ದಾವಣಗೆರೆ: ಜಗತ್ತು ಸಂಕೀರ್ಣ ಪರಿಸ್ಥಿತಿಯಲ್ಲಿ ಇರುವಾಗ ಅಧ್ಯಾತ್ಮ ಮತ್ತು ಶಂಕರಾಚಾರ್ಯರ ತತ್ವಗಳು ಶಾಂತಿಯನ್ನು ನೀಡಬಲ್ಲವು ಎಂದು ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಅಭಿಪ್ರಾಯಪಟ್ಟರು.

ಇಲ್ಲಿನ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಏರ್ಪಡಿಸಿದ್ದ ಆದಿ ಶಂಕರಾಚಾರ್ಯರ ಜಯಂತಿಯಲ್ಲಿ ಅವರು ಮಾತನಾಡಿದರು.

‘ಭಾರತ ಆಧ್ಯಾತ್ಮಿಕವಾಗಿ ಶ್ರೀಮಂತ ದೇಶ. ಆದಿ ಶಂಕರಾಚಾರ್ಯರ, ಬಸವಣ್ಣ ಸೇರಿದಂತೆ ಅನೇಕ ಮಹನೀಯರು ತೋರಿದ ಮಾರ್ಗದಲ್ಲಿ ಸಮಾಜ ಹೆಜ್ಜೆ ಹಾಕುವ ಅಗತ್ಯವಿದೆ’ ಎಂದರು.

‘ಜಗತ್ತಿನಲ್ಲಿ ಮನುಷ್ಯನಿಗೆ ಅತ್ಯಂತ ಕಠಿಣ ಕೆಲಸವೆಂದರೆ ಮನಸ್ಸಿನ ನಿಯಂತ್ರಣ. ಶಂಕರಾಚಾರ್ಯರ ತತ್ವಗಳನ್ನು ಮತ್ತು ಸ್ತೋತ್ರಗಳನ್ನು ಕೇಳುವುದರಿಂದ ಶಾಂತಿ ಮತ್ತು ಆತ್ಮಸ್ಥೈರ್ಯ ದೊರೆಯುತ್ತದೆ. ಶಂಕರಾಚಾರ್ಯರು ಭಾರತೀಯ ಸನಾತನ ಸಂಸ್ಕೃತಿಗೆ ನೀಡಿದ ಕೊಡುಗೆ ಅನನ್ಯ. ಅವರ ಕೃತಿಗಳು ಮನುಕುಲಕ್ಕೆ ದಾರಿದೀಪವಾಗಿವೆ’ ಎಂದು ಪ್ರತಿಪಾದಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಣಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ‘ಶಂಕರಾಚಾರ್ಯರು ಅದ್ವೈತ ಸಿದ್ಧಾಂತದ ಮೂಲಕ ಸಮಾಜಕ್ಕೆ ಅತ್ಯುತ್ತಮ ಮಾರ್ಗದರ್ಶನ ನೀಡಿದ್ದಾರೆ. ಲಿಂಗ ಸಮಾನತೆ, ಸರ್ವರಿಗೂ ಸಮಾನ ಅವಕಾಶಗಳಿರಬೇಕು ಎಂಬುದು ಅವರ ಆಶಯವಾಗಿತ್ತು. ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿದ್ದರು. ಅವರು ತೋರಿದ ಮಾರ್ಗದಲ್ಲಿ ಸಾಗಬೇಕಿದೆ’ ಎಂದು ಹೇಳಿದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರವಿಚಂದ್ರ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-43-1606185736

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.