ಗೋಕಾಕ: ‘ಅನುಭವ ಮತ್ತು ಜ್ಞಾನದಿಂದ ಭಕ್ತಿ ಹುಟ್ಟುತ್ತದೆ. ನಿಷ್ಕಾಮ ಭಕ್ತಿಯಿಂದ ಮಾತ್ರ ಪರಶಿವನನ್ನು ಒಲಿಸಿಕೊಳ್ಳಲು ಸಾಧ್ಯ’ ಎಂದು ಶೂನ್ಯ ಸಂಪಾದನ ಮಠದ ಪೀಠಾಧಿಪತಿ ಮುರುಘರಾಜೇಂದ್ರ ಸ್ವಾಮೀಜಿ ಹೇಳಿದರು.

ಶನಿವಾರ ನಗರದ ಶೂನ್ಯ ಸಂಪಾದನ ಮಠದಲ್ಲಿ ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ, ವಚನ ಸಾಹಿತ್ಯ ಚಿಂತನ-ಮಂಥನ ವೇದಿಕೆ ಹಾಗೂ ಲಿಂಗಾಯತ ಮಹಿಳಾ ವೇದಿಕೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡ 196ನೇ ಮಾಸಿಕ ಶಿವಾನುಭವ ಗೋಷ್ಠಿ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಅವರು ಮಾತನಾಡಿದರು.

‘ಲಿಂಗಾಂಗ ಸಾಮರಸ್ಯವೇ ನಿಜವಾದ ಪೂಜೆಯಾಗಿದೆ. ಈ ನಿಟ್ಟಿನಲ್ಲಿ ವಚನಗಳು ನಮಗೆ ಪ್ರತಿ ಕ್ಷಣ ಮಾರ್ಗದರ್ಶಿಯಾಗಿವೆ’ ಎಂದು ವಿಶ್ಲೇಷಿಸಿದರು.

ನದಿ ಇಂಗಳಗಾಂವದ ಗುರುಲಿಂಗ ದೇವರ ಮಠದ ಸಿದ್ದಲಿಂಗ ಸ್ವಾಮೀಜಿ ಮಾತನಾಡಿ, ‘ಭೂಮಿಯ ಮೇಲಿರುವ ಸಕಲ ಪಶು, ಪಕ್ಷಿ, ಪ್ರಾಣಿಗಳು ನೆಮ್ಮದಿಯಿಂದ ಬದುಕುತ್ತಿವೆ. ಆದರೆ ಸ್ವಾರ್ಥ ಗುಣಗಳಿಂದ ಮನುಷ್ಯ ನೆಮ್ಮದಿ ಕಳೆದುಕೊಳ್ಳುತ್ತಿದ್ದಾನೆ. ಮನುಷ್ಯ ಎಲ್ಲಕ್ಕೂ ಮಿಗಿಲಾಗಿ ತನ್ನ ಸಂಸಾರ ಶ್ರೇಯಸ್ಸಿಗೆ ಆದ್ಯತೆ ನೀಡುತ್ತಿರುವುದೇ ಇಂದಿನ ಈ ಸ್ಥಿತಿಗೆ ಕಾರಣವಾಗಿದೆ. ನಿಷ್ಕಾಮ ಭಕ್ತಿಯನ್ನು ಅನುಸರಿಸಿ, ವಿಶ್ವಾಸ ಮತ್ತು ನಂಬಿಕೆಯಿಂದ ಸ್ಮರಿಸಿದರೆ ಭಗವಂತನನ್ನು ಕಾಣಬಹುದಾಗಿದೆ’ ಎಂದರು.

ಬಸವೇಶ್ವರ ಧರ್ಮ ಪ್ರಚಾರಕ ಸಂಸ್ಥೆ ಮುಖ್ಯಸ್ಥ ವರ್ತಕ ಬಸನಗೌಡ ಪಾಟೀಲ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯ ಮೇಲೆ ಲಿಂಗಾಯತ ಮಹಿಳಾ ವೇದಿಕೆಯ ಅಧ್ಯಕ್ಷೆ ಸೇವಂತಾ ಅಶೋಕ ಮುಚ್ಚಂಡಿ ಹಿರೇಮಠ, ನೀಲಕಂಠ ಚನ್ನಬಸಪ್ಪ ತೋಟಗಿ, ಪ್ರಸನ್ನ ತಂಬಾಕೆ, ಮಲ್ಲಪ್ಪ ನೇಸರಗಿ, ಮಲ್ಲಿಕಾರ್ಜುನ ರಾಮಯ್ಯ ಮಡ್ದೇನಿ, ಅಭಿಷೇಕ ಮುಚ್ಚಂಡಿ ಹಿರೇಮಠ, ಆರ್.ಎಲ್.ಮಿರ್ಜಿ, ಮುಖ್ಯ ಶಿಕ್ಷಕ ಎಸ್.ಕೆ. ಮಠದ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260509-21-162338701

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.