ಚಡಚಣ: ‘ಪರೋಪಕಾರವೇ ಮಾನವ ಜೀವನದ ಉನ್ನತಿಗೆ ರಹದಾರಿ. ಅದುವೇ ನಿಜವಾದ ಧರ್ಮ. ತಾನು ಎಲ್ಲರಿಗಾಗಿ ಅನ್ನುವುದೇ ಧರ್ಮ ಮಾರ್ಗ’ ಎಂದು ಬಾಳೆಹೊನ್ನೂರು ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಶ್ರೀ ಹೇಳಿದರು.

ಸಮೀಪದ ಹಾವಿನಾಳ ಗ್ರಾಮದ ಚರಮೂರ್ತಿ ಮಠದ ಪೀಠಾಧ್ಯಕ್ಷ ಗುರು ವಿಜಯಮಹಾಂತೇಶ್ವರ ಶಿವಾಚಾರ್ಯರ ದ್ವಾದಶ ಪಟ್ಟಾಧಿಕಾರ ವರ್ಧಂತಿ ಮಹೋತ್ಸವ, ತುಲಾಭಾರ ಮತ್ತು ಪುರಾಣ ಮಹಾಮಂಗಲ ಸಮಾರಂಭದ ಅಂಗವಾಗಿ ಬುಧವಾರ ನಡೆದ ಅಡ್ಡಪಲ್ಲಕ್ಕಿ ಮಹೋತ್ಸವ, ಧರ್ಮ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

‘ಭಾರತ ಭೂಮಿಯಲ್ಲಿನ ಎಲ್ಲ ಧರ್ಮಗಳು ಮಾನವೀಯ ಮೌಲ್ಯಗಳನ್ನು ಸರಿದಾರಿಯಲ್ಲಿರಿಸಿ ಜನಮನಕ್ಕೆ ಬೆಳಕನ್ನು ನೀಡಿ ಉದ್ಧರಿಸಿವೆ. ಮಾನವ ಧರ್ಮ ಪರಿಪಾಲನೆಯಿಂದ ಎಲ್ಲ ಧರ್ಮಗಳು ಉಳಿದು ಬೆಳೆಯಲು ಸಾಧ್ಯ’ ಎಂದು ಹೇಳಿದರು.

ಚರಮೂರ್ತಿ ಮಠದಲ್ಲಿ ಗುರುಕುಲ ತೆರೆದರೆ ಬಾಳೆಹೊನ್ನೂರಿನ ರಂಭಾಪುರಿ ಪೀಠದಿಂದ ₹1 ಲಕ್ಷ ನೀಡುವುದಾಗಿ ಅವರು ಘೋಷಣೆ ಮಾಡಿದರು.

ವಿಜಯಮಹಾಂತೇಶ್ವರ ಶಿವಾಚಾರ್ಯರು ನೇತೃತ್ವ ವಹಿಸಿದ್ದರು. ಚಿಟಗುಪ್ಪಾದ ಗುರುಲಿಂಗ ಶಿವಾಚಾರ್ಯ, ಹಿರೂರ-ತಾಳಿಕೋಟ ಹಿರೇಮಠದ ಜಯಸಿದ್ಧೇಶ್ವರ ಶೀವಾಚಾರ್ಯ, ಆಲಮೇಲದ ಚಂದ್ರಶೇಖರ ಶಿವಾಚಾರ್ಯ, ತಡವಲಗಾದ ರಾಚೋಟೇಶ್ವರ ಶಿವಾಚಾರ್ಯ, ರಾಣೆಬೆನ್ನೂರಿನ ಶಿವಯೋಗಿ ಶಿವಾಚಾರ್ಯ, ಗುಡ್ಡಾಪೂರದ ಗುರುಪಾದ ಶಿವಾಚಾರ್ಯ ಆಶೀರ್ವಚನ ನೀಡಿದರು.

ಧರ್ಮ ಸಭೆಗೂ ಮುನ್ನ ಬಾಳೆಹೊನ್ನೂರು ರಂಭಾಪುರಿ ಪೀಠದ ಜಗದ್ಗುರು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯರ ಅಡ್ಡ ಪಲ್ಲಕ್ಕಿಮಹೋತ್ಸವ ಗ್ರಾಮದ ಪ್ರಮುಖ ಬೀದಿಗಳಲ್ಲಿ ಜರುಗಿತು. ಕಲಶ ಹೊತ್ತ ಮಹಿಳೆಯರು, ವಾದ್ಯಮೇಳ ಕಲಾ ತಂಡದವರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260522-26-1652553970

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.