ಹಿರೇಕೆರೂರ: ಜೀವನದಲ್ಲಿ ಬದಲಾವಣೆ ಮತ್ತು ಬೆಳವಣಿಗೆ ಎರಡೂ ಮುಖ್ಯ. ಬಾಳೆಗೊಂದು ಗೊನೆಯಿರುವಂತೆ ಬಾಳಿಗೊಂದು ಗುರಿಯಿರಬೇಕು. ಜೀವನದ ಉನ್ನತಿಗೆ ಶಿಕ್ಷಣದೊಂದಿಗೆ ಸಂಸ್ಕಾರವು ಮುಖ್ಯ. ಜೀವನ ವಿಕಾಸಕ್ಕೆ ಆದರ್ಶ ಶಿಕ್ಷಣದ ಅಗತ್ಯವಿದೆ ಎಂದು ಬಾಳೆಹೊನ್ನೂರು ರಂಭಾಪುರಿ ಮಠದ ವೀರಸೋಮೇಶ್ವರ ಸ್ವಾಮೀಜಿ ಹೇಳಿದರು.

ತಾಲ್ಲೂಕಿನ ಹಂಸಭಾವಿ ಗ್ರಾಮದಲ್ಲಿ ಮಂಗಳವಾರ ಹಾಲೇವಾಡಿಮಠದ ಗುರುಕುಲ ಶಿಕ್ಷಣ ಸಂಸ್ಥೆಯ ರಜತ ಮಹೋತ್ಸವ ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿ ಮಾತನಾಡಿದರು.

ವಿಜ್ಞಾನ ತಂತ್ರಜ್ಞಾನ ಬೆಳೆದಂತೆ ಮನುಷ್ಯನಲ್ಲಿ ಸದ್ಭಾವನೆಗಳು ಬೆಳೆದು ಬರುವ ಅವಶ್ಯಕತೆಯಿದೆ. ಮನುಷ್ಯನಲ್ಲಿ ಬುದ್ಧಿಶಕ್ತಿ ಬೆಳೆಯುತ್ತದೆ. ಆದರೆ ಭಾವನೆಗಳು ಮೂಲವಾಗಿ ಬೆಳೆಯುತ್ತಿಲ್ಲ. ಶಿಕ್ಷಣದಿಂದ ಬುದ್ಧಿಶಕ್ತಿ ಬೆಳೆದರೆ ಧರ್ಮದಿಂದ ಮನುಷ್ಯನ ಭಾವನೆಗಳು ಬೆಳೆಯುತ್ತವೆ. ಬುದ್ಧಿಶಕ್ತಿ ಮತ್ತು ಭಾವನೆಗಳೆರಡೂ ಬೆಳೆದು ಬಂದರೆ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತದೆ ಎಂದರು.

ಬದುಕು ಇನ್ನೊಬ್ಬರಿಗೆ ಮಾದರಿಯಾಗಬೇಕಲ್ಲದೇ ಮಾರಕವಾಗಬಾರದು. ಯುವ ಜನಾಂಗಕ್ಕೆ ಇತಿಹಾಸದ ಅರಿವು ಅಗತ್ಯ. ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಮಹತ್ವದ್ದು. ಹೆತ್ತ ತಾಯಿ ತಂದೆ ಮತ್ತು ಗುರುವಿನ ಋಣ ತೀರಿಸಲಾಗದು. ಬೆಳಗುವ ಜ್ಯೋತಿ ಜ್ಞಾನದ ಸಂಕೇತ. ವಿನಯವಿಲ್ಲದ ವಿದ್ಯೆ ಪ್ರಜ್ಞೆಯಿಲ್ಲದ ಪ್ರತಿಭೆ ವ್ಯರ್ಥ. ಮನುಷ್ಯತ್ವದ ಪ್ರಾಪ್ತಿಗಾಗಿ ಶಿಕ್ಷಣ ಅಗತ್ಯ. ಯಾವುದೇ ವಿಶ್ವವಿದ್ಯಾಲಯ ಕಲಿಸದೇ ಇರುವ ಜ್ಞಾನವನ್ನು ಜೀವನಾನುಭವ ಕಲಿಸಿಕೊಡುತ್ತದೆ ಎಂಬುದನ್ನು ಮರೆಯಲಾಗದು ಎಂದು ಹೇಳಿದರು.

ಮಾಜಿ ಸಚಿವ ಬಿ.ಸಿ.ಪಾಟೀಲ ಜ್ಯೋತಿ ಬೆಳಗಿಸಿ ಮಾತನಾಡಿ, ಶಿಕ್ಷಣದಿಂದ ಮನುಷ್ಯ ಜೀವನ ಉಜ್ವಲಗೊಳ್ಳುತ್ತದೆ. ವಿದ್ಯೆ ಯಾರೂ ಕದಿಯಲಾರದ ವಸ್ತು. ಎಲ್ಲರೂ ಸಾಕ್ಷರರಾಗಿ ಬಾಳಲು ಪ್ರಯತ್ನಿಸಬೇಕಾಗಿದೆ ಎಂದರು.

ಜಿ.ಎಸ್.ಯು.ಅಕಾಡೆಮಿ ಅಧ್ಯಕ್ಷ ಹಂಸಭಾವಿಯ ಜ್ಯೋತಿ ಪಿ. ಹಾಲೇವಾಡಿಮಠ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಪ್ರಭುಸ್ವಾಮಿ ಹಾಲೇವಾಡಿಮಠ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ರಟ್ಟಿಹಳ್ಳಿ ಶಿವಲಿಂಗ ಶಿವಾಚಾರ್ಯರು, ರಾಣೆಬೆನ್ನೂರು ಶಿವಯೋಗಿ ಶಿವಾಚಾರ್ಯರು, ಕೋಣಂದೂರು ಶ್ರೀಪತಿ ಪಂಡಿತಾರಾಧ್ಯ ಶಿವಾಚಾರ್ಯರು, ಲಿಂಗದಹಳ್ಳಿ ವೀರಭದ್ರ ಶಿವಾಚಾರ್ಯರು, ಮಡ್ಲೂರು ಮುರುಘರಾಜೇಂದ್ರ ಸ್ವಾಮಿಗಳು, ಬಳಸಗೋಡು ಗುರು ನೀಲಕಂಠ ಶಿವಾಚಾರ್ಯರು ಮತ್ತು ಇತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260401-22-674660154

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.