರವಿ, ಪತ್ರಕರ್ತ ಜಿ.ಎನ್.ಮೋಹನ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-4-904057503

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.