ದಾವಣಗೆರೆ: ‘ಆಧ್ಯಾತ್ಮಿಕ ಕಾರ್ಯದ ಜೊತೆಗೆ ಜಾತಿ, ಧರ್ಮ, ಪಕ್ಷ ಭೇದವಿಲ್ಲದೆ ವಿವಿಧ ಕ್ಷೇತ್ರಗಳ ಸಾಧಕರನ್ನು ಗೌರವಿಸುವುದು ಸಂಸ್ಥೆಯ ಧ್ಯೇಯವಾಗಿದೆ’ ಎಂದು ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಪ್ರಧಾನ ಸಂಚಾಲಕಿ ಬ್ರಹ್ಮಕುಮಾರಿ ಲೀಲಾಜಿ ಹೇಳಿದರು.

ನಗರದ ದೇವರಾಜ ಅರಸು ಬಡಾವಣೆಯ ಶಿವಧ್ಯಾನ ಮಂದಿರದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಿಂದ ಭಾನುವಾರ ಆಯೋಜಿಸಿದ್ದ ಸಾಧಕರಿಗೆ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಸನ್ಮಾನವೆಂದರೆ ಜವಾಬ್ದಾರಿಯ ಕಿರೀಟ. ರಾಜಕೀಯದಲ್ಲಿದ್ದರೂ ಸಂಸ್ಕಾರ ಮತ್ತು ಮೌಲ್ಯಗಳನ್ನು ಕಾಪಾಡಿಕೊಳ್ಳಬೇಕು. ಪೂರ್ವಜನ್ಮದ ಪುಣ್ಯ ಮತ್ತು ಕರ್ಮಫಲದಿಂದ ನಾಯಕತ್ವದ ಸ್ಥಾನ ದೊರೆಯುತ್ತದೆ’ ಎಂದು ಹೇಳಿದರು.

‘ಸಾಧಕರನ್ನು ಗೌರವಿಸುವುದರಲ್ಲಿ ಒಂದು ಅರ್ಥವಿದೆ. ಅದರಲ್ಲೂ ಭಾರತೀಯ ಸಂಸ್ಕೃತಿಯಲ್ಲಿ ಆಶೀರ್ವಾದಕ್ಕೆ ವಿಶೇಷ ಮಹತ್ವವಿದೆ. ಆಶೀರ್ವಾದ ಇದ್ದರೆ ವಿಜಯ, ಇಲ್ಲದಿದ್ದರೆ ಅಪಜಯ. ಹೂವಿನಂತೆ ಸದಾ ಅರಳಬೇಕು. ಉತ್ತಮ ಕಾರ್ಯಗಳ ಮೂಲಕ ಸಮಾಜದಲ್ಲಿ ವಿಭಿನ್ನ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು’ ಎಂದರು.

‘ಸಮಾಜದಲ್ಲಿ ಶಾಂತಿ, ಸಹನೆ ಹಾಗೂ ಸೇವಾ ಮನೋಭಾವ ಬೆಳೆಸಿಕೊಳ್ಳುವುದು ಅಗತ್ಯವಾಗಿದೆ’ ಎಂದು ಕಾರ್ಯಕ್ರಮ ಉದ್ಘಾಟಿಸಿದ, ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅಭಿಪ್ರಾಯಪಟ್ಟರು.

‘ನಾವೆಲ್ಲರೂ ಈಶ್ವರನ ಮಕ್ಕಳು, ಎಲ್ಲರೂ ಒಂದೇ ಎಂಬ ಭಾವನೆ ಬರಬೇಕಿದೆ. ಈಶ್ವರೀಯ ವಿಶ್ವವಿದ್ಯಾಲಯಕ್ಕೆ ಬಂದಾಗ ಸರಸ್ವತಿ ತಾಯಿಯ ಆಶೀರ್ವಾದ ಸಿಕ್ಕಂತಾಗುತ್ತದೆ’ ಎಂದು ಹೇಳಿದರು.

‘ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಓಂ ಶಾಂತಿಯ ಮೌಲ್ಯವನ್ನು ಜೀವನದಲ್ಲಿ ಅಳವಡಿಸಿಕೊಂಡರೆ ಕುಟುಂಬ ಮತ್ತು ಸಮಾಜದಲ್ಲಿ ಶಾಂತಿ ನೆಲೆಸುತ್ತದೆ. ಇಲ್ಲಿಗೆ ಪ್ರತಿ ಬಾರಿ ಬಂದಾಗಲೂ ಹೊಸದಾಗಿ ಏನಾದರೂ ಕಲಿಯಲು ಅವಕಾಶ ಸಿಗುತ್ತದೆ. ಇಲ್ಲಿನ ಆಧ್ಯಾತ್ಮಿಕ ಚಿಂತನೆ ನಮ್ಮನ್ನು ಸತ್ಯ ಮಾರ್ಗಕ್ಕೆ ಕೊಂಡ್ಯೊಯುವಲ್ಲಿ ಸಹಕಾರಿ ಆಗಲಿದೆ’ ಎಂದು ಅಭಿಪ್ರಾಯಪಟ್ಟರು.

ಕನ್ನಡ ಸಾಹಿತ್ಯ ಪರಿಷತ್ನ ಜಿಲ್ಲಾ ಘಟಕದ ಅಧ್ಯಕ್ಷ ಬಿ. ವಾಮದೇವಪ್ಪ, ಭದ್ರಾ ಕಾಲೇಜಿನ ಸಂಸ್ಥಾಪಕ ಪ್ರೊ. ಸಿ.ಎಚ್. ಮುರಿಗೇಂದ್ರಪ್ಪ, ಬಿ.ಎಸ್. ಚನ್ನಬಸಪ್ಪ ಕಾಲೇಜಿನ ಪ್ರಾಚಾರ್ಯ ಎಂ.ಸಿ. ಗುರು, ಪತ್ರಕರ್ತರಾದ ಎಚ್.ಕೆ. ನಟರಾಜ್, ವಿಠ್ಠಲ್ ಕ್ಯಾರವಾಡ, ಪತ್ರಿಕಾ ಛಾಯಾಗ್ರಾಹಕ ವಿವೇಕಾನಂದ ಎಲ್. ಬದ್ದಿ ಅವರನ್ನು ಸನ್ಮಾನಿಸಲಾಯಿತು.

ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಂಜುನಾಥ್ ಏಕಬೋಟೆ ಸ್ವಾಗತಿಸಿದರು. ಬ್ರಹ್ಮಕುಮಾರಿ ಗೀತಕ್ಕ ಕಾರ್ಯಕ್ರಮ ನಿರೂಪಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-43-539362678

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.