ದಾವಣಗೆರೆ: ದಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ 45ನೇ ವರ್ಷದ ವಾರ್ಷಿಕೋತ್ಸವ ಹಾಗೂ ಗುರುದೇವ್ ಅವರ 70ನೇ ವರ್ಷದ ಜನ್ಮದಿನದ ಅಂಗವಾಗಿ ನಗರದ ಎಂಸಿಸಿ ‘ಎ’ ಬ್ಲಾಕ್ನ ಸದ್ಯೋಜಾತ ಮಹಾಸ್ವಾಮಿ ಮಠದಲ್ಲಿ ಮೇ 28ರಂದು ಬೆಳಿಗ್ಗೆ 10.30ಕ್ಕೆ ‘ಅನುದಿನದ ತೆರೆಮರೆಯ ಸಾಧಕರಿಗೆ ಪ್ರಶಸ್ತಿ ಸಮಾರಂಭ’ ಹಮ್ಮಿಕೊಳ್ಳಲಾಗಿದೆ ಎಂದು ಆರ್ಟ್ ಆಫ್ ಲಿವಿಂಗ್ನ ಜಿಲ್ಲಾ ಅಭಿವೃದ್ಧಿ ಸಮಿತಿಯ ಸದಸ್ಯ ಇಂದುಧರ್ ನಿಶಾನಿಮಠ ತಿಳಿಸಿದರು.

ದಿ ಆರ್ಟ್ ಆಫ್ ಲಿವಿಂಗ್ನ ಸ್ವಾಮಿ ಶರಣಾನಂದ ಸಾನ್ನಿಧ್ಯ ವಹಿಸಲಿದ್ದಾರೆ. ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಎಸ್ಪಿ ಶೇಖರ್ ಎಚ್.ಟಿ. ಹಾಗೂ ಇನ್ನಿತರ ಗಣ್ಯರು ಭಾಗವಹಿಸಲಿದ್ದಾರೆ ಎಂದರು.

ದಾವಣಗೆರೆಯ ಮಕ್ಕಳ ತಜ್ಞ ಬಾಣಾಪುರಮಠ, ಕ್ರೀಡಾಪಟು ಎಂ.ಮಹೇಶ್ವರಯ್ಯ, ಹಾವೇರಿಯ ವೈದ್ಯ ಬಸವರಾಜು ವೀರಪುರ್, ಭಾರತ ಥ್ರೋಬಾಲ್ ತಂಡದ ಸಂಯೋಜಕಿ, ಗದಗದ ಮಾಲತಿ ಇನಾಮತಿ, ರಾಜೀವ್ಗಾಂಧಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಾಂಶುಪಾಲ ಐ.ಬಿ.ಕೊಟ್ಟೂರುಶೆಟ್ಟಿ, ವಿಶ್ವಕರ್ಮ ಕೌಶಲ ಅಭಿವೃದ್ಧಿ ಸಂಕುಲದ ಮುಖಂಡ, ವಿಜಯನಗರ ಜಿಲ್ಲೆಯ ವಿಜಯರಾಜ್, ಧಾರವಾಡದ ಮಾರುತಿ ಪಾಟೀಲ್ ಅವರನ್ನು ಸನ್ಮಾನಿಸಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾ ಅಭಿವೃದ್ಧಿ ಸಮಿತಿಯ ಸದಸ್ಯರಾದ ರೇವಣಸಿದ್ದಪ್ಪ, ವೆಂಕಟರಮಣರೆಡ್ಡಿ, ಶಿವಕುಮಾರ್, ಸುರೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-43-2103148902

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.