ಬ್ರಹ್ಮಾವರ: ‘ಸಂಸ್ಕಾರಯುತ ಬದುಕನ್ನು ರೂಪಿಸುವಲ್ಲಿ ವೇದ ಶಿಕ್ಷಣದ ಪಾತ್ರ ದೊಡ್ಡದು. ಈ ನಿಟ್ಟಿನಲ್ಲಿ ಗುರುನರಸಿಂಹ ದೇವಸ್ಥಾನವು ಹಮ್ಮಿಕೊಂಡಿದ್ದ ವಸಂತ ವೇದ ಶಿಬಿರವು ಯಶಸ್ವಿಯಾಗಿ ಸಂಪನ್ನಗೊಂಡಿದೆ’ ಎಂದು ದೇವಳದ ಆಡಳಿತ ಮಂಡಳಿಯ ಅಧ್ಯಕ್ಷ ಪ್ರಕಾಶ ಕಾರಂತ್ ಹೇಳಿದರು.

ದೇವಸ್ಥಾನದ ಜ್ಞಾನಮಂದಿರದಲ್ಲಿ ನಡೆದ ವಸಂತ ವೇದ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಶಿಬಿರಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣಪತ್ರಗಳನ್ನು ವಿತರಿಸಲಾಯಿತು. ದಾನಿ ಸುಧೀಂದ್ರ ಬೆಂಗಳೂರು ಅವರನ್ನು ಗೌರವಿಸಲಾಯಿತು.

ಕೂಟ ಮಹಾಜಗತ್ತಿನ ಕೇಂದ್ರ ಸಂಸ್ಥೆಯ ಅಧ್ಯಕ್ಷ ಎಚ್.ಸತೀಶ ಹಂದೆ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಆಡಳಿತ ಮಂಡಳಿಯ ಉಪಾಧ್ಯಕ್ಷ ಸಿ.ಚಂದ್ರಶೇಖರ ಉಪಾಧ್ಯ ಅವರು ಶಿಬಿರದ ವರದಿ ಮಂಡಿಸಿದರು. ಸಹ ಪ್ರಬಂಧಕ ಗಣೇಶ ಭಟ್ ಬಹುಮಾನಿತರ ಪಟ್ಟಿ ಓದಿದರು. ನಿಗಮಾಗಮ ಶಾಲೆಯ ಅಧ್ಯಾಪಕ ವಾದಿರಾಜ ಐತಾಳ, ವೇದಿಕೆಯಲ್ಲಿ ಆಡಳಿತ ಮಂಡಳಿಯ ಪೂರ್ವ ಅಧ್ಯಕ್ಷ ಎ.ಜಗದೀಶ ಕಾರಂತ, ಉದ್ಯಮಿ ರಘುನಾಥ ಸೋಮಯಾಜಿ, ಆಡಳಿತ ಮಂಡಳಿಯ ಸದಸ್ಯ ಕೆ.ತಾರಾನಾಥ ಹೊಳ್ಳ, ಚಂದ್ರಶೇಖರ ನಾವುಡ, ಪ್ರಸನ್ನ ತುಂಗ, ಸಾಲಿಗ್ರಾಮ ಅಂಗಸಂಸ್ಥೆಯ ಕಾರ್ಯದರ್ಶಿ ಮಹಾಬಲ ಹೇರ್ಳೆ ಉಪಸ್ಥಿತರಿದ್ದರು.

ದೇವಸ್ಥಾನದ ಆಡಳಿತ ಮಂಡಳಿಯ ಕಾರ್ಯದರ್ಶಿ ಪರಶುರಾಮ ಭಟ್ ವಂದಿಸಿದರು. ಸಹಾಯಕ ಸಿಬ್ಬಂದಿ ಅಖಿಲೇಶ ಐತಾಳ ಕಾರ್ಯಕ್ರಮ ನಿರ್ವಹಿಸಿದರು. ಶಿಬಿರಾರ್ಥಿಗಳ ವೇದಘೋಷದೊಂದಿಗೆ ಆರಂಭವಾದ ಕಾರ್ಯಕ್ರಮವು ಸಾಮೂಹಿಕ ಐಕ್ಯಮಂತ್ರ ಪಠಣದೊಂದಿಗೆ ಮುಕ್ತಾಯಗೊಂಡಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-28-381119200

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.