ಭಾಲ್ಕಿ: ‘12ನೇ ಶತಮಾನದಲ್ಲಿ ಬಸವಾದಿ ಶರಣರು ತಮ್ಮ ಅನುಭಾವದ ಮೂಲಕ ರಚಿಸಿರುವ ವಚನಗಳಲ್ಲಿ ನಿಜಜೀವನದ ಅರ್ಥ ಅಡಗಿದೆ’ ಎಂದು ಸ್ತ್ರೀರೋಗ ತಜ್ಞೆ ಡಾ.ಶೈಲಜಾ ಅನಿಲ್ಕುಮಾರ ತಳವಾಡೆ ಹೇಳಿದರು.

ಪಟ್ಟಣದ ಚನ್ನಬಸವಾಶ್ರಮದಲ್ಲಿ ಹಿರೇಮಠ ಸಂಸ್ಥಾನ ಮತ್ತು ಅಭಿನಂದನಾ ಸಮಿತಿ ವತಿಯಿಂದ ಬಸವ ಜಯಂತಿ, ಡಾ.ಚನ್ನಬಸವ ಪಟ್ಟದ್ದೇವರ 27ನೇ ಸ್ಮರಣೋತ್ಸವ, ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ನಿಮಿತ್ತ ಆಯೋಜಿಸಿದ್ದ ಬಸವ ದರ್ಶನ ಪ್ರವಚನ ಉದ್ಘಾಟಿಸಿ ಅವರು ಮಾತನಾಡಿದರು.

‘ಅಂತರಂಗ ಶುದ್ಧಿಗೆ ಪ್ರವಚನ ಸಹಕಾರಿಯಾಗಿದೆ. ಬಸವಾದಿ ಶರಣರ ಕುರಿತು ನಡೆಯುವ ಪ್ರವಚನದ ಸಾರವನ್ನು ಆಲಿಸಿ ಜೀವನದಲ್ಲಿ ಅಳವಡಿಸಿಕೊಂಡರೆ ಬದುಕು ಸುಂದರವಾಗಿ ರೂಪಗೊಳ್ಳಲಿದೆ’ ಎಂದು ತಿಳಿಸಿದರು.

ಬಸವ ಗುರುವಿನ ಪೂಜೆ ನೆರವೇರಿಸಿದ ಯುವ ಮುಖಂಡ ಪ್ರಸನ್ನ ಖಂಡ್ರೆ ಮಾತನಾಡಿ, ‘ಪೂಜ್ಯರು, ಅನುಭಾವಿಗಳು ನಡೆಸಿಕೊಡುವ ಪ್ರವಚನಗಳಲ್ಲಿ ಬದುಕಿನ ಮೌಲ್ಯಗಳು ಅಡಗಿರುತ್ತವೆ’ ಎಂದು ತಿಳಿಸಿದರು.

ನೇತೃತ್ವ ವಹಿಸಿದ್ದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಮಾತನಾಡಿ, ‘ಪ್ರವಚನ ಆಲಿಸುವುದರಿಂದ ಮನಸ್ಸು ವಿಕಾಸಗೊಳ್ಳುತ್ತದೆ. ಬದುಕಿನಲ್ಲಿ ಶಾಂತಿ ನೆಮ್ಮದಿ ಲಭಿಸುತ್ತದೆ’ ಎಂದು ತಿಳಿಸಿದರು.

ಹಂದಿಗುಂದ ಸಿದ್ದೇಶ್ವರ ಮಠದ ಶಿವಾನಂದ ಸ್ವಾಮೀಜಿ ಮಾತನಾಡಿ, ‘12ನೇ ಶತಮಾನದಲ್ಲಿ ದುರ್ಬಲ ವರ್ಗ ಮತ್ತು ಸಮಾಜದಲ್ಲಿ ತುಳಿತಕ್ಕೊಳಗಾದವರನ್ನು ಮೇಲೆತ್ತುವ ಕೆಲಸ ಮಾಡಿದ ವಿಶ್ವಗುರು ಬಸವಣ್ಣನವರನ್ನು ಪ್ರತಿಯೊಬ್ಬರೂ ಧರ್ಮಗುರು ಎಂದು ಒಪ್ಪಿಕೊಳ್ಳಬೇಕು’ ಎಂದು ತಿಳಿಸಿದರು.

ಅನುಭವ ಮಂಟಪ ಟ್ರಸ್ಟ್ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ಸಾನ್ನಿಧ್ಯ ವಹಿಸಿ ಮಾತನಾಡಿದರು.

ಶಾರದಾ ಹೋಟೆಲ್ನ ಮಾಲೀಕರಾದ ಶಾರದಾ ಬಾಬುರಾವ್ ಹುಣಜೆ ಅವರು ಮೊದಲ ದಿನದ ಅನ್ನದಾಸೋಹ ವಹಿಸಿಕೊಂಡಿದ್ದರು.

ಹಿರಿಯ ಮುಖಂಡ ಸುಭಾಷ ಕಾರಾಮುಂಗೆ ಅಧ್ಯಕ್ಷತೆ ವಹಿಸಿದ್ದರು.

ತಾಲ್ಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಜಯರಾಜ ದಾಬಶೆಟ್ಟೆ, ಬಾಬುರಾವ್ ಹುಣಜೆ, ಶಾರದಾ ಹುಣಜೆ ಸೇರಿದಂತೆ ಹಲವರು ಇದ್ದರು.

ಗುರುಪ್ರಸಾದ ಶಾಲೆಯ ಮಕ್ಕಳು ವಚನ ಗಾಯನ ನಡೆಸಿಕೊಟ್ಟರು. ಪ್ರವಚನ ಸೇವಾ ಸಮಿತಿ ಅಧ್ಯಕ್ಷೆ ಪಂಕಜಾ ಶಿವು ಲೋಖಂಡೆ ಸ್ವಾಗತಿಸಿದರು. ದೀಪಕ ಠಮಕೆ ನಿರೂಪಿಸಿದರು. ರೇಖಾ ಮಹಾಜನ್ ವಂದಿಸಿದರು. ಕಲಾವಿದರಾದ ಸಂಗಮೇಶ ಪಾಟೀಲ, ತೋಂಟೇಂದ್ರಕುಮಾರ ಕರಡಕಲ್ ಸಂಗೀತ ಸೇವೆ ನಡೆಸಿಕೊಟ್ಟರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260403-33-910683603

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.