ಗಂಡಸಿ: ‘ಮಾರುಕಟ್ಟೆಯಲ್ಲಿ 1ಲೀಟರ್ ಶುದ್ಧೀಕರಿಸಿದ ಕುಡಿಯುವ ನೀರಿನ ಬೆಲೆ ₹20. ನಾವು 20 ಲೀಟರ್ ಶುದ್ಧೀಕರಿಸಿದ ನೀರನ್ನು ₹5 ಕ್ಕೆ ನೀಡುತ್ತೇವೆ. ಇದು ವ್ಯಾಪಾರದ ದೃಷ್ಟಿಯ ಪೈಪೋಟಿಯಲ್ಲ. ಸಮಾಜದ ಕೆಳವರ್ಗದ ಜನರಿಗೂ ಶುದ್ಧ ಕುಡಿಯುವ ನೀರು ದೊರೆಯಲಿ ಎಂಬ ಭಾವನೆ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯದ್ದಾಗಿದೆ’ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಹಾಸನ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ಹೇಳಿದರು.

ಹೋಬಳಿಯ ಚಿಕ್ಕಯರಗನಾಳು ಗ್ರಾಮದಲ್ಲಿ ಗುರುವಾರ 612ನೇ ಶುದ್ಧಗಂಗಾ ಘಟಕ ಉದ್ಘಾಟಿಸಿ ಅವರು ಮಾತನಾಡಿದರು.

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ₹10 ಲಕ್ಷ, ಯರಗನಾಳು ಗ್ರಾಮದ ಗ್ರಾ.ಪಂ. ಮಾಜಿ ಅಧ್ಯಕ್ಷ ವೈ.ಎಂ. ಮಲ್ಲೇಶ್ ಅವರು ನೀಡಿರುವ ₹3 ಲಕ್ಷ ವೆಚ್ಚದಲ್ಲಿ ತಾಲೂಕಿನ 41ನೇ ಘಟಕ ಪ್ರಾರಂಭವಾಗಿದ್ದು, ಯರಗನಾಳು ಸುತ್ತಮುತ್ತಲ ಜನತೆ ಉಪಯೋಗ ಪಡೆದುಕೊಳ್ಳಿ ಎಂದರು.

‘ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ 1ಸಾವಿರ ಕೆರೆಗಳ ಹೂಳೆತ್ತುವ ಕಾಮಗಾರಿಗೆ ಮಂಜೂರಾತಿ ದೊರೆತಿದ್ದು, ಕೆಲವೇ ದಿನಗಳಲ್ಲಿ ಹೂಳೆತ್ತುವ ಕಾರ್ಯ ಪ್ರಾರಂಭವಾಗಲಿದೆ. ನಮ್ಮ ಕಾರ್ಯ ವ್ಯಾಪ್ತಿಯಲ್ಲಿ ಪಾಳು ಬಿದ್ದ ಮನೆಗಳಲ್ಲಿ ಜೀವನ ಸಾಗಿಸುತ್ತಿರುವ ಅತ್ಯಂತ ದುರ್ಬಲ ವರ್ಗದ ಕುಟುಂಬಗಳನ್ನು ಗುರುತಿಸಿ, ₹1.50 ಲಕ್ಷ ವೆಚ್ಚದಲ್ಲಿ ಮನೆ ನಿರ್ಮಿಸಿ ಕೊಡುವುದರ ಜೊತೆಗೆ ಉಚಿತವಾಗಿ ಗೃಹ ಉಪಯೋಗಿ ಕಿಟ್ ನೀಡಲಾಗುವುದು’ ಎಂದು ಹೇಳಿದರು.

ದೇವಾಲಯಗಳ ಜೀರ್ಣೋದ್ಧಾರ, ಸ್ಮಶಾನ ಅಭಿವೃದ್ಧಿ, ವೃದ್ಧಾಪ್ಯ ವೇತನ, ಸಂಘದ ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ, ಜ್ಞಾನ ವಿಕಾಸ ಯೋಜನೆ ಅಡಿ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ಉಚಿತ ಟ್ಯೂಷನ್ ಕ್ಲಾಸ್ಗಳಿಗೆ ಧನ ಸಹಾಯ ನೀಡಲಾಗುವುದು ಎಂದರು

ಗ್ರಾ.ಪಂ. ಮಾಜಿ ಅಧ್ಯಕ್ಷ ಯರಗನಾಳು ಮಲ್ಲೇಶ್, ತಾಲ್ಲೂಕು ಯೋಜನಾಧಿಕಾರಿ ಅಕ್ಷತಾ ರೈ, ಗ್ರಾ.ಪಂ. ಮಾಜಿ ಸದಸ್ಯ ಮಧುಸೂದನ್, ತೀರ್ಥಮ್ಮ, ಪಿಎಸಿಸಿ ಬ್ಯಾಂಕ್ ನಿವೃತ್ತ ಮ್ಯಾನೇಜರ್ ನಂಜುಂಡೇಗೌಡ, ಗ್ರಾಮದ ಮುಖಂಡ ಕಾಂತರಾಜು, ಎಲ್ಐಸಿ ರುದ್ರೇಶ್, ಶ್ರೀಕ್ಷೇತ್ರ ಧರ್ಮಸ್ಥಳ ಸಂಘದ ಸದಸ್ಯರು ಮತ್ತು ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260426-36-1469171802

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.