ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗವಿಮಠ ಜಾತ್ರೆ: ಪಲ್ಲಕ್ಕಿ ಮೆರವಣಿಗೆ

ಲಘು ರಥೋತ್ಸವ ಇಂದು: ಕಳಸ, ಹಗ್ಗ ತಂದ ಭಕ್ತರು
Last Updated 10 ಜನವರಿ 2020, 15:49 IST
ಅಕ್ಷರ ಗಾತ್ರ

ಕೊಪ್ಪಳ: ಸಂಸ್ಥಾನ ಶ್ರೀ ಗವಿಮಠದ ಜಾತ್ರಾ ಮಹೋತ್ಸವದದ ಆಂಗವಾಗಿ ಶುಕ್ರವಾರ ಗವಿಸಿದ್ಧೇಶ್ವರ ಮೂರ್ತಿಯ ಪಲ್ಲಕ್ಕಿ ಹಾಗೂ ಕಳಸದ ಮೆರವಣಿಗೆ ಸಂಭ್ರಮದಿಂದ ನಡೆಯಿತು.

ಕೋಟೆಪ್ರದೇಶದ ಜಡೇಗೌಡರ ಮನೆಯಿಂದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆದು ಗವಿಮಠ ತಲುಪುವುದು.ಮಠದ 11 ಪೀಠಾಧೀಶರಾಗಿದ್ದ ಗವಿಸಿದ್ದೇಶ್ವರಸ್ವಾಮೀಜಿಜಡೇಗೌಡರ ಮನೆಯಲ್ಲಿ ಲಿಂಗಾನುಷ್ಠಾನ ನಿರತರಾಗಿದ್ದರು. ಮಠಕ್ಕೆ ಪೀಠಾಧಿಪತಿಯಾಗಿ ಬರುವ ಪೂರ್ವದಲ್ಲಿ ಗೌಡರ ಧರ್ಮಪತ್ನಿಯವರಿಗೆ ತಮ್ಮ ಶಿಖೆ (ಜಡೆ)ಯನ್ನೇ ತೆಗೆದುಕೊಟ್ಟರು.

ಅಂದಿನಿಂದ ಆ ಮನೆತನಕ್ಕೆ ಜಡೇಗೌಡ್ರ ಮನೆತನ ಎಂಬ ಹೆಸರು ಬಂದಿತು. ಈ ಕಾರಣಕ್ಕಾಗಿ ಶ್ರೀಮಠದಲ್ಲಿ ಪೂಜೆಗೊಂಡ ಗವಿಸಿದ್ದೇಶ್ವರ ಮೂರ್ತಿಯನ್ನು ಜಡೇಗೌಡರ ಮನೆಯಲ್ಲಿ ಮೂಹರ್ತಗೊಳಿಸಿ ಪೂಜಾದಿಗಳನ್ನು ಸಲ್ಲಿಸಿದ ತರುವಾಯ ವಾದ್ಯಗಳ ಸಮೇತ ಪಲ್ಲಕ್ಕಿಯನ್ನು ಪ್ರಮುಖ ಬೀದಿಗಳಲ್ಲಿ ಹಲವು ಜಾನಪದ ಕಲಾ ತಂಡಗಳಾದ ಸಮಾಳ, ಮೋಜಿನ ಗೊಂಬೆ, ಹಲಗೆ ಮಜಲು, ಮಹಿಳಾ ಡೊಳ್ಳು ಕುಣಿತ, ಮಹಿಳಾ ವೀರಾಗಾಸೆ, ಕೋಲಾಟ, ಕರಡಿ ಮಜಲು, ಸಮಾಳ, ನಂದಿಕೋಲು, ಹಗಲು ವೇಷ, ಜಾಂಜ್ ಮೇಳ, ಚಿಟ್ಟಿ ಮೇಳದ ಮೂಲಕಗವಿಮಠಕ್ಕೆ ತರುವುದು ಸಂಪ್ರದಾಯ.

ಗವಿಮಠದಲ್ಲಿ ಅನ್ನಪೂರ್ಣೇಶ್ವರಿ ದೇವಿಗೆ ಉಡಿತುಂಬುವ ಕಾರ್ಯಕ್ರಮವು ಜರುಗಿತು.

ಹಲಗೇರಿ ಗ್ರಾಮದ ವೀರನಗೌಡ ಪಾಟೀಲ ಮನೆಯಿಂದ ರಥದ ಮೇಲಿನ ಕಳಸತರುವ ಕಾರ್ಯಕ್ರಮ ನಡೆಯಿತು.

ಇಂದು ಲಘುರಥೋತ್ಸವ

ಜ.12ರಂದು ನಡೆಯುವ ಮಹಾರಥೋತ್ಸವದ ಮುಂಚೆ ನಡೆಯುವ ಲಘುರಥೋತ್ಸವ (ಉಚ್ಚಾಯ) ಎಳೆಯುವ ಕಾರ್ಯಕ್ರಮ ಜ.11ರಂದು ನಡೆಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT