ಮಂಗಳವಾರ, ಮಾರ್ಚ್ 31, 2020
19 °C
ಶಿವರಾತ್ರಿ ಕಾರ್ಯಕ್ರಮದಲ್ಲಿ ಬಿ.ಕೆ.ಲಕ್ಷ್ಮೀ ಅಭಿಮತ

‘ಮನಸ್ಸಿನ ನೆಮ್ಮದಿಗೆ ಧ್ಯಾನ ಅಗತ್ಯ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕನಕಗಿರಿ: ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಶುಕ್ರವಾರ ಮಹಾ ಶಿವರಾತ್ರಿಯನ್ನು ಶ್ರದ್ಧಾ, ಭಕ್ತಿಯಿಂದ ಆಚರಿಸಲಾಯಿತು.

ಇಲ್ಲಿನ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರಿಯ ವಿಶ್ವ ವಿದ್ಯಾಲಯದಲ್ಲಿ ಶಿವಲಿಂಗ ಸ್ಥಾಪಿಸಿ ಶಿವರಾತ್ರಿಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ರಾಜಯೋಗ ಭವನವನ್ನು ಹೂವು, ತಳಿರು, ತೋರಣಗಳಿಂದ ಅಲಂಕಾರಗೊಳಿಸಲಾಗಿತ್ತು.

ಬೆಳಿಗ್ಗೆ ಶಿವಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ನೂತನ ರಾಜಯೋಗ ಭವನದಲ್ಲಿ ಬ್ರಹ್ಮಕುಮಾರಿ ಲಕ್ಷ್ಮೀ ಜಿ ಮಾತನಾಡಿ,‘ಮಾನವರು ಇಂದು ವಿವಿಧ ಕಾರಣಗಳಿಂದಾಗಿ ಒತ್ತಡದಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ. ಮನಃ ಶಾಂತಿಗಾಗಿ ಇಲ್ಲಿ ಶಿಕ್ಷಣ ನೀಡಲಾಗುತ್ತಿದೆ’ ಎಂದರು.

ಪ್ರಮುಖರಾದ ಶೇಖರಗೌಡ ಪಾಟೀಲ, ಗುರುಸಿದ್ದಪ್ಪ ಹಾದಿಮನಿ, ಮುದುಕಪ್ಪ ಕಡಿ, ಮಹಾಂತೇಶ ತಾಡಪತ್ರಿ, ಗವಿಸಿದ್ದಪ್ಪ, ಸುಮಾ ಹಾಗೂ ರೇಣುಕಾ ಇದ್ದರು.‌

ಪಟ್ಟಣದ ಪಂಪಾಪತಿ ದೇವಸ್ಥಾನ, ರಾಮಲಿಂಗೇಶ್ವರ , ಅಗಸಿ ಹನುಮಪ್ಪ, ಐತಿಹಾಸಿಕ ಕನಕಾಚಲಪತಿ ದೇವಸ್ಥಾನ ಗಳಲ್ಲಿ ಹೂವಿನ ಅಲಂಕಾರ, ಅಭಿಷೇಕ, ಕುಂಕಮಾರ್ಚನೆ, ಮಂಗಳಾರುತಿ ನಡೆಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)