ದಾವಣಗೆರೆ: ವಿಶ್ವಕರ್ಮ ಸಮಾಜ ಸಂಘದ ವತಿಯಿಂದ 43ನೇ ವರ್ಷದ ಸಾಮೂಹಿಕ ಉಪನಯನ ಹಾಗೂ ವಿವಾಹ ಮಹೋತ್ಸವವನ್ನು ನಗರದ ಕಾಳಿಕಾದೇವಿ ರಸ್ತೆಯ ಕಾಳಿಕಾಂಬಾ ವಿಶ್ವಕರ್ಮ ಕಲ್ಯಾಣ ಮಂಟಪದಲ್ಲಿ ಮೇ 6ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ವಿ.ಎಂ. ಕೊಟ್ರೇಶಾಚಾರ್ ತಿಳಿಸಿದರು.

‘ಆನೆಗುಂದಿ ಮಹಾಸಂಸ್ಥಾನ ಮಠದ ಅಭಿನವ ಶ್ರೀಕಂಠಸ್ವಾಮಿ ಸಾನ್ನಿಧ್ಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿದೆ. ಮೇ 5ರಂದು ಸಂಜೆ 5.30ಕ್ಕೆ ವಧು-ವರರು ಮತ್ತು ವಟುಗಳು ಕಲ್ಯಾಣ ಮಂಟಪಕ್ಕೆ ಆಗಮಿಸಲಿದ್ದಾರೆ. ಅಂದು ಸಂಜೆ 6.30ಕ್ಕೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ’ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ವಿವರಿಸಿದರು.

‘ಮೇ 6ರಂದು ಬ್ರಹ್ಮೋಪದೇಶ ಹಾಗೂ ಸಾಮೂಹಿಕ ವಿವಾಹ ಜರುಗಲಿದೆ. ಅಂದು ಬೆಳಿಗ್ಗೆ 6.30ರಿಂದ 8.25ರವರೆಗೆ ಉಪನಯನ ಹಾಗೂ 8.30ರಿಂದ ಸಾಮೂಹಿಕ ವಿವಾಹ ನೆರವೇರಲಿದೆ. ಪುರವರ್ಗ ಹಿರೇಮಠದ ಓಂಕಾರ ಶಿವಾಚಾರ್ಯ ಸ್ವಾಮೀಜಿ, ಜವಳಿ ಉದ್ಯಮಿ ಬಿ.ಸಿ. ಉಮಾಪತಿ ಪಾಲ್ಗೊಳ್ಳಲಿದ್ದಾರೆ’ ಎಂದರು.

ವಿಶ್ವಕರ್ಮ ಸಮಾಜ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಆರ್.ವಿಜಯ್ ಕುಮಾರ್, ಉಪಾಧ್ಯಕ್ಷರಾದ ಕೆ.ಎ. ಮನೋಹರ, ಸಿ.ಪಿ.ಪೂರ್ವಾಚಾರ್, ಸಹಕಾರ್ಯದರ್ಶಿ ಎಂ.ಡಿ.ಮೌನೇಶ್ವರಾಚಾರ್, ಖಜಾಂಚಿ ಬಿ.ವಿ.ರಾಜಶೇಖರ್ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260505-43-1461136330

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.