ಗದಗ: ‘ಪಂಚವಟಿ ಧಾರ್ಮಿಕ ಗುರುಕುಲ ಜನಕಲ್ಯಾಣ ಟ್ರಸ್ಟ್ ಹಾಗೂ ಅಖಿಲ ಭಾರತ ಜಂಗಮ ಸೇವಾ ಸಮಿತಿ ವತಿಯಿಂದ ಮೇ 1ರಂದು ಜಂಗಮ ವಟುಗಳಿಗೆ ಶಿವದೀಕ್ಷೆ, ಅಯ್ಯಾಚಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಕದಾಂಪೂರ, ನರಸಾಪುರ ಹಿರೇಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

‘ನರಸಾಪುರದ ತಪೋವನದಲ್ಲಿ ಮಕ್ಕಳಿಗೆ 30 ದಿನಗಳ ಉಚಿತ ಸಂಸ್ಕಾರ ಮತ್ತು ಯೋಗ ಶಿಬಿರ ಹಮ್ಮಿಕೊಳ್ಳಲಾಗಿದ್ದು, ಇದರ ಸಮಾರೋಪ ಸಮಾರಂಭದ ಅಂಗವಾಗಿ ಜಂಗಮ ವಟುಗಳಿಗೆ ಶಿವದೀಕ್ಷೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದು ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

‘ಸೊರಟೂರು ಶ್ರೀಗಳು, ಮಣಿಪುರ ಶಿವಯೋಗಿ ಸ್ವಾಮೀಜಿ ಸೇರಿದಂತೆ ಹಲವು ಮಠಗಳ ಸ್ವಾಮೀಜಿಗಳು ಶಿವದೀಕ್ಷೆ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಮೇ 1ರಂದು 50 ಮಂದಿಗೆ ಶಿವದೀಕ್ಷೆ ನೀಡಲಾಗುವುದು. ಏ.26ರವರೆಗೆ ನೋಂದಣಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

ಅಖಿಲ ಭಾರತ ಜಂಗಮ ಸೇವಾ ಸಮಿತಿಯ ಪದಾಧಿಕಾರಿಗಳಾದ ಕುಮಾರ ಸ್ವಾಮಿ ಹಿರೇಮಠ, ವೀರಯ್ಯ ಹೊಸಮಠ, ಸಂಗಮ್ಮ, ಮಂಜುನಾಥ, ಫಕೀರ ಹಿರೇಮಠ, ಕುಮಾರ ಸೇರಿದಂತೆ ಹಲವರು ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260415-23-241146622

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.