ಧಾರವಾಡ: ‘ಜೀವಾತ್ಮ ಪರಮಾತ್ಮನಾಗಲು ಉತ್ಕೃಷ್ಟ, ಅಲೌಕಿಕ ಗಾಢ ಚಿಂತನೆ ಬೋಧಿಸುವ ವೀರಶೈವ ಪಂಚಸೂತ್ರೀಯ ಪ್ರವಚನ ಒಂದು ಮೇರು ದಾರ್ಶನಿಕ ಕೃತಿಯಾಗಿ ಎಲ್ಲರ ಗಮನಸೆಳೆದಿದೆ’ ಎಂದು ಕಾಶಿಯ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಇಲ್ಲಿನ ಚರಂತಿಮಠ ಗಾರ್ಡನ್ನಲ್ಲಿ ಈಚೆಗೆ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ‘ವೀರಶೈವ ಪಂಚಸೂತ್ರೀಯ ಪ್ರವಚನ’ ಕೃತಿಯ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ವೀರಶೈವವು ಯಾವುದೋ ಒಂದು ಜಾತಿ, ವರ್ಗ, ಪಂಗಡ ಸೂಚಿಸದೇ, ಶಿವನ ಆಧ್ಯಾತ್ಮದ ಅನುಸಂಧಾನ ಮಾರ್ಗವಾಗಿದೆ. ಈ ಪಥದಲ್ಲಿ ಮುನ್ನಡೆಯಲು ಪಂಚಾಚಾರ್ಯರು ಐದು ಮಹರ್ಷಿಗಳಿಗೆ ಬೋಧಿಸಿದ ವಿಶಿಷ್ಟ ತತ್ವ ಪ್ರತಿಪಾದನೆ ಮಾಡಬೇಕು’ ಎಂದರು.

ಅಕ್ಕಿಆಲೂರು ಮುತ್ತಿನಕಂತಿಮಠದ ಚಂದ್ರಶೇಖರ ಶಿವಾಚಾರ್ಯ ಮಾತನಾಡಿ, ‘ರೇಣುಕಾಚಾರ್ಯರು ಸಿದ್ಧಾಂತ ಶಿಖಾಮಣಿ’ಯ ಮೂಲಕ ನಿರೂಪಿಸಿರುವ ತತ್ವ ಪ್ರತಿಪಾದನೆ ಕೇವಲ ವೀರಶೈವ-ಲಿಂಗಾಯತರನ್ನೇ ಕೇಂದ್ರೀಕರಿಸಿರದೇ ಸಕಲ ಜೀವಾತ್ಮರಿಗೂ ಅನ್ವಯವಾಗುತ್ತದೆ’ ಎಂದರು.

ಗದಗಯ್ಯ ಸ್ವಾಮೀಜಿ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಶಾಸಕ ಅಮೃತ ದೇಸಾಯಿ, ಹೊಸಯಲ್ಲಾಪುರ ಹಿರೇಮಠದ ಶಶಾಂಕ ದೇವರು, ಪಾಲಿಕೆ ಸಭಾ ನಾಯಕ ಈರೇಶ ಅಂಚಟಗೇರಿ, ಉಮಾ ಕೊರವರ, ಪ್ರೊ.ಆರ್.ಎಂ. ಷಡಕ್ಷರಯ್ಯ, ಪಾಲಿಕೆ ಸದಸ್ಯರಾದ ಶಿವು ಹಿರೇಮಠ, ಶಂಕರ ಶೆಳಕೆ, ವಕೀಲ ಅರುಣ ಚರಂತಿಮಠ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-24-1684447998

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.