ದೊಡ್ಡಬಳ್ಳಾಪುರ: 24ನೇ ಹಾಗೂ ಕೊನೆಯ ಜೈನ ತೀರ್ಥಂಕರ ಮಹಾವೀರ ಅಹಿಂಸೆ ಮಹತ್ವವನ್ನು ಸಾರಿ, ಜಗತ್ತಿಗೆ ಶಾಂತಿ ಮತ್ತು ಸೌಹಾರ್ದತೆ ಬೋಧಿಸಿದ್ದಾರೆ ಎಂದು ತಹಶೀಲ್ದಾರ್ ಮಲ್ಲಪ್ಪ.ಕೆ.ಯರಗೋಳ ಹೇಳಿದರು.

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯಿಂದ ಸೋಮವಾರ ನಡೆದ ಮಹಾವೀರ ಜಯಂತಿಯಲ್ಲಿ ಮಾತನಾಡಿದರು.

ಸತ್ಯಾನ್ವೇಷಣೆಗಾಗಿ ಭೋಗದ ಜೀವನ ತೊರೆದು, ಶಾಂತಿ, ತ್ಯಾಗ, ಅಹಿಂಸೆ, ಭಾತೃತ್ವ ಭಾವನೆಯನ್ನು ಎಲ್ಲರಲ್ಲಿಯೂ ಮೂಡಿಸಿ, ಅದರಂತೆಯೇ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜ ಸುಧಾರಣೆಗಾಗಿ ಶ್ರಮಿಸಿದ ವರ್ಧಮಾನ ಮಹಾವೀರರ ಕೊಡುಗೆ ಅಪಾರ. ಅವರ ತತ್ವಗಳ ಅನುಸರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಸಾಧ್ಯವಾಗುತ್ತದೆ ಎಂದರು.

ಸತತ 12 ವರ್ಷಗಳ ಕಾಲ ಘೋರ ತಪಸ್ಸನ್ನು ಮಾಡಿ, ತಮ್ಮ 42ನೇ ವಯಸ್ಸಿನಲ್ಲಿ ‘ಕೈವಲ್ಯ ಜ್ಞಾನೋದಯ’ವನ್ನು ಪಡೆದರು. ‘ಕೈವಲ್ಯಜ್ಞಾನ’ ಎಂದರೆ, ಇಂದ್ರೀಯಗಳನ್ನು ನಿಗ್ರಹಿಸಿ ಸುಖ ಹಾಗೂ ದುಃಖಗಳ ಮೇಲೆ ನಿಯಂತ್ರಣ ಸಾಧಿಸಿಕೊಂಡವರು ಎಂದರ್ಥವಾಗಿದೆ. ವರ್ಧಮಾನ ಮಹಾವೀರರು 5 ಪ್ರತಿಜ್ಞೆಗಳು ಮತ್ತು ನಡವಳಿಕೆಯ 3 ನಿಯಮಗಳನ್ನು ಬೋಧಿಸಿದರು ಎಂದು ತಿಳಿಸಿದರು.

ಇವುಗಳನ್ನು ತ್ರಿರತ್ನಗಳೆಂದು ಕರೆಯಲಾಗುತ್ತದೆ. ಪಂಚ ಪ್ರತಿಜ್ಞೆಗಳೆಂದರೆ, ಅಹಿಂಸೆ, ಸತ್ಯ, ಅಸ್ತೇಯ, ಅಪರಿಗ್ರಹ, ಬ್ರಹ್ಮಚರ್ಯಗಳಾಗಿವೆ. ತ್ರಿರತ್ನಗಳೆಂದರೆ, ಸಮ್ಯಕಜ್ಞಾನ, ಸಮ್ಯಕ ದರ್ಶನ, ಸಮ್ಯಕ ಚಾರಿತ್ರಗಳಾಗಿವೆ. ವರ್ಧಮಾನ ಮಹಾವೀರ ಅವರು ಸೇರಿದಂತೆ, ಜೈನ ಧರ್ಮವು ಸದಾತ್ಯಾಗ, ಶಾಂತಿ, ಅಹಿಂಸೆಯ ತತ್ವಗಳನ್ನು ಸಾರ್ವಕಾಲಕ್ಕೂ ಬೋಧಿಸಿ ಅದರಂತೆಯೇ ನಡೆಯುತ್ತಿದೆ. ಅವರ ತತ್ವಾದರ್ಶಗಳಂತೆ ನಡೆದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಿದೆ ಎಂದು ಹೇಳಿದರು.

ಮಹಾವೀರ ಜೈನ ಸಂಘದ ಅಧ್ಯಕ್ಷ ಪ್ರಕಾಶ್, ಕಾರ್ಯದರ್ಶಿ ರಮೇಶ್, ಸರ್ಕಾರಿ ನೌಕರರ ಸಂಘದ ತಾಲ್ಲೂಕು ಅಧ್ಯಕ್ಷ ಎಂ.ಎಸ್.ರಾಜಶೇಖರ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260331-15-1220337674

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.