ಹಾವೇರಿ: ‘ಹಿಂದೂ ಧರ್ಮ ನಶಿಸಿ ಹೋಗುತ್ತಿದ್ದ ಸಂದರ್ಭದಲ್ಲಿ ಹಿಂದೂ ಧರ್ಮ ಹಾಗೂ ಸಂಸ್ಕೃತಿಯನ್ನು ಪುನಃ ಪ್ರತಿಷ್ಠಾಪಿಸಿದ ಶ್ರೇಯಸ್ಸು ಆದಿ ಶಂಕರಾಚಾರ್ಯರಿಗೆ ಸಲ್ಲುತ್ತದೆ. ಅವರು, ಭಾರತದ ಶ್ರೇಷ್ಠ ಆಧ್ಯಾತ್ಮಿಕ ನಾಯಕರು ಮತ್ತು ತತ್ವಜ್ಞಾನಿಗಳಲ್ಲಿ ಆದಿ ಶಂಕರಾಚಾರ್ಯರೂ ಒಬ್ಬರು’ ಎಂದು ಚಿಕ್ಕಲಿಂಗದಹಳ್ಳಿಯ ಸರ್ಕಾರಿ ಪ್ರೌಢಶಾಲೆಯ ಸಹಶಿಕ್ಷಕಿ ಸೀತಾ ಕಡಕೊಳ ಹೇಳಿದರು.

ನಗರದ ದೇಸಾಯಿ ಗಲ್ಲಿಯ ರಾಮಮಂದಿರದ ಸೀತಾರಾಮ ಮಂಗಲ ಕಾರ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ‘ಗುರು ಶಂಕರಾಚಾರ್ಯರ ಜಯಂತಿ’ ಸಮಾರಂಭದಲ್ಲಿ ಅವರು ವಿಶೇಷ ಉಪನ್ಯಾಸ ನೀಡಿದರು.

‘ಅದ್ವೈತ ವೇದಾಂತದ ಅಡಿಪಾಯವನ್ನು ಹಾಕಿದ ಮತ್ತು ಸಾಂಸ್ಕೃತಿಕ ಮತ್ತು ಧಾರ್ಮಿಕ ಅವನತಿಯ ಸಮಯದಲ್ಲಿ ಹಿಂದೂ ಧರ್ಮವನ್ನು ಪುನರುಜ್ಜಿವನಗೊಳಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದು ಶಂಕರಾಚಾರ್ಯರು’ ಎಂದರು.

‘ಕೇರಳದ ಹಳ್ಳಿ ಕಾಲಡಿಯಲ್ಲಿ ಜನಿಸಿದ್ದ ಆದಿ ಶಂಕರಾಚಾರ್ಯರು, ಭಾರತೀಯ ತತ್ವಶಾಸ್ತ್ರದ ಶ್ರೇಷ್ಠ ವ್ಯಕ್ತಿಯಲ್ಲಿ ಒಬ್ಬರೆಂದು ಹೇಳಲಾಗುತ್ತದೆ. ಅವರು ಆಳವಾದ ಆಧ್ಯಾತ್ಮಿಕ ಮತ್ತು ಬೌದ್ಧಿಕ ಮೈಲಿಗಲ್ಲುಗಳನ್ನು ಸಾಧಿಸಿದ್ದರು. ಅವರ ಅಲ್ಪಾವಧಿಯ ಜೀವಿತಾವಧಿಯ ಹೊರತಾಗಿಯೂ, ಅವರ ಕೊಡುಗೆಗಳು ಭಾರತದ ಆಧ್ಯಾತ್ಮಿಕ ಮತ್ತು ತಾತ್ವಿಕ ಭೂದೃಶ್ಯದ ಮೇಲೆ ಶಾಶ್ವತವಾದ ಪ್ರಭಾವ ಬೀರಿದೆ’ ಎಂದು ತಿಳಿಸಿದರು.

ಸಮಾರಂಭದಲ್ಲಿ ಶಂಕರಾಚಾರ್ಯರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಸ್.ಎಫ್.ಎನ್. ಗಾಜೀಗೌಡ್ರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಹಿರೇಮಠ, ಜಿಲ್ಲಾ ಬ್ರಾಹ್ಮಣ ಸಮಾಜದ ಜಿಲ್ಲಾ ಅಧ್ಯಕ್ಷ ವಸಂತ ಮೊಕ್ತಾಲಿ, ತಾಲ್ಲೂಕು ಬ್ರಾಹ್ಮಣ ಸಮಾಜದ ಅಧ್ಯಕ್ಷ ಸುರೇಶ ಕಡಕೊಳ, ಶ್ರೀರಾಮ ಮಂದಿರದ ಧರ್ಮದರ್ಶಿ ಹಾಗೂ ಮುಖ್ಯಸ್ಥ ಹನುಮಂತ ನಾಯಕ್ ಬಾದಾಮಿ, ರಮೇಶ ಕಡಕೋಳ, ಉದಯ ಕುಲಕರ್ಣಿ, ರಮೇಶ ಕುಲಕರ್ಣಿ, ಮಾಲತೇಶ ಕರ್ಪೂರ, ಕಾಂತೇಶ ಕುಲಕರ್ಣಿ ಹಾಗೂ ಇತರರು ಇದ್ದರು.

ಭವ್ಯ ಮೆರವಣಿಗೆ: ಶಂಕರಾಚಾರ್ಯರ ಜಯಂತಿ ಅಂಗವಾಗಿ ನಗರದಲ್ಲಿ ಮಂಗಳವಾರ ಸಂಜೆ ಭವ್ಯ ಮೆರವಣಿಗೆ ನಡೆಯಿತು. ಶಂಕರಾಚಾರ್ಯರ ಭಾವಚಿತ್ರದ ಮೆರವಣಿಗೆಯು ಶಂಕರ ಭಾರತಿ ಮಠದಿಂದ ಆರಂಭಗೊಂಡು ಗಾಂಧಿವೃತ್ತದ ಮೂಲಕ ಸಾಗಿ ರಾಮಮಂದಿರದಲ್ಲಿ ಸಂಪನ್ನಗೊಂಡಿತು. ಮೆರವಣಿಗೆಯಲ್ಲಿ ಜಯ ಜಯ ಶಂಕರ- ಹರ ಹರ ಶಂಕರ, ಸನಾತನ ಧರ್ಮಕ್ಕೆ ಜಯವಾಗಲಿ ಘೋಷಣೆಗಳು ಮೊಳಗಿದವು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-22-51234757

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.