ಬೀದರ್: ‘ಬಸವಣ್ಣನವರು ಕಾಯಕ ಮಾಡುವುದರ ಮೂಲಕ ಸ್ವಾವಲಂಬಿ ಜೀವನ ನಡೆಸಬೇಕೆಂದು ಹೇಳಿದ್ದಾರೆ. ಅದರಂತೆ ನಾವೆಲ್ಲರೂ ಬದುಕು ಸವೆಸಬೇಕು’ ಎಂದು ಜಹೀರಾಬಾದ್ ತಾಲ್ಲೂಕಿನ ಮಲ್ಲಯ್ಯಗಿರಿ ಹಾಗೂ ಬಸವಕಲ್ಯಾಣ ಆಶ್ರಮದ ಪೀಠಾಧಿಪತಿ ಬಸವಲಿಂಗ ಅವಧೂತರು ತಿಳಿಸಿದರು.

ನಗರದ ಅಲ್ಲಮಪ್ರಭು ಬಡವಾಣೆಯಲ್ಲಿ ಏರ್ಪಡಿಸಿದ್ದ ಬಸವ ಜಯಂತಿ ಹಾಗೂ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘12ನೇ ಶತಮಾನದಲ್ಲಿ ಬಸವಾದಿ ಶರಣರು ಸಮ ಸಮಾಜ ನಿರ್ಮಿಸಿದರು. ವಚನಗಳ ಮೂಲಕ ಸಮಾಜದಲ್ಲಿನ ಅಂಕು ಡೊಂಕು ತಿದ್ದಿದರು’ ಎಂದು ಹೇಳಿದರು.

‘ಬಸವಣ್ಣ, ಅಕ್ಕಮಹಾದೇವಿ ಸೇರಿದಂತೆ ಶರಣರ ಜೀನವ ಸಾಧನೆ ಪುಸ್ತಕಗಳನ್ನು ಓದಿ ಪ್ರೇರಣೆ ಪಡೆದು ಅವರು ಹಾಕಿ ಕೊಟ್ಟ ಮಾರ್ಗದಲ್ಲಿ ನಡೆಯಬೇಕು’ ಎಂದು ತಿಳಿಸಿದರು.

ಬಡಾವಣೆಯ ಪ್ರಮುಖರಾದ ಸಮಿತಿಯ ಅಧ್ಯಕ್ಷ ವೀರಶೆಟ್ಟಿ ಗಣಾಪುರ, ಕಾರ್ಯದರ್ಶಿ ವಿಜಯಕುಮಾರ ಬಿರಾದರ ಗಣಪತಿ ಗುಡ್ರೆ, ಮಲ್ಲಯ್ಯ ಸ್ವಾಮಿ, ಶಿವಕುಮಾರ ಕೊತ್ತಮೂರೆ, ವೀರಣ್ಣ ತಲಾಟಿ, ಶಶಿ ಹೊಸದೊಡ್ಡಿ, ನಿವೃತ್ತ ಶಿಕ್ಷಣಾಧಿಕಾರಿ ಶಿವಕುಮಾರ ಸ್ವಾಮಿ, ನಿವೃತ್ತ ಶಿಕಕ್ಷ ಶಂಕರರಾವ್ ಸಜ್ಜನಶೆಟ್ಟಿ, ಮಲ್ಲೇಶ ಗಣಾಪುರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260429-33-135963266

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.