ಹೊಳಲ್ಕೆರೆ: ‘ವಿಶ್ವಗುರು ಬಸವೇಶ್ವರರ ಜಾತ್ಯತೀತ ಆದರ್ಶಗಳನ್ನು ಜೀವನದಲ್ಲಿ ರೂಢಿಸಿಕೊಳ್ಳಬೇಕು’ ಎಂದು ದಲಿತ ಸಂಘರ್ಷ ಸಮಿತಿಯ ಜಿಲ್ಲಾ ಘಟಕದ ಸಂಚಾಲಕ ಕೆಂಗುಂಟೆ ಜಯಣ್ಣ ಸಲಹೆ ನೀಡಿದರು.

ತಾಲ್ಲೂಕಿನ ಹೊರಕೆರೆ ದೇವರಪುರದಲ್ಲಿ ನಡೆದ ಬಿ.ಆರ್. ಅಂಬೇಡ್ಕರ್ ಹಾಗೂ ವಿಶ್ವಗುರು ಬಸವೇಶ್ವರ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

‘ಬಸವಣ್ಣ ಅವರು 12ನೇ ಶತಮಾನದಲ್ಲೇ ಸಮಾನತೆಯ ಸಂದೇಶ ಸಾರಿದ್ದರು. ಜಾತ್ಯತೀತ ಸಮಾಜ ನಿರ್ಮಾಣದ ಕನಸು ಕಂಡಿದ್ದರು. ವಚನಗಳ ಮೂಲಕ ಜನರಲ್ಲಿ ವೈಚಾರಿಕತೆ, ಜಾತ್ಯತೀತ ಮನೋಭಾವ ಬೆಳೆಯುವಂತೆ ಪ್ರೇರೇಪಿಸಿದ್ದರು. ಆದರೆ 800 ವರ್ಷ ಕಳೆದರೂ, ಸಮಾಜದಲ್ಲಿ ಅಸಮಾನತೆ, ಜಾತೀಯತೆ ದೂರವಾಗಿಲ್ಲ. ಕೆಲವು ಕಡೆ ಅಸ್ಪೃಶ್ಯತೆ ಇನ್ನೂ ಜೀವಂತವಾಗಿದೆ. ಬಾಬಾ ಸಾಹೇಬ್ ಅಂಬೇಡ್ಕರ್ ಕೂಡ ಬಸವಣ್ಣನವರಂತೆ ಸಮಾಜದಲ್ಲಿ ಸಮಾನತೆ ತರಲು ಪ್ರಯತ್ನಿಸಿದ್ದರು’ ಎಂದು ತಿಳಿಸಿದರು.

ದಲಿತ ಸಂಘರ್ಷ ಸಮಿತಿಯ ತಾಲ್ಲೂಕು ಸಂಚಾಲಕ ಸುಂದರ ಮೂರ್ತಿ, ನವೀನ್ ಮದ್ದೇರು, ಪ್ರಭಾಕರ್, ಶ್ರೀನಿವಾಸ್, ಅಂಜನ್ ಕುಮಾರ್, ಅಶೋಕ್, ಮಂಜುನಾಥ, ಜಯಶೀಲ, ಚಿಕ್ಕನಕಟ್ಟೆ ತಿಪ್ಪೇಸ್ವಾಮಿ, ಸುನಿಲ್, ಹನುಮಂತ್, ಪ್ರಸನ್ನ ಕುಮಾರ್ ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260510-44-1339911635

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.