ಹೊಸಪೇಟೆ (ವಿಜಯನಗರ): ಜಾತಿ, ಧರ್ಮದ ಹೆಸರಲ್ಲಿ ತಮ್ಮ ಬೇಳೆ ಬೇಯಿಸಿಕೊಳ್ಳುವವರು ಬಹಳಷ್ಟು ಮಂದಿ ಇದ್ದಾರೆ. ಧರ್ಮಗಳ ನಡುವೆ ಒಡಕು ತರುವುದೇ ಇವರ ಉದ್ದೇಶ ಆಗಿರುತ್ತದೆ. ಇವರ ಬಗ್ಗೆ ಸಮಾಜ ಎಚ್ಚರದಿಂದ ಇರಬೇಕು ಎಂಬ ಸಂದೇಶ ಇಲ್ಲಿನ ಸಮಾನತೆ ವೇದಿಕೆ ತಿಳಿಸಿದೆ.

ಸಮಾನತೆ ವೇದಿಕೆ ವತಿಯಿಂದ ಸೋಮವಾರ ಹಮ್ಮಿಕೊಳ್ಳಲಾದ ಬುದ್ಧ–ಬಸವ–ಅಂಬೇಡ್ಕರ್ ಜಯಂತ್ಯುತ್ಸವದಲ್ಲಿ ಪ್ರಧಾನ ಭಾಷಣ ಮಾಡಿದ ಚಿಂತಕ ಪೀರ್ಬಾಷಾ ಈ ಎಚ್ಚರದ ಮಾತುಗಳನ್ನು ಹೇಳಿ, ದೇಶದಲ್ಲಿ ಎಲ್ಲಾ ಧರ್ಮೀಯರಿಗೂ ಸಮಾನತೆಯಿಂದ ಬಾಳುವ ಹಕ್ಕು ಇದೆ, ಇದನ್ನು ಕಸಿದುಕೊಳ್ಳಲು ಸಾಧ್ಯವಿಲ್ಲ ಎಂದರು.

‘ಬುದ್ಧನ ಕಾಲದಿಂದಲೂ ಧಾರ್ಮಿಕ ಸಮಾನತೆ ಬಗ್ಗೆ ಹೆಚ್ಚಿನ ಒತ್ತು ಕೊಡಲಾಗಿತ್ತು. ಬಸವಣ್ಣನವರ ವಚನಗಳ ಮೂಲಕ ಅದಕ್ಕೆ ಹೊಸ ರೂಪ ಸಿಕ್ಕಿತು. ಸಮಾನತೆ, ಸಮಬಾಳು ಅಗತ್ಯ ಎಂಬುದನ್ನು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ತಮ್ಮ ಕೊನೆಯ ಉಸಿರು ಇರುವ ತನಕವೂ ಪ್ರತಿಪಾದಿಸಿದರು ಹಾಗೂ ಸಂವಿಧಾನದಲ್ಲಿ ಅದನ್ನು ಪ್ರಬಲವಾಗಿ ಪ್ರತಿಪಾದಿಸಿದರು. ಈ ಮೂವರ ಜೀವನ, ಆದರ್ಶಗಳೇ ನಮಗೆಲ್ಲರಿಗೂ ದಾರಿದೀಪವಾಗಬೇಕು’ ಎಂದು ಅವರು ಹೇಳಿದರು.

ಹಿಟ್ನಾಳ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ಪ್ರೊ.ಟಿ.ಎಚ್. ಬಸವರಾಜ್ ಮಾತನಾಡಿ, ಬಸವಣ್ಣನವರ ಅನುಭವ ಮಂಟಪ ಪರಿಕಲ್ಪನೆ ಅದ್ಭುತವಾಗಿತ್ತು, ಅದು ಸಮಾನತೆಯ ಸಂದೇಶವನ್ನು ಸಾರಿದ ಬಗೆ ಅಚ್ಚರಿ ತರುವಂತದ್ದು ಎಂದರು.

ಈ ವೇಳೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ಜಿಲ್ಲಾ ಆರೋಗ್ಯ ನಿರೀಕ್ಷಣಾ ಅಧಿಕಾರಿ ಡಾ.ಧರ್ಮನಗೌಡ, ಗ್ರಾಕೂಸ್ ನಾಯಕಿ ಶೈನಾಜ್, ಸಾಹಿತಿ ನೂರ್ ಜಹಾನ್ ಅವರನ್ನು ಸನ್ಮಾನಿಸಲಾಯಿತು. ಸಮಾನತೆ ವೇದಿಕೆಯ ಸಂಚಾಲಕರಾದ ಎನ್.ವೆಂಕಟೇಶ್ ಮತ್ತು ಭರತ್ ಕುಮಾರ್ ಸಿ.ಆರ್.ಪ್ರಾಸ್ತಾವಿಕವಾಗಿ ಮಾತನಾಡಿದರು.

ಹುಡಾ ಅಧ್ಯಕ್ಷ ಎಚ್.ಎನ್.ಎಫ್.ಮೊಹಮ್ಮದ್ ಇಮಾಂ ನಿಯಾಜಿ ಅವರು ಕಾರ್ಯಕ್ರಮ ಉದ್ಘಾಟಿಸಿದರು. ನಗರಸಭೆ ಅಧ್ಯಕ್ಷ ಎನ್.ರೂಪೇಶ್ ಕುಮಾರ್, ಸ್ಲಂ ಜನರ ಸಂಘಟನೆ ಕರ್ನಾಟಕದ ಹೊಸಪೇಟೆ ಘಟಕದ ಅಧ್ಯಕ್ಷ ಎಚ್.ಶೇಷು, ಜಿಲ್ಲಾ ಬಿ.ಆರ್.ಅಂಬೇಡ್ಕರ್ ಸಂಘದ ಗೌರವಾಧ್ಯಕ್ಷ ಎಂ.ಸಿ.ವೀರಸ್ವಾಮಿ, ತಾಲ್ಲೂಕು ವಾಲ್ಮೀಕಿ ನಾಯಕ ಸಮಾಜದ ಅಧ್ಯಕ್ಷ ಗೋಸಲ ಭರಮಪ್ಪ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260526-25-284697871

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.