ದೇವನಹಳ್ಳಿ: ಸಮಾಜದ ಜಾತಿ ಪದ್ಧತಿ, ಲಿಂಗ ತಾರತಮ್ಯ ಹಾಗೂ ಮೂಢನಂಬಿಕೆಗಳ ವಿರುದ್ಧ 12ನೇ ಶತಮಾನದಲ್ಲೇ ಧ್ವನಿ ಎತ್ತಿ ಸಮಾನತೆಯ ಸಂದೇಶ ಸಾರಿದ ಮಹಾನ್ ತತ್ವಜ್ಞಾನಿ ಬಸವಣ್ಣ ಅವರ ಚಿಂತನೆಗಳು ಇಂದಿಗೂ ಪ್ರಸ್ತುತವಾಗಿವೆ ಎಂದು ವೀರಶೈವ ಲಿಂಗಾಯತ ಸಮಾಜದ ತಾಲ್ಲೂಕು ಅಧ್ಯಕ್ಷ ಎಂ.ಎಸ್. ರಮೇಶ್ ಅಭಿಪ್ರಾಯಪಟ್ಟರು.

ಪಟ್ಟಣದ ಬಿಬಿ ರಸ್ತೆಯಲ್ಲಿರುವ ತಾಲ್ಲೂಕು ಆಡಳಿತ ಸೌಧದ ನ್ಯಾಯಾಲಯ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ಹಾಗೂ ತಾ.ಪಂ ವತಿಯಿಂದ ಆಯೋಜಿಸಿದ್ದ ಬಸವಣ್ಣನವರ ಜಯಂತಿಯಲ್ಲಿ ಮಾತನಾಡಿದರು.

12ನೇ ಶತಮಾನದಲ್ಲಿ ಜಾತಿ ವ್ಯವಸ್ಥೆ ಗಾಢವಾಗಿ ಬೇರೂರಿದ್ದ ಕಾಲಘಟ್ಟದಲ್ಲಿ ಬಸವಣ್ಣರು ಸಮಾನತೆ, ಸೌಹಾರ್ದತೆ ಮತ್ತು ಮಾನವೀಯ ಮೌಲ್ಯಗಳನ್ನು ಪ್ರತಿಪಾದಿಸಿ ಜನಸಾಮಾನ್ಯರಿಗೆ ಅರ್ಥವಾಗುವ ಸರಳ ವಚನಗಳ ಮೂಲಕ ಜಾಗೃತಿ ಮೂಡಿಸಿದರು. ಶೋಷಿತ ಸಮುದಾಯಗಳ ಏಳಿಗೆಗಾಗಿ ಅವರು ರಚಿಸಿದ ವಚನಗಳು ಸಮಾಜ ಪರಿವರ್ತನೆಗೆ ದಾರಿದೀಪವಾಗಿವೆ ಎಂದು ಹೇಳಿದರು.

ಎಲ್ಲಾ ವರ್ಗದ ಜನರನ್ನು ಒಂದೇ ವೇದಿಕೆಯಲ್ಲಿ ಸೇರಿಸಿ ಚರ್ಚೆ ನಡೆಸುವ ಉದ್ದೇಶದಿಂದ ಅವರು ಸ್ಥಾಪಿಸಿದ ಅನುಭವ ಮಂಟಪ ವಿಶ್ವದ ಪ್ರಥಮ ಪ್ರಜಾಸತ್ತಾತ್ಮಕ ಚರ್ಚಾ ವೇದಿಕೆಯಾಗಿ ಪರಿಗಣಿಸಲಾಗಿದೆ. ಇಂದಿನ ಸಂಸತ್ತಿನ ವ್ಯವಸ್ಥೆಯೂ ಅದೇ ಮಾದರಿಯನ್ನು ಅನುಸರಿಸುತ್ತಿದೆ ಎಂಬ ಮಾತು ಪ್ರಸಿದ್ಧವಾಗಿದೆ ಎಂದು ವಿವರಿಸಿದರು.

ತಾಲ್ಲೂಕು ಕಚೇರಿಯ ವಿಷಯ ನಿರ್ವಾಹಕ ಶ್ರೀನಿವಾಸ್ ಪ್ರಸಾದ್, ಪುರಸಭೆಯ ಮಾಜಿ ಸದಸ್ಯ ಕೋಡಿ ಮಂಚೇನಹಳ್ಳಿ ಎಸ್. ನಾಗೇಶ್, ಕರ್ನಾಟಕ ರಾಜ್ಯ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನಿರ್ದೇಶಕ ವಿರೂಪಾಕ್ಷಯ್ಯ, ತಾಲ್ಲೂಕು ವೀರಶೈವ ಲಿಂಗಾಯತ ಸಮಾಜದ ಪ್ರಧಾನ ಕಾರ್ಯದರ್ಶಿ ಎಸ್. ವಿಜಯ್ ಕುಮಾರ್, ಖಜಾಂಚಿ ನಾಗೇಶ್ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-15-591974929

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.