ಸಂತೇಮರಹಳ್ಳಿ: ಸಮೀಪದ ಕುದೇರು ಗ್ರಾಮದ ಡಾ. ಬಿ.ಆರ್.ಅಂಬೇಡ್ಕರ್ ಸೇವಾ ಸಂಘದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜಯಂತಿ ದಿನವನ್ನು ಈಚೆಗೆ ಆಚರಿಸಲಾಯಿತು.

ಗ್ರಾಮದ ಸಂಘದ ಆವರಣದಲ್ಲಿ ಬೆಳ್ಳಿರಥ ಹಾಗೂ ಎತ್ತಿನ ಗಾಡಿಯಲ್ಲಿ ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಗಳನ್ನು ಇಟ್ಟು ವಿವಿಧ ಬಗೆಯ ಹೂಗಳಿಂದ ಅಲಂಕರಿಸಲಾಗಿತ್ತು. ಗ್ರಾಮದ ಮುಖ್ಯ ರಸ್ತೆಯಲ್ಲಿ ಬ್ಯಾಂಡ್ಸೆಟ್, ವಾದ್ಯಮೇಳಗಳು ಹಾಗೂ ಕಲಾತಂಡಗಳ ಮೂಲಕ ಮೆರವಣಿಗೆ ಮಾಡಲಾಯಿತು.

ಮೆರವಣಿಗೆ ಸಾಗುವ ದಾರಿಯುದ್ದಕ್ಕೂ ಮಹಿಳೆಯರು ಬಣ್ಣದ ರಂಗೋಲಿ ಹಾಕಿ ಸ್ವಾಗತ ಕೋರಿ ಸರತಿ ಸಾಲಿನಲ್ಲಿ ನಿಂತು ಪುಷ್ಪನಮನ ಸಲ್ಲಿಸುವ ಮೂಲಕ ದರ್ಶನ ಪಡೆದರು.

ಗ್ರಾಮದ ಪ್ರಮುಖ ಬೀದಿಗಳನ್ನು ತಳಿರು ತೊರಣ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು. ಜಯಂತಿ ನಿಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಅನ್ನಸಂತರ್ಪಣೆ ನಡೆಯಿತು.

ಮೆರವಣಿಗೆಯಲ್ಲಿ ಸಂಘದ ಪದಾಧಿಕಾರಿಗಳು, ಯಜಮಾನರು, ಗ್ರಾಮ ಪಂಚಾಯಿತಿ ಮಾಜಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260418-37-1658929807

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.