ಹಳಿಯಾಳ: ‘ಇಂದಿನ ಯುವ ಪೀಳಿಗೆಯಲ್ಲಿ ಧರ್ಮ, ಶಿಕ್ಷಣದ ಜೊತೆಗೆ ಸಂಸ್ಕಾರ, ರಾಷ್ಟ್ರಭಕ್ತಿ ಸ್ವಾಭಿಮಾನ ಜಾಗೃತಿಗೊಳಿಸುವ ಕಾರ್ಯವಾಗಬೇಕಿದೆ’ ಎಂದು ಸನಾತನ ಸಂಸ್ಥೆಯ ವಿಠೋಬಾ ಮಾಲ್ಸೇಕರ ಹೇಳಿದರು.

ತಾಲ್ಲೂಕಿನ ತೇರಗಾಂವ ಗ್ರಾಮದ ಕಲ್ಮೇಶ್ವರ ದೇವಸ್ಥಾನದಲ್ಲಿ ಈಚೆಗೆ ಆಯೋಜಿಸಲಾಗಿದ್ದ ವಿಶೇಷ ಸನಾತನ ಸಂಸ್ಕಾರ ತರಬೇತಿ ಶಿಬಿರದಲಿ ಮಾತನಾಡಿದರು.

‘ಮಕ್ಕಳಲ್ಲಿ ಹೆಚ್ಚುತ್ತಿರುವ ಪಾಶ್ಚಾತ್ಯ ಪ್ರಭಾವ, ಧರ್ಮ, ಶಿಕ್ಷಣದ ಅಭಾವ ಹಾಗೂ ಸಂಸ್ಕಾರ ಕುಸಿತದ ಹಿನ್ನೆಲೆ ಮಕ್ಕಳಲ್ಲಿ ಹಿಂದೂ ಧರ್ಮದ ಜ್ಞಾನ, ಸಂಸ್ಕಾರ, ರಾಷ್ಟ್ರಭಕ್ತಿ ಮತ್ತು ಸ್ವಾಭಿಮಾನ ಜಾಗೃತಗೊಳಿಸುವ ಉದ್ದೇಶದಿಂದ ಸನಾತನ ಸಂಸ್ಥೆಯಿಂದ ಸನಾತನ ಸಂಸ್ಕಾರ ಶಿಬಿರ’ ಆಯೋಜಿಸಲಾಗಿದೆ ಎಂದರು.

ಸಂಸ್ಥೆಯ ಪದ್ಮಾ ಉಪ್ಪಾರ ಹಾಗೂ ತಾರಾ ಶೆಟ್ಟಿ ಮಾತನಾಡಿ, ‘ಮಕ್ಕಳ ಜ್ಞಾನ ವೃದ್ಧಿಗಾಗಿ ರಸಪ್ರಶ್ನೆಗಳು, ಸಾತ್ವಿಕ ಚಿತ್ರಕಲೆ ಮತ್ತು ಶುದ್ಧವಾಗಿ ಪ್ರಾದೇಶಿಕ ಭಾಷೆಗಳನ್ನು ಓದುವ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಪಾಲಕರಿಗೂ ಅವರ ಜವಾಬ್ದಾರಿಗಳನ್ನು ತಿಳಿಸಿ, ಮಕ್ಕಳಿಗೆ ಸಂಸ್ಕಾರಗಳನ್ನು ಕಲಿಸುವುದರ ಮಹತ್ವದ ಮನವರಿಕೆ ಮಾಡಲಾಗುತ್ತದೆ’ ಎಂದರು.

ಮಕ್ಕಳ ಪಾಲಕರು, ಸಂಸ್ಥೆಯ ಪದಾಧಿಕಾರಿ ವಿದುಲಾ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260521-20-891197495

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.