ದಾವಣಗೆರೆ: ‘ಮಕ್ಕಳಿಗೆ ಶಿಕ್ಷಣದ ಜೊತೆಗೆ ಸಂಸ್ಕಾರವನ್ನೂ ನೀಡಬೇಕು. ದೇವರು, ಧರ್ಮ, ದೇಗುಲಗಳ ಬಗ್ಗೆ ಅರಿವು ಮೂಡಿಸಬೇಕು’ ಎಂದು ಕೊಪ್ಪಳದ ಆನೇಗುಂದಿ ಮಹಾಸಂಸ್ಥಾನದ ಅಭಿನವ ಶ್ರೀಕಂಠ ಸ್ವಾಮೀಜಿ ಸಲಹೆ ನೀಡಿದರು.

ಇಲ್ಲಿನ ಕಾಳಿಕಾದೇವಿ ರಸ್ತೆಯ ಕಾಳಿಕಾಂಬ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ವಿಶ್ವಕರ್ಮ ಸಮಾಜ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ 43ನೇ ವರ್ಷದ ಸಾಮೂಹಿಕ ಉಪನಯನ ಮತ್ತು ವಿವಾಹ ಮಹೋತ್ಸವದಲ್ಲಿ ಅವರು ಮಾತನಾಡಿದರು.

‘ಮಕ್ಕಳಿಗೆ ಸಂಸ್ಕಾರ ಕೊಡುವುದು ವಿಶ್ವಕರ್ಮ ಬಾಂಧವರ ಕರ್ತವ್ಯ. ಧರ್ಮ, ಗುರುಕುಲ, ಮಠ, ಕುಲದೇವತೆಗಳ ಬಗ್ಗೆ ಅರಿವು ನೀಡಬೇಕು. ಕಾಳಿಕಾಂಬ ಸೇರಿ ಮೂರು ದೇವರುಗಳನ್ನು ಒಂದೇ ದೇಗುಲದಲ್ಲಿ ಪ್ರತಿಷ್ಠಾಪಿಸಿದ ಕಾರ್ಯ ಶ್ಲಾಘನೀಯ’ ಎಂದರು.

ನಸುಕಿನಲ್ಲಿ ನಡೆದ ಸಮಾರಂಭದಲ್ಲಿ 25ಕ್ಕೂ ಹೆಚ್ಚು ವಟುಗಳಿಗೆ ಯಜ್ಯೋಪವೀತ ಧಾರಣೆ ಮಾಡಲಾಯಿತು. ಬಳಿಕ ಬ್ರಹೋಪದೇಶದ ಮೂಲಕ ಸಾಮೂಹಿಕ ಉಪನಯನ ನೆರವೇರಿಸಲಾಯಿತು. ಆ ನಂತರ ಸಾಮೂಹಿಕ ವಿವಾಹ ಮಹೋತ್ಸವದಲ್ಲಿ 2 ಜೋಡಿ ವಧು-ವರರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು.

ಆವರಗೊಳ್ಳ ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ವಿಶ್ವಕರ್ಮ ಸಮಾಜ ಸಂಘದ ಅಧ್ಯಕ್ಷ ಆರ್. ವಿಜಯಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಿಶ್ವಕರ್ಮ ಸಮಾಜದ ಅಧ್ಯಕ್ಷ ಬಸಾಪುರದ ಬಿ.ನಾಗೇಂದ್ರಜಾರ್, ಮೋಹನ್ ಎಸ್. ನರಗುಂದ, ಪ್ರಾಧ್ಯಾಪಕ ಬಿ. ಶ್ರೀಕಂಠಚಾರ್, ಎಚ್.ಪಿ. ರಾಜೇಂದ್ರಚಾರ್, ಮನೋಹರ, ಸಿ.ಪಿ. ಪೂರ್ವಾಚಾರ್, ವಿ.ಎಂ. ಕೊಟ್ರೇಶಾಚಾರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260507-43-668396413

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.