ಗುಬ್ಬಿ: ಅಗ್ನಿವಂಶ ಕ್ಷತ್ರಿಯ ಸಮುದಾಯ ಐತಿಹಾಸಿಕ, ಸಾಂಸ್ಕೃತಿಕ ಹಾಗೂ ಸಂಸ್ಕಾರದ ಹಿನ್ನೆಲೆಯಿಂದ ಬೆಳೆದು ಬಂದಿದೆ. ಸಮುದಾಯದ ಪರಂಪರೆಯನ್ನು ಮುಂದಿನ ಪೀಳಿಗೆಗೂ ತಿಳಿಸುವ ಕೆಲಸ ಮಾಡಬೇಕಿದೆ ಎಂದು ಜ್ಞಾನಾನಂದಪುರಿ ಸ್ವಾಮೀಜಿ ಹೇಳಿದರು.

ಶನಿವಾರ ಗುಬ್ಬಿಯಲ್ಲಿ ಏರ್ಪಡಿಸಿದ್ದ ಅಗ್ನಿಬನ್ನಿರಾಯ ಜಯಂತಿಯಲ್ಲಿ ಮಾತನಾಡಿ, ಸಮುದಾಯಕ್ಕೆ ಕ್ಷತ್ರಿಯ ರಾಜವಂಶದ ಹಿನ್ನೆಲೆ ಇದ್ದರೂ ಕೃಷಿಯನ್ನೇ ನಂಬಿ ಬದುಕು ಕಟ್ಟಿಕೊಂಡಿದ್ದಾರೆ. ವಿಶಿಷ್ಟವಾದ ಸಾಮಾಜಿಕ ಕಟ್ಟುಪಾಡುಗಳನ್ನು ಸಮುದಾಯ ರೂಢಿಸಿಕೊಂಡಿದೆ ಎಂದರು.

ಸಮುದಾಯದ ಯಜಮಾನ, ಆಣೆಕಾರ, ಮುದ್ರೆಯವರಿಗೆ ವಿಶೇಷ ಸ್ಥಾನಮಾನ ನೀಡಲಾಗಿದೆ. ಸಮುದಾಯದವರು ಅಸ್ತಿತ್ವ ಹಾಗೂ ಪರಂಪರೆ ಉಳಿಸಿಕೊಳ್ಳಲು ಒಗ್ಗಟ್ಟನ್ನು ಪ್ರದರ್ಶಿಸಬೇಕಿದೆ ಎಂದರು.

ಶಾಸಕ ಎಸ್.ಆರ್ ಶ್ರೀನಿವಾಸ್ ಮಾತನಾಡಿ, ಅಗ್ನಿವಂಶ ಕ್ಷತ್ರಿಯ ಸಮುದಾಯದವರು ಕೃಷಿ ಜತೆಗೆ ಶಿಕ್ಷಣಕ್ಕೆ ಆದ್ಯತೆ ನೀಡಬೇಕಿದೆ. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಮೂಲಕ ಉತ್ತಮವಾದ ಬದುಕು ಕಟ್ಟಿಕೊಳ್ಳಲು ಸಮುದಾಯ ನೆರವಾಗಬೇಕಿದೆ. ತಾಲ್ಲೂಕಿನಲ್ಲಿ ಸಮುದಾಯಕ್ಕೆ ಅಗತ್ಯವಿರುವ ಸಮುದಾಯ ಭವನ ಹಾಗೂ ಸಾಕಷ್ಟು ಸೌಕರ್ಯ ಒದಗಿಸಲಾಗಿದೆ ಎಂದರು.

ಗುಬ್ಬಿಯ ಚನ್ನಬಸವೇಶ್ವರ ದೇವಾಲಯದಿಂದ ಅಗ್ನಿ ಬನ್ನಿರಾಯ ಭಾವಚಿತ್ರವನ್ನು ಪೂರ್ಣಕುಂಭ, ಸಾಂಸ್ಕೃತಿಕ ಹಾಗೂ ಜಾನಪದ ಕಲಾ ತಂಡಗಳೊಂದಿಗೆ ಕಾರ್ಯಕ್ರಮದ ವೇದಿಕೆವರೆಗೂ ಮೆರವಣಿಗೆ ಮಾಡಲಾಯಿತು.

ಅಗ್ನಿವಂಶ ಕ್ಷತ್ರಿಯ ತಿಗಳ ವಿದ್ಯಾಭಿವೃದ್ಧಿ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಬಲರಾಮಯ್ಯ, ಮುಖಂಡ ಎಸ್.ಡಿ ದಿಲೀಪ್ ಕುಮಾರ್, ಬಿ.ಎಸ್ ನಾಗರಾಜು, ಜಿ.ಎನ್ ಬೆಟ್ಟಸ್ವಾಮಿ, ಪಿ.ಬಿ ಚಂದ್ರಶೇಖರ ಬಾಬು, ಕಳ್ಳಿಪಾಳ್ಯ ಲೋಕೇಶ್, ಹೊನ್ನಗಿರಿಗೌಡ, ಯೋಗಾನಂದ ಕುಮಾರ್, ಮಲ್ಲಪ್ಪ, ಲೋಕೇಶ್ ಬಾಬು, ಉಂಡೆ ರಾಮಣ್ಣ, ನಂಜೇಗೌಡ, ಎನ್.ಸಿ ಶಿವಣ್ಣ, ಯಜಮಾನರು, ಅಣೆಕಾರರು, ಮುದ್ರೆಯವರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260329-17-178307598

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.