ಹರಿಹರ: ‘ಅಷ್ಟಾವರಣ, ಪಂಚಾಚಾರ ಹಾಗೂ ಷಟ್ಸ್ಥಲಗಳ ಪಾಲನೆಯೇ ಲಿಂಗಾಯತ ಧರ್ಮದ ಮೂಲಾಧಾರ. ವಿಶ್ವಗುರು ಬಸವಣ್ಣನವರು ಸಮಾಜದ ಮೋಕ್ಷಕ್ಕಾಗಿ ತೋರಿದ ಈ ಮಾರ್ಗಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದು ಇಂದಿನ ಅಗತ್ಯ’ ಎಂದು ಹರಿಹರ ಪಂಚಮಸಾಲಿ ಗುರುಪೀಠದ ವಚನಾನಂದ ಶ್ರೀ ಹೇಳಿದರು.

ನಗರದ ಸಮೀಪದ ಪಂಚಮಸಾಲಿ ವೀರಶೈವ ಲಿಂಗಾಯತ ಗುರುಪೀಠದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಎರಡು ದಿನಗಳ ಬೇಸಿಗೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.

‘ಲಿಂಗ ಪೂಜೆಯು ಮನುಷ್ಯನನ್ನು ದೈವತ್ವದತ್ತ ಕೊಂಡೊಯ್ಯುತ್ತದೆ. ಇಂದಿನ ಒತ್ತಡದ ಬದುಕಿನಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಯೋಗ ಅತ್ಯಗತ್ಯ. ಪತಂಜಲಿ ಯೋಗ ಸಮಿತಿಯು ತಿಳಿಸಿರುವಂತೆ ಯೋಗಾಭ್ಯಾಸದಿಂದ ಮನಸ್ಸಿಗೆ ಶಾಂತಿ ದೊರೆಯುತ್ತದೆ. ಪ್ರತಿಯೊಬ್ಬರೂ ಪ್ರತಿದಿನ ಯೋಗ ಮಾಡುವುದನ್ನು ರೂಢಿಸಿಕೊಳ್ಳಬೇಕು’ ಎಂದು ಹೇಳಿದರು.

‘ಶಿಬಿರಾರ್ಥಿಗಳು ಇಲ್ಲಿ ಕಲಿತ ಮೌಲ್ಯಗಳನ್ನು ಕೇವಲ ಮಠಕ್ಕೆ ಸೀಮಿತಗೊಳಿಸದೆ, ಮನೆ ಮತ್ತು ಸಮಾಜದಲ್ಲಿಯೂ ಪಾಲಿಸಬೇಕು. ಹೂವು ಸುಗಂಧವನ್ನು ಪಸರಿಸುವಂತೆ, ಇಲ್ಲಿ ಪಡೆದ ಜ್ಞಾನದ ಮೂಲಕ ಸಂಸ್ಕಾರಯುತ ನಾಗರಿಕ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ನಿಮ್ಮ ಮೇಲಿದೆ’ ಎಂದು ಮಠದ ಆಡಳಿತಾಧಿಕಾರಿ ಡಾ.ಎಚ್.ಪಿ.ರಾಜಕುಮಾರ್ ಹೇಳಿದರು.

‘ವಿದ್ಯಾರ್ಥಿ ಜೀವನದಲ್ಲಿ ಕಲಿಕೆ ನಿರಂತರವಾಗಿರಲಿ. ಸಮಾಜದಿಂದ ನಾವು ಪಡೆದದ್ದನ್ನು ಮರಳಿ ಸಮಾಜಕ್ಕೆ ನೀಡುವ ಮನೋಭಾವವನ್ನು ಎಳೆಯ ವಯಸ್ಸಿನಲ್ಲೇ ಬೆಳೆಸಿಕೊಳ್ಳಬೇಕು’ ಎಂದು ಮಠದ ಟ್ರಸ್ಟಿ ಎಚ್.ಪಿ.ಬಸವರಾಜಪ್ಪ ಹೇಳಿದರು.

ಮಠದ ಲೆಕ್ಕ ಪರಿಶೋಧಕ ಅಶೋಕ್ ಎಚ್.ಬಿ, ಶಿಬಿರದ ಉಸ್ತುವಾರಿ ಗಿರೀಶ್ ಎನ್.ಎಂ, ಕೆ.ವಿ.ಪ್ರಸನ್ನ, ಶಿವಕುಮಾರ್, ಹರೀಶ್ ಉಪಸ್ಥಿತರಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಐವತ್ತಕ್ಕೂ ಹೆಚ್ಚು ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260410-43-2125352756

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.