ಧಾರವಾಡ: ‘ಬಸವಣ್ಣನವರು ಶೋಷಣೆ ಮುಕ್ತ ಸಮಾಜ ನಿರ್ಮಿಸಲು ಶ್ರಮಿಸಿದರು. ಅವರ ತತ್ವಾದರ್ಶಗಳನ್ನು ಎಲ್ಲರೂ ಪಾಲಿಸಬೇಕು’ ಎಂದು ಪಂಡಿತ ಎಂ. ವೆಂಕಟೇಶ ಕುಮಾರ ಹೇಳಿದರು.

ನಗರದ ಲಿಂಗಾಯತ ಭವನದಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಿಂದ ಈಚೆಗೆ ನಡೆದ ಸಾಂಸ್ಕೃತಿಕ ನಾಯಕ ಬಸವಣ್ಣ ಉಪನ್ಯಾಸ ಹಾಗೂ ವಚನ ಸಂಗೀತ ಗಾಯನ ಕಾರ್ಯಕ್ರಮದಲ್ಲಿ ಮಾತನಾಡಿದರು.

‘12ನೇ ಶತಮಾನದಲ್ಲಿ ಬಸವಣ್ಣನವರು ಅರಿವು–ಆಚಾರ–ಅನುಭಾವದ ಮೂಲಕ ಸಾಮಾಜಿಕ, ರಾಜಕೀಯ, ಧಾರ್ಮಿಕ, ಆರ್ಥಿಕ, ಸಾಹಿತ್ಯಿಕ, ಸಾಂಸ್ಕೃತಿಕ ಕ್ರಾಂತಿ ಮಾಡಿದರು’ ಎಂದರು.

ಪ್ರಾಧ್ಯಾಪಕಿ ವೀಣಾ ಹೂಗಾರ ಮಾತನಾಡಿ, ‘ಬಸವಾದಿ ಶರಣರು ಸಮಾಜದಲ್ಲಿನ ಅಂಧಕಾರ, ಮೂಢನಂಬಿಕೆ ಹೋಗಲಾಡಿಸಲು ಪ್ರಯತ್ನಿಸಿದರು’ ಎಂದು ತಿಳಿಸಿದರು.

ಮಹಾಸಭಾದ ಅಧ್ಯಕ್ಷ ಪ್ರದೀಪಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಕಾರ್ಯದರ್ಶಿ ಶಿವಶರಣ ಕಲಬಶೆಟ್ಟರ, ಪ್ರೊ.ವಿ.ಸಿ. ಸವಡಿ, ಬಸವರಾಜ ಗೋಲಪ್ಪನವರ, ಮಹೇಶ ಬಿಳಿಹಾಳ, ಶಂಕರ ಕುಂಬಿ, ಪಾರ್ವತಿ ಹಾಲಭಾವಿ, ಸುವರ್ಣಾ ಬಿರಾದಾರ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260503-24-696993819

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.