ಚನ್ನಗಿರಿ: ‘12ನೇ ಶತಮಾನದಲ್ಲಿ ಬಸವಣ್ಣನವರ ನೇತೃತ್ವದಲ್ಲಿ ನಡೆದ ಕ್ರಾಂತಿ ಕೇವಲ ಒಂದು ಧಾರ್ಮಿಕ ಬದಲಾವಣೆಯಲ್ಲ. ಅದು ಜಾತಿ, ಧರ್ಮವನ್ನು ಮೀರಿ ನಿಂತ ಜಾಗತಿಕ, ಸಂಸ್ಕೃತಿ ಹಾಗೂ ವಿಶ್ವ ಮಾನವ ಚಳವಳಿ’ ಎಂದು ತಾವರೆಕೆರೆ ಶಿಲಾಮಠದ ಅಭಿನವ ಸಿದ್ಧಲಿಂಗ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತ, ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕ ಹಾಗೂ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಸಹಯೋಗದಲ್ಲಿ ಸೋಮವಾರ ನಡೆದ ವಿಶ್ವಗುರು ಬಸವೇಶ್ವರರ ಜಯಂತ್ಯುತ್ಸವವನ್ನು ಉದ್ಘಾಟಿಸಿ ಮಾತನಾಡಿದರು.

ಲಿಂಗಾಯತ ತತ್ವವನ್ನು ಒಂದು ಸಾಮಾಜಿಕ ವರ್ಗ ಅಥವಾ ಜಾತಿಯಾಗಿ ಸೀಮಿತಗೊಳಿಸುವುದು ವಿಶಾಲ ಸಿದ್ಧಾಂತಕ್ಕೆ ಮಾಡುವ ಅನ್ಯಾಯವಾಗುತ್ತದೆ. ವೀರಶೈವ ಲಿಂಗಾಯತ ಧರ್ಮ ಜಗತ್ತಿನ ಮಾನವ ಕುಲದ ಆಸ್ತಿಯಾಗಬೇಕು. ಸಂಸ್ಕೃತಿಯನ್ನು ಗೋಡೆಗಳ ಮಧ್ಯೆ ಬಂಧಿಸುವುದು ಬೇಡ ಎಂದರು.

ತಹಶೀಲ್ದಾರ್ ಎನ್.ಜೆ. ನಾಗರಾಜ್, ತಾಲ್ಲೂಕು ಪಂಚಾಯಿತಿ ಇಒ ಎಂ.ಆರ್. ಪ್ರಕಾಶ್, ಪುರಸಭೆ ಮುಖ್ಯಾಧಿಕಾರಿ ಜೆ.ವಿ. ಮಂಜುನಾಥ್, ಬಿಆರ್ಸಿ ಎಸ್. ಶಂಕರಪ್ಪ, ಜಾಗತಿಕ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಎಂ. ರಾಜಪ್ಪ, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಕಾಶ್, ಎಚ್.ಎಸ್. ಮಲ್ಲಿಕಾರ್ಜುನಪ್ಪ, ಎಂ.ಯು. ಚನ್ನಬಸಪ್ಪ, ವೀರಶೈವ ಸಮಾಜದ ತಾಲ್ಲೂಕು ಘಟಕದ ಅಧ್ಯಕ್ಷ ಚ.ಮ. ಗುರುಸಿದ್ಧಯ್ಯ ಉಪಸ್ಥಿತರಿದ್ದರು.

ಹಾಲಸ್ವಾಮಿ ವಿರಕ್ತ ಮಠದ ಬಸವಜಯಚಂದ್ರ ಸ್ವಾಮೀಜಿ, ಕೇದಾರಲಿಂಗ ಹಿರೇಮಠದ ಶಿವಶಾಂತವೀರ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-43-300092006

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.