ಹುಬ್ಬಳ್ಳಿ: ‘ನಾವು ಯಾವ ರೀತಿ ದೇವರನ್ನು ಪ್ರಾರ್ಥಿಸಿ, ಪೂಜಿಸಿ, ಆರಾಧಿಸುತ್ತೇವೋ ಅದೇ ರೂಪದಲ್ಲಿ ದೇವರು ದರ್ಶನಾಶೀರ್ವಾದ ನೀಡುತ್ತಾನೆ. ಅವರವರ ಭಾವಕ್ಕೆ ತಕ್ಕಂತೆ ಶಿವನಿದ್ದು, ಭಜಿಸಿದಂತೆ ಫಲ ಕೊಡುತ್ತಾನೆ’ ಎಂದು ಕನೇರಿಮಠದ ಅದೃಶ್ಯ ಕಾಡಿಸಿದ್ಧೇಶ್ವರ ಸ್ವಾಮೀಜಿ ಹೇಳಿದರು.

ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದ ಶಿರೂರು ಪಾರ್ಕ್ನ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಗುರುವಾರ ಆಯೋಜಿಸಿದ್ದ ಅಯ್ಯಪ್ಪ ಸ್ವಾಮಿ ಪರಿವಾರ ದೇವರ ಅಷ್ಟಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

‘ದೇಶದಲ್ಲಿ ಒಂದು ಕೋಟಿಗೂ ಹೆಚ್ಚು ದೇವಸ್ಥಾನಗಳಿವೆ. ದೇವಸ್ಥಾನಗಳ ಆದಾಯ ನಾಲ್ಕೂವರೆ ಲಕ್ಷ ಕೋಟಿ ರೂಪಾಯಿಗೂ ಹೆಚ್ಚು ಇದೆ. 10 ಕೋಟಿಗೂ ಹೆಚ್ಚು ಜನರು ತಮ್ಮ ವೃತ್ತಿಗಳನ್ನು ದೇವಸ್ಥಾನಗಳ ಮೂಲಕ ಹೊಂದಿದ್ದಾರೆ’ ಎಂದರು.

‘ಮನಸ್ಸಿಗೆ ಭೌತಿಕ, ಬೌಧ್ಧಿಕ ಪದಾರ್ಥ ಹಾಕಿದರೆ ತಣಿಯುವುದಿಲ. ಆರಾಧನೆ, ಭಕ್ತಿ, ಪೂಜೆ ಮಾಡಿದರೆ ಮನಸ್ಸು ತಣಿಯುತ್ತದೆ. ಮನಸ್ಸು ಶುದ್ಧ, ಪ್ರಸನ್ನ, ಸ್ವಚ್ಛವಾಗಿಡಲು ದೇವರ ಉಪಾಸನೆ ಅಗತ್ಯ’ ಎಂದರು.

ದೇವಸ್ಥಾನದ ಧರ್ಮಾಧಿಕಾರಿ ಆನಂದ ಗುರುಸ್ವಾಮಿ ಅಧ್ಯಕ್ಷತೆ ವಹಿಸಿದ್ದರು. ಕಲಬುರಗಿಯ ಸವಿತಾನಂದ ಸ್ವಾಮೀಜಿ, ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ಅಧ್ಯಕ್ಷ ಆನಂದ ಸಂಕೇಶ್ವರ, ಉದ್ಯಮಿ ವಿ.ಎಸ್.ವಿ.ಪ್ರಸಾದ್, ಶಬರಿಮಲೆ ಅಯ್ಯಪ್ಪ ಸೇವಾ ಸಮಾಜದ ಅಖಿಲ ಭಾರತ ಅಧ್ಯಕ್ಷ ಟಿ.ಬಿ. ಶೇಖರ, ಟ್ರಸ್ಟ್ ಕಾರ್ಯದರ್ಶಿ ಜಯರಾಮ ಶೆಟ್ಟಿ, ಕುಮಾರ ಗುರು ತಂತ್ರಿಗಳು ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260424-24-2046523250

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.