ಚಾಮರಾಜನಗರ: ಬುದ್ಧ ಧಮ್ಮ ಹಾಗೂ ಡಾ. ಬಿ.ಆರ್.ಅಂಬೇಡ್ಕರ್ ವಿಚಾರಧಾರೆಗಳು ನಾಣ್ಯದ ಎರಡು ಮುಖಗಳಿದ್ದಂತೆ. ಬುದ್ಧರು ಶೀಲ, ಸಮಾಧಿ, ಪ್ರಜ್ಞೆ ತತ್ವಗಳನ್ನು ಪ್ರತಿಪಾದಿಸಿದರೆ, ಅಂಬೇಡ್ಕರ್ ಶಿಕ್ಷಣ, ಸಂಘಟನೆ, ಹೋರಾಟ ಸಿದ್ದಾಂತಗಳನ್ನು ಪ್ರತಿಪಾದನೆ ಮಾಡಿದರು ಎಂದು ಮೈಸೂರು ಕೆ.ಆರ್.ಆಸ್ಪತ್ರೆಯ ತಜ್ಞ ವೈದ್ಯ ಡಾ.ಡಿ.ಜಗನ್ನಾಥ್ ಹೇಳಿದರು.

ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ದಿನಾಚರಣೆ ಅಂಗವಾಗಿ ನಗರದ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಚಾರ ಸಂಕಿರಣದ ಗೋಷ್ಠಿಯಲ್ಲಿ ಅವರು ಮಾತನಾಡಿದರು.

ಇಬ್ಬರ ತತ್ವ–ಸಿದ್ಧಾಂತಗಳಿಗೂ ಸಾಮ್ಯತೆ ಇದ್ದು, ನೈತಿಕ ಮೌಲ್ಯಗಳನ್ನು ರೂಢಿಸಿಕೊಳ್ಳುವುದೇ ನಿಜವಾದ ಶಿಕ್ಷಣವಾಗಿದೆ. ಶೀಲವಿಲ್ಲದ ಶಿಕ್ಷಣ ವ್ಯರ್ಥವಾಗಿದ್ದು, ಪ್ರಜ್ಞಾವಂತರು ಹೋರಾಟ ರೂಪಿಸಿ ಜನರನ್ನು ಅಜ್ಞಾನದ ಕೂಪದಿಂದ ಹೊರಬರು ವಂತೆ ಪ್ರೇರೇಪಿಸಬೇಕು ಎಂದರು

ಬುದ್ಧನ ಪಂಚಶೀಲ ತತ್ವಗಳನ್ನು ಎಲ್ಲರೂ ಅನುಸರಿಸಬೇಕು, ದೇಹ ಮತ್ತು ಮನಸ್ಸು ನಿಯಂತ್ರಣದಲ್ಲಿರಬೇಕು, ಬುದ್ಧನ ಚಿಂತನೆಗಳು ಸಾಮಾಜಿಕ ಸಾಮರಸ್ಯಕ್ಕೆ ಕಾರಣವಾಗಲಿವೆ. ಅಂಬೇಡ್ಕರ್ ಚಿಂತನೆಗಳಲ್ಲಿ ಸಾಮಾಜಿಕ ನ್ಯಾಯ ಪ್ರಧಾನವಾಗಿದೆ. ಬುದ್ಧ ಹಾಗೂ ಅಂಬೇಡ್ಕರ್ ಚಿಂತನೆಗಳು ಸ್ವಸ್ಥ ಸಮಾಜ ನಿರ್ಮಾಣ ಮಾಡಲು ದಾರಿದೀಪವಾಗಿವೆ ಎಂದು ತಿಳಿಸಿದರು.

ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಇಲಾಖೆಯ ಭಾಷಾಂತರ ನಿರ್ದೇಶನಾಲಯದ ನಿರ್ದೇಶಕ ಎಂ.ವೆಂಕಟೇಶ್ ಮಾತನಾಡಿ, ಸಂವಿಧಾನ ಭಾರತದ ತಾಯಿಬೇರಾಗಿದ್ದು, ಅಂಬೇಡ್ಕರ್ ಅವರನ್ನು ಅರಿಯುವ ಮೊದಲು ದೇಶದ ಪ್ರತಿಯೊಬ್ಬ ಜವಾಬ್ದಾರಿಯುತ ನಾಗರಿಕ ಸಂವಿಧಾನವನ್ನು ಓದಿ ಅರ್ಥೈಸಿಕೊಳ್ಳಬೇಕು ಎಂದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-37-915908261

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.