ಚನ್ನಪಟ್ಟಣ: ವಿಶ್ವಕ್ಕೆ ದಾರಿದೀಪವಾಗಿರುವ ಶ್ರೇಷ್ಠ ಪರಂಪರೆ ಹೊಂದಿರುವ ಭಾರತೀಯ ಸಂಸ್ಕೃತಿ ಉಳಿಸಬೇಕಾಗಿದೆ ಎಂದು ಬೇವೂರು ಮಲ್ಲಿಕಾರ್ಜುನ ಮಠದ ಮೃತ್ಯುಂಜಯ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯಪಟ್ಟರು.

ನಗರದ ಶತಮಾನೋತ್ಸವ ಭವನದಲ್ಲಿ ಭಾರತ ವಿಕಾಸ ಪರಿಷತ್ ಕಣ್ವ ಶಾಖೆ ವತಿಯಿಂದ ಶುಕ್ರವಾರ ಆಯೋಜಿಸಿದ್ದ 2026-27ನೇ ಸಾಲಿನ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ, ಪ್ರತಿಭಾ ಪುರಸ್ಕಾರ, ಕೌಟುಂಬಿಕ ಸಭೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಮಕ್ಕಳಲ್ಲಿ ಉತ್ತಮ ಸಂಸ್ಕೃತಿ ಮತ್ತು ಮೌಲ್ಯ ಬೆಳೆಸುವ ಜವಾಬ್ದಾರಿ ಕುಟುಂಬ ಹಾಗೂ ಸಮಾಜದ ಮೇಲಿದೆ. ಸಂಸ್ಕಾರವಿಲ್ಲದ ಶಿಕ್ಷಣ ಅಪೂರ್ಣ. ಸಂಸ್ಕೃತಿ ಉಳಿದಾಗಲೇ ಸಮಾಜದಲ್ಲಿ ಶಾಂತಿ, ಸೌಹಾರ್ದ ಮತ್ತು ಮಾನವೀಯತೆ ಬೆಳೆಯಲು ಸಾಧ್ಯ ಎಂದರು.

ನಗರಸಭೆ ಅಧ್ಯಕ್ಷ ಬಿ.ಎಂ.ನಾಗೇಶ್ ಮಾತನಾಡಿ, ಇಂದಿನ ಯುವಜನರು ಸಮಾಜಮುಖಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವ ಅಗತ್ಯ ಹೆಚ್ಚಿದೆ ಎಂದರು.

ಭಾವಿಪ ಕರ್ನಾಟಕ ದಕ್ಷಿಣ ಪ್ರಾಂತ್ಯ ವಿಭಾಗೀಯ ಸಂಪರ್ಕ ಸಂಚಾಲಕ ಗುರುನಾಥ ರಾವ್ ನೂತನ ಪದಾಧಿಕಾರಿಗಳಿಗೆ ದಾಯಿತ್ವ ಬೋಧನೆ ಮಾಡಿದರು. ಭಾ.ವಿ.ಪ ಕಣ್ವ ಶಾಖೆ ಅಧ್ಯಕ್ಷ ಪುಟ್ಟಸ್ವಾಮಿಗೌಡ ಅಧ್ಯಕ್ಷತೆ ವಹಿಸಿದ್ದರು. ಭಾ.ವಿ.ಪ ದಕ್ಷಿಣ ಪ್ರಾಂತ್ಯ ಸಂಘಟನಾ ಕಾರ್ಯದರ್ಶಿ ವಸಂತ್ ಕುಮಾರ್, ಭಾವಿಪ ಪ್ರಾಂತ್ಯ ಉಪಾಧ್ಯಕ್ಷ ಗುರುಮಾದಯ್ಯ, ಗೌರವಾಧ್ಯಕ್ಷ ಬಿ.ಎನ್.ಕಾಡಯ್ಯ, ಹಿರಿಯ ರಂಗಭೂಮಿ ಕಲಾವಿದ ಗೋಪಾಲಗೌಡ, ವಿವಿಧ ತಾಲ್ಲೂಕು ಅಧ್ಯಕ್ಷ ಡಿ.ಪಿ.ಸ್ವಾಮಿ, ಕೆ.ಎಸ್.ರಾಜು, ಚಂದ್ರಶೇಖರ್, ಉಪಾಧ್ಯಕ್ಷ ಕರಿಯಪ್ಪ, ಜಯಲಕ್ಷ್ಮಮ್ಮ, ಕಾರ್ಯದರ್ಶಿ ಯೋಗೇಶ್ ಚಕ್ಕೆರೆ, ಖಜಾಂಚಿ ವಿ.ಟಿ.ರಮೇಶ್ ಇತರರು ಭಾಗವಹಿಸಿದ್ದರು.ಎಸ್ಸೆಸ್ಸೆಲ್ಸಿ ಹಾಗೂ ದ್ವಿತೀಯ ಪಿಯು ಪರೀಕ್ಷೆಗಳಲ್ಲಿ ತಾಲ್ಲೂಕಿಗೆ ಅತಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳು ಹಾಗೂ ಭಾವಿಪ ಸದಸ್ಯರ ಪ್ರತಿಭಾವಂತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ನೀಡಲಾಯಿತು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260524-14-638900800

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.