ಹುಬ್ಬಳ್ಳಿ: ‘ಸಂಘಟನೆ ಮೂಲಕ ಸನಾತನ ಧರ್ಮವನ್ನು ಉಳಿಸಿ, ಬೆಳೆಸಬೇಕು. ಆ ನಿಟ್ಟಿನಲ್ಲಿ ಶಬರಿಮಲೆ ಅಯ್ಯಪ್ಪಸ್ವಾಮಿಸೇವಾ ಸಮಾಜ ಉತ್ತಮ ಕೆಲಸ ಮಾಡುತ್ತಿದೆ’ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು.

ಇಲ್ಲಿನ ವಿದ್ಯಾನಗರದ ಶಿರೂರು ಪಾರ್ಕ್ನ ಅಯ್ಯಪ್ಪಸ್ವಾಮಿ ದೇವಸ್ಥಾನದಲ್ಲಿಶನಿವಾರ ಹಮ್ಮಿಕೊಂಡಿದ್ದ ಶಬರಿಮಲೆಅಯ್ಯಪ್ಪ ಸೇವಾ ಸಮಾಜದ (ಎಸ್ಎಎಸ್ಎಸ್) ರಾಷ್ಟ್ರೀಯ ಕಾರ್ಯ ಕಾರಿಣಿ ಸಭೆಯಲ್ಲಿ ಮಾತನಾಡಿದರು.

‘ಕೆಲವರು ಸನಾತನ ಹಿಂದೂ ಧರ್ಮದ ಬಗ್ಗೆ ಅಪಪ್ರಚಾರದಲ್ಲಿ ತೊಡಗಿದ್ದಾರೆ. ಇದು ಖಂಡನೀಯ. ಈ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕಿದೆ’ ಎಂದರು.

ಶ್ರೀರಾಮಸೇನೆ ರಾಷ್ಟ್ರೀಯ ಅಧ್ಯಕ್ಷ ಪ್ರಮೋದ ಮುತಾಲಿಕ್ ಅವರು, ‘ಮಠ, ಮಂದಿರಗಳಿಂದ ಹಿಂದೂ ಧರ್ಮ ಉಳಿದಿದೆ. ಇಸ್ಲಾಂ, ಕ್ರಿಶ್ಚಿಯನ್ ಧರ್ಮ ಹಾಗೂ ಕಮ್ಯುನಿಸ್ಟರ ಮುಖ್ಯ ಉದ್ದೇಶ ಅಧ್ಯಾತ್ಮದ ಮೇಲೆ ದಾಳಿ ಮಾಡುವುದಾಗಿದೆ. ಹಿಂದೂ ಧರ್ಮದ ಸಂಸ್ಕೃತಿ, ಪರಂಪರೆ ನಾಶ ಮಾಡಲು ಅವರು ಹೊರಟಿದ್ದಾರೆ’ ಎಂದರು.

ಎಸ್ಎಎಸ್ಎಸ್ ರಾಜ್ಯ ಸಂಯೋಜಕ ಪಿ.ಎಸ್. ಪ್ರಕಾಶ. ಅನ್ನದಾನ ಸಮಿತಿ ಸದಸ್ಯ ವಿಎಸ್ವಿ ಪ್ರಸಾದ್ ಮಾತನಾಡಿದರು.

ಎಸ್ಎಎಸ್ಎಸ್ ರಾಷ್ಟ್ರೀಯ ಉಪಾಧ್ಯಕ್ಷ ಆನಂದ ವಾಮನ ನಾಯಕ್ ಗೋಪೂಜೆ, ಸೇತು ಮಾಧವನ್ ಧ್ವಜಾರೋಹಣ ನೆರವೇರಿಸಿದರು. ರಾಷ್ಟ್ರೀಯ ಅಧ್ಯಕ್ಷ ಎಸ್.ಜೆ.ಆರ್.ಕುಮಾರ ಅಧ್ಯಕ್ಷತೆ ವಹಿಸಿದ್ದರು. ದೇವಸ್ಥಾನದ ಧರ್ಮದರ್ಶಿ ಆನಂದ ಗುರುಸ್ವಾಮಿ ಸಾನ್ನಿಧ್ಯ ವಹಿಸಿದ್ದರು. ಹು–ಧಾ ಮಹಾನಗರ ಪಾಲಿಕೆ ಸದಸ್ಯೆ ವೀಣಾ ಬರದ್ವಾಡ, ಟಿ.ಬಿ.ಶೇಖರ್, ಎ.ಆರ್.ಮೋಹನ್, ಸೆಲ್ವನ್ ಮುರುಘನ್, ಪ್ರಕಾಶ ಗಣಪತಿ ಪೈ, ಈರೋಡು ಎನ್.ರಾಜನ್, ದೊರೈಶಂಕರ, ವಿನೋದ, ಎನ್.ಜಯರಾಂ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-24-200203239

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.