ಹುಬ್ಬಳ್ಳಿ: ‘ಮೂರುಸಾವಿರ ಮಠದ ಜಗದ್ಗುರು ಆಗಿದ್ದ ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಅವರ ವಚನ ಸಾಹಿತ್ಯ ಅದ್ಭುತವಾಗಿತ್ತು. ಸಾಹಿತ್ಯದ ಜೊತೆಗೆ ಧಾರ್ಮಿಕ ಕ್ಷೇತ್ರದಲ್ಲೂ ದೊಡ್ಡ ಸಾಧನೆ ಮಾಡಿದ ಮಹಾನ್ ಯೋಗಿ ಅವರು’ ಎಂದು ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮೀಜಿ ಹೇಳಿದರು.

ಲಿಂ. ಗಂಗಾಧರ ರಾಜಯೋಗೀಂದ್ರ ಸ್ವಾಮೀಜಿ ಅವರ 23ನೇ ಪುಣ್ಯ ಸ್ಮರಣೋತ್ಸವದ ಪ್ರಯುಕ್ತ ನಗರದ ಮೂರುಸಾವಿರ ಮಠದ ಆವರಣದಲ್ಲಿ ಮಂಗಳವಾರ ನಡೆದ ‘ಡಾ.ಮೂಜಗಂ ಸಾಹಿತ್ಯ ಪ್ರಶಸ್ತಿ’ ಪ್ರದಾನ ಸಮಾರಂಭದಲ್ಲಿ ಅವರು ಮಾತನಾಡಿದರು.

‘ಮೂಜಗಂ ಅವರು ನೂರಾರು ಸ್ವಾಮೀಜಿಗಳಿಗೆ ದೀಕ್ಷೆ ನೀಡಿ, ಸಮಾಜದಲ್ಲಿ ಧಾರ್ಮಿಕ ಪರಂಪರೆ ಮುಂದುವರಿಯುವಂತೆ ಮಾಡಿದ್ದರು. ಅವರಲ್ಲಿ ದೀಕ್ಷೆ ಪಡೆದ ಸ್ವಾಮೀಜಿಗಳು ಈಗ ರಾಜ್ಯದ ಪ್ರತಿಷ್ಠಿತ ಮಠಗಳ ಮಠಾಧೀಶರು ಆಗಿದ್ದಾರೆ. ಅವರಿಂದ ಸಹಾಯ, ಸಹಕಾರ ಪಡೆದವರೇ ಅವರನ್ನು ಮರೆತಿರುವುದು ದುಃಖದ ಸಂಗತಿ’ ಎಂದರು.

ಹಾವೇರಿ ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಮಾತನಾಡಿ, ‘ಮೂಜಗಂ ಅವರು ಶಿಕ್ಷಣ ಕ್ಷೇತ್ರದಲ್ಲೂ ಅಪಾರ ಸಾಧನೆ ಮಾಡಿದ್ದರು. ಶಿಕ್ಷಣದಿಂದ ಯಾರೂ ವಂಚಿತರಾಗಬಾರದು ಎಂದು, ಬಡ ಮಕ್ಕಳ ಶಿಕ್ಷಣಕ್ಕೆ ನೆರವು ಆಗುತ್ತಿದ್ದರು’ ಎಂದು ಹೇಳಿದರು.

‘ಮೂಜಗಂ ಅವರು ಉತ್ತರ ಕರ್ನಾಟಕದಲ್ಲಿ ಮಹಿಳಾ ವಿಶ್ವ ವಿದ್ಯಾಲಯ ಸ್ಥಾಪಿಸಲು ಶ್ರಮಿಸಿದ್ದರು. ಬಡವರಿಗೆ ಕಡಿಮೆ ವೆಚ್ಚದಲ್ಲಿ ಆರೋಗ್ಯ ಸೇವೆ ಒದಗಿಸಲು ಘಟಪ್ರಭಾದಲ್ಲಿ ಆಯುರ್ವೇದ, ನ್ಯಾಚರೋಪಥಿ ಆಸ್ಪತ್ರೆ ಸ್ಥಾಪಿಸಿದ್ದರು’ ಎಂದು ಕಾಂಗ್ರೆಸ್ ಮುಖಂಡ ಮೋಹನ ಲಿಂಬಿಕಾಯಿ ನೆನಪಿಸಿಕೊಂಡರು.

ಅಭಿನವ ಸಿದ್ಧಾರೂಢ ಸ್ವಾಮೀಜಿ ಅವರಿಗೆ ‘ಡಾ.ಮೂಜಗಂ ಸಾಹಿತ್ಯ ಪ್ರಶಸ್ತಿ’ ನೀಡಿ ಗೌರವಿಸಲಾಯಿತು. ಮೂರು ಸಾವಿರ ಮಠದ ಗುರುಸಿದ್ಧ ರಾಜಯೋಗಿಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.

ಎರಡೆತ್ತಿನಮಠದ ಸಿದ್ಧಲಿಂಗ ಸ್ವಾಮೀಜಿ, ರುದ್ರಾಕ್ಷಿ ಮಠದ ಬಸವಲಿಂಗ ಸ್ವಾಮೀಜಿ, ವಿರಕ್ತಮಠದ ಶಿವಬಸವ ಸ್ವಾಮೀಜಿ, ಅಭಿನವ ರೇವಣಸಿದ್ಧೇಶ್ವರ ಸ್ವಾಮೀಜಿ, ಚರಲಿಂಗ ಸ್ವಾಮೀಜಿ, ವಿಧಾನ ಪರಿಷತ್ ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಎಸ್.ಆರ್. ಕೆಂಚಣ್ಣನವರ, ಅಮರೇಶ ಹಿಪ್ಪರಗಿ, ಎನ್.ವೈ. ಮಟ್ಟಿಹಾಳ, ಚನ್ನಬಸಪ್ಪ ಧಾರವಾಡಶೆಟ್ಟರ ಹಾಗೂ ಇತರರು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260527-24-168450055

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.