ಬೆಂಗಳೂರು: ದಿ ಆರ್ಟ್ ಆಫ್ ಲಿವಿಂಗ್ ಅಂತರರಾಷ್ಟ್ರೀಯ ಕೇಂದ್ರದಲ್ಲಿ ನೂತನವಾಗಿ ನಿರ್ಮಿಸಿರುವ ಧ್ಯಾನ ಮಂದಿರವನ್ನು ಪ್ರಧಾನಿ ನರೇಂದ್ರ ಮೋದಿ ಈಚೆಗೆ ಉದ್ಘಾಟಿಸಿದ್ದು, ಶ್ರೀ ಶ್ರೀ ರವಿಶಂಕರ್ ಗುರೂಜಿ ನೇತೃತ್ವದಲ್ಲಿ ಈ ಮಂದಿರದಲ್ಲಿಯೇ ‘ವಿಶ್ವ ಶಾಂತಿಗಾಗಿ ಜಾಗತಿಕ ಧ್ಯಾನ’ ಎಂಬ ಮೊದಲ ಕಾರ್ಯಕ್ರಮ ಬುಧವಾರ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ವಿಶ್ವದ 182 ದೇಶಗಳ ಲಕ್ಷಾಂತರ ಜನರು ಭೌತಿಕವಾಗಿ ಮತ್ತು ನೇರ ಪ್ರಸಾರದ ಮೂಲಕ ಭಾಗವಹಿಸಲಿದ್ದಾರೆ.

ದಿ ವರ್ಲ್ಡ್ ಮೆಡಿಟೇಟ್ಸ್ ವಿತ್ ಗುರುದೇವ್ ಕಾರ್ಯಕ್ರಮವು ಒಂದು ತಿಂಗಳ ಕಾಲ ನಡೆಯಲಿದೆ. ಇದು ಆರ್ಟ್ ಆಫ್ ಲಿವಿಂಗ್ನ 45 ವರ್ಷಗಳ ಸಂಭ್ರಮಾಚರಣೆಯ ಕೇಂದ್ರ ಬಿಂದುವಾಗಿದೆ. ಈ ಕಾರ್ಯಕ್ರಮದಲ್ಲಿ ಕೇಂದ್ರದ ಸಚಿವರು, ವಿವಿಧ ರಾಜ್ಯಗಳ ರಾಜ್ಯಪಾಲರು, ಚಿತ್ರರಂಗದ ಗಣ್ಯರು ಭಾಗವಹಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260513-4-84977653

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.