ಜಗಳೂರು: ‘ಗೊಲ್ಲರಹಟ್ಟಿಗಳಲ್ಲಿ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಮೌಢ್ಯಮುಕ್ತ ಸಮಾಜ ನಿರ್ಮಿಸುವ ನಿಟ್ಟಿನಲ್ಲಿ ಎಲ್ಲರೂ ಕೈಜೋಡಿಸಬೇಕು’ ಎಂದು ಚಿತ್ರದುರ್ಗದ ಯಾದವ ಮಹಾಸಂಸ್ಥಾನದ ಯಾದವಾನಂದ ಸ್ವಾಮೀಜಿ ಸಲಹೆ ನೀಡಿದರು.

ತಾಲ್ಲೂಕಿನ ಚಿಕ್ಕ ಬನ್ನಿಹಟ್ಟಿ ಗೊಲ್ಲರಹಟ್ಟಿ ಗ್ರಾಮದಲ್ಲಿ ಗುರುವಾರ ಸಿದ್ದೇಶ್ವರ ಸ್ವಾಮಿ ಮತ್ತು ಕರಿಯಮ್ಮ ದೇವಿಯ ನೂತನ ದೇವಸ್ಥಾನಗಳ ಉದ್ಘಾಟನೆ ಹಾಗೂ ಕಳಸಾರೋಹಣ ಸಮಾರಂಭದಲ್ಲಿ ಅವರು ಮಾತನಡಿದರು.

‘ಆಧ್ಯಾತ್ಮಿಕತೆ ಮೈಗೂಡಿಸಿಕೊಂಡು ಸುಂದರ ಶಿಲಾನ್ಯಾಸದಲ್ಲಿ ದೇವಸ್ಥಾನಗಳ ನಿರ್ಮಾಣ ಆಗುತ್ತಿರುವುದು ಸಂತಸದ ಸಂಗತಿಯಾಗಿದೆ. ದೇವಸ್ಥಾನಗಳು ಆಧುನಿಕತೆಯತ್ತ ಸಾಗಬೇಕು. ಅಧ್ಯಾತ್ಮದ ಜೊತೆಗೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕು. ಸಮುದಾಯ ರಾಜಕೀಯ ಪ್ರಜ್ಞೆ ಮೈಗೂಡಿಸಿಕೊಂಡು ರಾಜಕೀಯ ಸ್ಥಾನಮಾನ ಗಳಿಸಬೇಕು’ ಎಂದು ಹೇಳಿದರು.

‘ತಾಲ್ಲೂಕಿನಲ್ಲಿ ಗೊಲ್ಲರಹಟ್ಟಿಗಳು ಸರ್ವತೋಮುಖ ಬದಲಾವಣೆಯತ್ತ ಸಾಗುತ್ತಿವೆ. ಗ್ರಾಮಗಳಲ್ಲಿ ಸಹೋದರ ಸಮಾಜಗಳ ನಡುವೆ ಸಾಮರಸ್ಯ, ಸಹಬಾಳ್ವೆಯ ಬದುಕು ಸಾಗಿಸಬೇಕು. ಸಮಾಜದಲ್ಲಿ ಪಕ್ಷಾತೀತ ಒಗ್ಗಟ್ಟು ಪ್ರದರ್ಶಿಸಬೇಕು’ ಎಂದರು.

‘ತಾಲ್ಲೂಕಿನಲ್ಲಿ ಯಾದವ ಸಮಾಜದ ಶ್ರೇಯೋಭಿವೃದ್ದಿಗೆ ಶ್ರಮಿಸುತ್ತೇನೆ. ಗ್ರಾಮದ ದೇವಸ್ಥಾನದ ಕಾಂಪೌಂಡ್ ನಿರ್ಮಾಣಕ್ಕೆ ಅನುದಾನ ಕೊಟ್ಟಿದ್ದೇನೆ. ಶೀಘ್ರವೇ ಇಲ್ಲಿ ಸಿಸಿ ರಸ್ತೆ ನಿರ್ಮಾಣ ಮಾಡಲಾಗುವುದು. ಅನುದಾನ ಸದ್ಬಳಕೆ ಮಾಡಿಕೊಂಡು ಶಿಕ್ಷಣ ಪಡೆದು ಮುಖ್ಯವಾಹಿನಿಗೆ ಬರಬೇಕು. ನಾನು ಸ್ವಗ್ರಾಮ ಚಿಕ್ಕಮ್ಮನಹಟ್ಟಿ ಗ್ರಾಮದಲ್ಲಿ ಬಾಲ್ಯದಲ್ಲಿ ಯಾದವ ಸಮಾಜದೊಂದಿಗೆ ಕುರಿಹಾಲು ಸೇವಿಸಿ ಅನ್ಯೋನ್ಯತೆಯಿಂದ ಬೆಳೆದಿದ್ದೇನೆ’ ಎಂದು ಶಾಸಕ ಬಿ. ದೇವೇಂದ್ರಪ್ಪ ಹೇಳಿದರು.

ವಿಧಾನ ಪರಿಷತ್ ಮಾಜಿ ಸದಸ್ಯೆ ಜಯ್ಯಮ್ಮ, ಮಾಜಿ ಶಾಸಕ ಎಚ್.ಪಿ.ರಾಜೇಶ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಕೆ.ಪಿ.ಪಾಲಯ್ಯ, ಮುಖಂಡರಾದ ತಿಪ್ಪೇಸ್ವಾಮಿಗೌಡ, ಹನುಮಂತಾಪುರ ಚಿತ್ತಪ್ಪ, ರಾಮಚಂದ್ರಪ್ಪ, ಹಾಲೇಶ್, ರೇವಣ್ಣ, ತಿಪ್ಪೇಸ್ವಾಮಿ, ಸಣ್ಣಪ್ಪ, ರಮೇಶ್, ಮಹಾಲಿಂಗಪ್ಪ ಎಚ್.ಎಂ. ಹೊಳೆ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260425-43-430802765

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.