ಚಾಮರಾಜನಗರ: ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ವತಿಯಿಂದ ಏ.24ರಿಂದ 26ರವರೆಗೆ ಬೆಂಗಳೂರಿನಲ್ಲಿ ವಿಶ್ವಕರ್ಮ ವಧು-ವರರ ಅನ್ವೇಷಣಾ ಸಮಾವೇಶ ಹಾಗೂ 3ನೇ ರಾಜ್ಯ ಮಟ್ಟದ ವಧುವರರ ಸಮಾವೇಶ ಆಯೋಜಿಸಲಾಗಿದೆ ಎಂದು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ಜಿಲ್ಲಾಧ್ಯಕ್ಷ ಮಂಜುನಾಥಾಚಾರಿ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಮಹಾಸಭಾದ ರಾಜ್ಯಾಧ್ಯಕ್ಷ ಕೆ.ಪಿ.ನಂಜುಂಡಿ ವಿಶ್ವಕರ್ಮ ಅವರ ಅಧ್ಯಕ್ಷತೆಯಲ್ಲಿ, ಸಮಾಜದ ಶ್ರೀಗಳು, ಮುಖಂಡರ ಸಮ್ಮುಖದಲ್ಲಿ ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಗುರುರಾಜ ಕಲ್ಯಾಣ ಮಂಟಪದಲ್ಲಿ ವಧುವರರ ಸಮಾವೇಶ ನಡೆಯಲಿದೆ ಎಂದರು.

ಬೆಳಿಗ್ಗೆ 11ಗಂಟೆಯಿಂದ ಸಂಜೆ 7ಗಂಟೆಯವರೆಗೆ ಕಾರ್ಯಕ್ರಮ ನಡೆಯಲಿದೆ. ವಿಧವೆಯರು, ವಿಧುರರು ಮತ್ತು ವಿಚ್ಛೇದಿತರಿಗೂ ಭಾಗವಹಿಸಲು ಅವಕಾಶ ಇದೆ. ರಾಜ್ಯದಾದ್ಯಂತ ಸಮುದಾಯದ ಬಂಧುಗಳು ಭಾಗವಹಿಸುತ್ತಿದ್ದು ಚಾಮರಾಜನಗರ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

ಮಹಾಸಭಾ ಜಿಲ್ಲಾ ಉಪಾಧ್ಯಕ್ಷ ನಾಗೇಂದ್ರ ಆಚಾರ್, ಹರದನಹಳ್ಳಿಯ ಹೋಬಳಿ ಅಧ್ಯಕ್ಷ ಸುಬ್ರಹ್ಮಣ್ಯಚಾರ್, ಉಪಾಧ್ಯಕ್ಷ ಚನ್ನಾಚಾರಿ, ಚಂದಕವಾಡಿ ಹೋಬಳಿ ಅಧ್ಯಕ್ಷ ಆರ್.ಕೆಂಪರಾಜು, ಹರವೆ ಹೋಬಳಿ ಅಧ್ಯಕ್ಷ ಟಿ.ಕೆ.ವಾಸು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260417-37-1731461985

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.