ಹೂವಿನಹಡಗಲಿ: ‘ಬಸವಣ್ಣನವರ ಕಾಯಕ, ದಾಸೋಹ ಸಿದ್ದಾಂತ ಜಗತ್ತಿಗೆ ಮಾದರಿಯಾಗಿದೆ. ಈ ತತ್ವಗಳಿಂದ ಎಲ್ಲ ಸಮಸ್ಯೆಗಳಿಗೂ ಪರಿಹಾರ ಕಾಣಲು ಸಾಧ್ಯ’ ಎಂದು ಹಂಪಿ ಕನ್ನಡ ವಿಶ್ವವಿದ್ಯಾಲಯ ಪ್ರಾಧ್ಯಾಪಕ ಚಿನ್ನಸ್ವಾಮಿ ಸೋಸಲೆ ಹೇಳಿದರು.

ಪಟ್ಟಣದ ಜಿಬಿಆರ್ ಕಾಲೇಜು ಹಾನಗಲ್ಲ ಕುಮಾರೇಶ ಸಭಾಂಗಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ ಸಹಯೋಗದಲ್ಲಿ ಸೋಮವಾರ ಆಯೋಜಿಸಿದ್ದ ಕರ್ನಾಟಕ ಸಾಂಸ್ಕೃತಿಕ ನಾಯಕ ಬಸವಣ್ಣ ಕುರಿತು ಅವರು ಉಪನ್ಯಾಸ ನೀಡಿದರು.

ವೇದ, ಶಾಸ್ತ್ರ, ಪುರಾಣಗಳ ಕಟ್ಟುಕತೆಯನ್ನು ವಿರೋಧಿಸಿದ್ದ ಬಸವಣ್ಣನವರು ಜಾತಿ ತಾರತಮ್ಯ ಕಿತ್ತು ಹಾಕಲು ಪ್ರಯತ್ನಿಸಿದ್ದರು. ಅವರ ಸಂದೇಶಗಳು ಬರೀ ತತ್ವಗಳಲ್ಲ. ವೈಚಾರಿಕತೆಯಿಂದ ಕೂಡಿದ ಜೀವನ ದರ್ಶನಗಳಾಗಿವೆ. ಶರಣರ ಚಿಂತನೆಗಳನ್ನು ಎಲ್ಲರೂ ಅಳವಡಿಸಿಕೊಂಡರೆ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯವಿದೆ’ ಎಂದರು.

ಜಾಗತಿಕ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಉಪಾಧ್ಯಕ್ಷ ಪಿ.ವಿಜಯಕುಮಾರ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ‘ಬಸವಣ್ಣನವರ ವಿಚಾರಧಾರೆಗಳು ಸಾರ್ವಕಾಲಿಕವಾಗಿವೆ. ಯುವ ಸಮೂಹ ಶರಣರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು’ ಎಂದು ತಿಳಿಸಿದರು.

ಪ್ರಾಚಾರ್ಯ ಎಸ್.ಎಸ್.ಪಾಟೀಲ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಮಾನಿಹಳ್ಳಿ ಬಸವರಾಜ, ಕಾರ್ಯದರ್ಶಿ ಅಕ್ಕಿ ಮಲ್ಲಿಕಾರ್ಜುನ, ಶರಣಸಾಹಿತ್ಯ ಪರಿಷತ್ತಿನ ಜಿಲ್ಲಾ ಕಾರ್ಯದರ್ಶಿ ಸತೀಶ್ ರೆಡ್ಡಿ, ಮುಖಂಡರಾದ ಕೋಡಿಹಳ್ಳಿ ಮುದುಕಪ್ಪ, ಐಗೋಳ ಸುಭಾಶ್ಚಂದ್ರ, ಎಂ.ಮಲ್ಲಿಕಾರ್ಜುನ, ಎಂ.ಉಮೇಶ, ಕೆ.ಎಂ.ಉದಾಸಿ, ರಮೇಶ ಅಕ್ಕಿ, ಹಾಲೇಶ್ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260428-25-2063674857

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.