ಭಾಲ್ಕಿ: ತಾಲ್ಲೂಕಿನ ಭಾತಂಬ್ರಾ ಗ್ರಾಮದ ಮಾರುತಿ ದೇವಸ್ಥಾನದಲ್ಲಿ ಅಖಂಡ ಹರಿನಾಮ ಸಪ್ತಾಹ, ಗ್ರಂಥರಾಜ ಜ್ಞಾನೇಶ್ವರಿ ಪಾರಾಯಣ ಕಾರ್ಯಕ್ರಮ ನಡೆಯಿತು.

ಕೀರ್ತನೆಕಾರ ಹರಿಭಕ್ತ ಪಾರಾಯಣ ಸಂದೀಪ ಮಹಾರಾಜ ತೆಲಗಾಂವಕರ್, ತುಕಾರಾಮ ಮಹಾರಾಜರು ಸಾರಿದ ಸಂದೇಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸಾರ್ಥಕವಾಗುತ್ತದೆ’ ಎಂದು ಹೇಳಿದರು.

ಭಕ್ತಿಯ ಮಾರ್ಗದಲ್ಲಿ ನಡೆಯುವುದರಿಂದ ಮನಸ್ಸಿಗೆ ಶಾಂತಿ ದೊರೆಯುವುದರ ಜೊತೆಗೆ ಸಮಾಜದಲ್ಲಿ ಸೌಹಾರ್ದ ಹಾಗೂ ಮಾನವೀಯ ಮೌಲ್ಯಗಳು ಬೆಳೆಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದರು. ಸಪ್ತಾಹ ಆಯೋಜನಾ ಸಮಿತಿಯ ಪದಾಧಿಕಾರಿಗಳು, ಮಾರುತಿ ದೇವಸ್ಥಾನದ ಸದಸ್ಯರು, ಗ್ರಾಮದ ಹಿರಿಯರು, ಮಹಿಳೆಯರು ಹಾಗೂ ಅಪಾರ ಸಂಖ್ಯೆಯ ಸದ್ಭಕ್ತರು ಭಾಗವಹಿಸಿ ಭಜನೆ, ಕೀರ್ತನೆ ಮತ್ತು ಪಾರಾಯಣದಲ್ಲಿ ತೊಡಗಿಸಿಕೊಂಡರು. ಅಧ್ಯಕ್ಷ ವಿನೋದ ಕುಂಟಮಲಗೆ, ವಿಜಯ ಕುಲಕರ್ಣಿ, ಶಂಕರರಾವ್ ಅಮದಾಬಾದೆ, ದೌಲತರಾವ್ ಅಮದಾಬಾದೆ, ವಿಠಲ ಕುಂಟಮಲಗೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260529-33-1603773291

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.