ಚಿತ್ತಾಪುರ: ‘ಸ್ವಂತ ಜೀವನದ ಜೊತೆಗೆ ಸಮಾಜದ ಏಳಿಗೆಯ ಮನೋಭಾವನೆ ಬೆಳೆಸಿಕೊಳ್ಳಬೇಕು. ಸಮಾಜದ ಏಳಿಗೆಗೆ ಶ್ರಮಿಸಿದಾಗ ಮಾತ್ರ ಜೀವನ ಸಾರ್ಥಕತೆ ಪಡೆಯುತ್ತದೆ’ ಎಂದು ತಹಶೀಲ್ದಾರ್ ನಾಗಯ್ಯ ಹಿರೇಮಠ ಹೇಳಿದರು.

ಪಟ್ಟಣದಲ್ಲಿನ ತಾಲ್ಲೂಕು ಆಡಳಿತದ ಪ್ರಜಾಸೌಧ ಕಟ್ಟಡ ಆವರಣದಲ್ಲಿ ಮಂಗಳವಾರ ತಾಲ್ಲೂಕು ಆಡಳಿತದಿಂದ ಶಂಕರಾಚಾರ್ಯರ ಜಯಂತಿ ನಿಮಿತ್ತ ಅವರು ಶಂಕರಾಚಾರ್ಯರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಮಾಲಾರ್ಪಣೆ ಮಾಡಿ ಮಾತನಾಡಿದರು.

‘ಮಹಾಪುರುಷರು ಸ್ವಂತ ಜೀವನ, ಬದುಕಿಗೆ ಆದ್ಯತೆ ನೀಡದೆ ಸಮಾಜಕ್ಕಾಗಿ ತಮ್ಮ ಜೀವನವನ್ನೆ ಸಾಮಾಜಿಕ ಕಾರ್ಯಗಳಿಗಾಗಿ ಮುಡಿಪಾಗಿಡುವ ಮೂಲಕ ಜೀವನ ಸಾರ್ಥಕ ಮಾಡಿಕೊಂಡಿದ್ದಾರೆ. ಶಂಕರಾಚಾರ್ಯರ ತತ್ವ, ಸಿದ್ಧಾಂತ ಜೀವನದಲ್ಲಿ ಅಳವಡಿಸಿಕೊಂಡು ಪಾಲಿಸಬೇಕು’ ಎಂದು ಹೇಳಿದರು.

ವಿಪ್ರ ಸಮಾಜದ ಕೋಶಾಧ್ಯಕ್ಷ ಜಯಂತ ಮಾಲಗತ್ತಿ ಮಾತನಾಡಿದರು. ಅಕ್ಷತಾ ಜಾನೀಬ್ ಅವರು ಶಂಕಚಾರ್ಯರ ಜೀವನ ಚರಿತ್ರೆ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಗ್ರೇಡ್ – 2 ತಹಶೀಲ್ದಾರ್ ರಾಜಕುಮಾರ ಮರತೂರಕರ್, ಶಿರಸ್ತೆದಾರ್ ಅಶ್ವಥನಾರಾಯಣ ಕುಲಕರ್ಣಿ, ವಿಪ್ರ ಸಮಾಜದ ಗೌರವಾಧ್ಯಕ್ಷ ದೇವಿದಾಸ ಕುಲಕರ್ಣಿ, ಅಧ್ಯಕ್ಷ ಗಿರೀಶ ಜಾನೀಬ್, ಉಪಾಧ್ಯಕ್ಷ ವಿಶ್ವನಾಥ ಅಫಜಲಪುರಕರ್, ಮುಖಂಡರಾದ ಹಣಮೇಶ ಆಚಾರ್ಯ, ಭೀಮರಾವ ಅಫಜಲಪುರಕರ್, ಗೌತಮ ನಾಯಕ, ಗೋಪಾಲ, ಸುರೇಶ ಕುಲಕರ್ಣಿ, ಗುಂಡೇರಾವ ಸರಾಫ್ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260423-31-2119970256

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.