ತರೀಕೆರೆ: ‘ಮಕ್ಕಳಿಗೆ ಉತ್ತಮ ಶಿಕ್ಷಣ ಮತ್ತು ಸಂಸ್ಕಾರ ನೀಡಬೇಕು. ಸಂಘಟನೆ ಸಧೃಢವಾಗಿದ್ದರೆ ಎಲ್ಲವೂ ಸಾಧ್ಯ. ತ್ಯಾಗದಲ್ಲಿ ನೆಮ್ಮದಿ ಇದೆ ಎಂಬುದನ್ನು ಅರಿತುಕೊಳ್ಳಬೇಕು’ ಎಂದು ಬೆಂಗಳೂರಿನ ಗವಿಪುರ ಗೋಸಾಯಿ ಮಹಾ ಸಂಸ್ಥಾನ ಭವಾನಿ ಮಹಾಪೀಠದ ವೇದಾಂತಾಚಾರ್ಯ ಮಂಜುನಾಥ ಭಾರತಿ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ರಂಗೇನಹಳ್ಳಿ ಗ್ರಾಮದ ಶ್ರೀಅಂಬಾಭವಾನಿ ಸಮುದಾಯ ಭವನದಲ್ಲಿ ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್, ಚಿಕ್ಕಮಗಳೂರು ಜಿಲ್ಲಾ ಘಟಕ ಆಯೋಜಿಸಿದ್ದ ಜಿಲ್ಲಾ ಘಟಕದ ಸುವರ್ಣ ಮಹೋತ್ಸವ ವರ್ಷ, ಛತ್ರಪತಿ ಶಿವಾಜಿ ಮಹಾರಾಜರ 399ನೇ ಜಯಂತ್ಯುತ್ಸವ, ಅಭಿನಂದನಾ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ತಿನ ರಾಜ್ಯ ಲೆಕ್ಕ ಪರಿಶೋಧಕ ಎಚ್. ವಿಶ್ವನಾಥ್ ಮಾತನಾಡಿ, ಶಿವಾಜಿ ಮಹಾರಾಜರ ಪ್ರತಿಮೆ ಸ್ಥಾಪಿಸಲು ಸ್ಥಳಾವಕಾಶ ನೀಡುವ ಜೊತೆಗೆ ಅಂಬಾಭವಾನಿ ಸಮುದಾಯ ಭವನದ ಅಭಿವೃದ್ಧಿ ಕಾರ್ಯಗಳಿಗೆ ₹10 ಲಕ್ಷ ನೆರವು ನೀಡುವುದಾಗಿ ಶಾಸಕ ಜಿ.ಎಚ್. ಶ್ರೀನಿವಾಸ್ ಭರವಸೆ ನೀಡಿದ್ದಾರೆ. ಪರಿಷತ್ಗೆ 50 ವರ್ಷ ತುಂಬಿದ್ದು, ಉತ್ತಮ ನಾಯಕತ್ವ ಹೊಂದಿದೆ ಎಂದು ತಿಳಿಸಿದರು.

ಕರ್ನಾಟಕ ಕ್ಷತ್ರಿಯ ಮರಾಠ ಪರಿಷತ್ ರಾಜ್ಯ ಘಟಕದ ಅಧ್ಯಕ್ಷ ಸುರೇಶ್ರಾವ್ ಸಾಠೆ ಮಾತನಾಡಿ, ಬೆಂಗಳೂರಿನ ಮರಾಠ ವಿದ್ಯಾರ್ಥಿ ನಿಲಯದಲ್ಲಿ ಉನ್ನತ ವ್ಯಾಸಂಗ ಮಾಡುವ 150 ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಕಲ್ಪಿಸಲಾಗುತ್ತಿದೆ. ಉನ್ನತ ವ್ಯಾಸಂಗಕ್ಕೆ ನೆರವು ಒದಗಿಸುತ್ತಿದ್ದು, ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಪರಿಷತ್ ಬೆಂಬಲ ನೀಡುತ್ತಿದೆ ಎಂದರು.

ಪರಿಷತ್ನ ಚಿಕ್ಕಮಗಳೂರು ಜಿಲ್ಲಾ ಘಟಕದ ಅಧ್ಯಕ್ಷ, ಮಾಜಿ ಸೈನಿಕ ಶ್ರೀನಿವಾಸ್ರಾವ್ ಮದನೆ ಅಧ್ಯಕ್ಷತೆ ವಹಿಸಿದ್ದರು. ರಾಜ್ಯ ಖಜಾಂಚಿ ಟಿ.ಆರ್. ವೆಂಕಟರಾವ್ ಚವ್ಹಾಣ್ ಮಾತನಾಡಿದರು.

ತರೀಕೆರೆ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್ ಚವ್ಹಾಣ್, ಅಜ್ಜಂಪುರ ತಾಲ್ಲೂಕು ಘಟಕದ ಅಧ್ಯಕ್ಷ ಗಿರೀಶ್ ಚವ್ಹಾಣ್, ಮುಖಂಡರಾದ ಎಚ್.ಟಿ. ರಘುವೀರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260528-126-1118382156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.