ಚಿತ್ರದುರ್ಗ: ‘ಬಸವಣ್ಣನವರ ಜಯಂತಿ ಆಚರಿಸುವುದು ದೊಡ್ಡ ಮಾತಲ್ಲ. ಆದರೆ, ಅವರ ತತ್ವಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ’ ಎಂದು ಎಸ್ಜೆಎಂ ವಿದ್ಯಾಪೀಠದ ಆಡಳಿತ ಮಂಡಳಿ ಸದಸ್ಯ ಬಸವಕುಮಾರ ಸ್ವಾಮೀಜಿ ತಿಳಿಸಿದರು.

ನಗರದ ಈಶ್ವರೀಯ ವಿದ್ಯಾಲಯದಲ್ಲಿ ಬಸವ ಜಯಂತಿ ಅಂಗವಾಗಿ ಶನಿವಾರ ಹಮ್ಮಿಕೊಂಡಿದ್ದ ವಿವಿಧ ಸ್ಪರ್ಧೆಗಳಿಗೆ ಚಾಲನೆ ನೀಡಿ ಮಾತನಾಡಿದರು. ‘ಬಸವೇಶ್ವರರ ಹಾದಿಯಲ್ಲಿ ಬ್ರಹ್ಮಕುಮಾರಿಯರು ಸಾಗುತ್ತಿದ್ದಾರೆ. ಈ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ರವಾನೆ ಮಾಡುತ್ತಿದ್ದಾರೆ’ ಎಂದರು.

‘ಪ್ರತಿಯೊಬ್ಬರನ್ನು ಸಹೋದರತ್ವ ಭಾವನೆಯಿಂದ ನೋಡಬೇಕು. ಈ ಕಾರ್ಯವನ್ನು ಈಶ್ವರೀಯ ವಿದ್ಯಾಲಯ ಮಾಡುತ್ತಿದೆ. ಏಕದೇವೋಪಾಸನೆಯ ತತ್ವವನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

‘ವಿಶ್ವದ ನೂರಾರು ದೇಶಗಳಲ್ಲಿ ಸೇವಾ ಕೇಂದ್ರಗಳ ಮೂಲಕ ಜ್ಞಾನ ಮತ್ತು ಧ್ಯಾನದ ಮೂಲಕ ಶಾಂತಿ ಪಸರಿಸುವ ಕಾರ್ಯವನ್ನು ಬ್ರಹ್ಮಕುಮಾರಿಯರು ಮಾಡುತ್ತಿದ್ದಾರೆ. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಮುಂದಾಗಿದ್ದಾರೆ’ ಎಂದರು.

‘ಬಸವಣ್ಣನವರು 12ನೇ ಶತಮಾನದಲ್ಲಿ ಮಹಿಳೆಯರಿಗೆ ಸಮಾನತೆಯ ಸ್ವಾತಂತ್ರ್ಯ ಕೊಟ್ಟರು. ಆ ಕಾರಣದಿಂದಲೇ 21ನೇ ಶತಮಾನದಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲೂ ಸಾಧನೆ ಮಾಡುತ್ತಿದ್ದಾರೆ. ಇದು ಬಸವಣ್ಣನವರ ವಿಶೇಷತೆ’ ಎಂದು ಶಿವಶರಣ ಮಾದಾರ ಚನ್ನಯ್ಯ ಗುರುಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಸ್ವಾಮೀಜಿ ತಿಳಿಸಿದರು.

ಶಾರದಾ ರಾಮಕೃಷ್ಣ ಆಶ್ರಮದ ಬ್ರಹ್ಮನಿಷ್ಠಾನಂದ, ಉಜ್ಜಿನಿ ಶಾಖಾಮಠದ ಅಭಿಷೇಕ ದೇವರು, ಬ್ರಹ್ಮಕುಮಾರಿ ಶಿವ ರಶ್ಮಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260420-44-1679986695

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.