ಇಂಡಿ : ಸುಖ-ದುಃಖ, ಅಂಬಲಿ-ಅಮೃತ, ಶತ್ರು-ಮಿತ್ರ, ಸ್ತುತಿ-ನಿಂದನೆ ಎಲ್ಲವನ್ನು ಸಮಚಿತ್ತದಿಂದ ಸ್ವೀಕರಿಸಿದ ಹೇಮರಡ್ಡಿ ಮಲ್ಲಮ್ಮನ ಬದುಕು ಇಂದಿಗೂ ಅನುಕರಣೀಯ ಹಾಗೂ ಮನುಕುಲಕ್ಕೆ ಆದರ್ಶ ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.

ಭಾನುವಾರ ತಾಲ್ಲೂಕಿನ ಹಿರೇರೂಗಿ ಗ್ರಾಮದ ಯುಬಿಎಸ್ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮಳ ಜಯಂತಿ ಆಚರಣೆಯನ್ನು ಉದ್ಧೇಶಿಸಿ ಅವರು ಮಾತನಾಡಿದರು.

ಶಿವಶರಣೆ ಮಲ್ಲಮ್ಮಳ ಜೀವನದ ಮೌಲ್ಯಗಳು ಸ್ತ್ರೀಕುಲಕ್ಕೆ ಅಮೂಲ್ಯ ಕಾಣಿಕೆಯಾಗಿವೆ. ಸಮಾಜದ ಪ್ರತಿಯೊಬ್ಬರೂ ಮಹಾಸಾದ್ವಿ ಮಲ್ಲಮ್ಮಳ ಆದರ್ಶ ಅರಿತು ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಅವಳ ದೇವಭಕ್ತಿ, ತಪಸ್ಸು, ತ್ಯಾಗ ಇಂದಿನ ಸಮಾಜಕ್ಕೆ ದಾರಿದೀಪ ಎಂದರು.

ಶಿಕ್ಷಕ ಎಸ್. ಎಸ್. ಅರಬ ಮಾತನಾಡಿ, ಸಮಸ್ಯೆಗಳನ್ನು ಎದುರಿಸಿ ಬದುಕುವುದೇ ನಿಜವಾದ ಜೀವನ. ಸಮಸ್ಯೆ-ಸಂಕಷ್ಟಗಳ ನಡುವೆಯೂ ಮಲ್ಲಮ್ಮ ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ. ಅವರ ತತ್ವ, ಸಿದ್ಧಾಂತಗಳನ್ನು ಅಳವಡಿಸಿಕೊಂಡರೆ ಜೀವನ ಸಮೃದ್ಧವಾಗುತ್ತದೆ ಎಂದರು.

ಮುಖ್ಯ ಶಿಕ್ಷಕ ಕೆ. ಐ. ಮಕಾನದಾರ ಅಧ್ಯಕ್ಷತೆ ವಹಿಸಿ ಮಾತನಾಡಿ, ಕಷ್ಟದಲ್ಲೂ ಎಲ್ಲರ ಒಳಿತನ್ನೇ ಬಯಸಿದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಆದರ್ಶ ಜೀವನ ನಡೆಸಿ ಎಲ್ಲ ಮಹಿಳೆಯರಿಗೆ ಮಾದರಿಯಾಗಿದ್ದಾರೆ. ಅವರ ಆತ್ಮಬಲ ಇಂದಿನ ಮಹಿಳೆಯರಿಗೆ ಪ್ರೇರಣೆಯಾಗಬೇಕು ಎಂದು ಆಶಿಸಿದರು.

ಶಿಕ್ಷಕರಾದ ನಿಂಗಪ್ಪ ನಾವದಗಿ, ಶಾಂತೇಶ ಹಳಗುಣಕಿ ಇದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-26-115071629

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.