ಜೇವರ್ಗಿ: ‘ಸನಾತನ ಹಿಂದೂ ಧರ್ಮದ ಪುನರುತ್ಥಾನಕ್ಕಾಗಿ ಹಗಲಿರುಳು ಶ್ರಮಿಸಿದ ಆದಿ ಶಂಕರಾಚಾರ್ಯರ ತತ್ವಗಳು ಸಾರ್ವಕಾಲಿಕ ಸತ್ಯ’ ಎಂದು ಗಂವ್ಹಾರ ತ್ರಿವಿಕ್ರಮಾನಂದ ಸರಸ್ವತಿ ಸ್ವಾಮಿಗಳ ಮಠದ ಪಾಂಡುರಂಗ ಮಹಾರಾಜರು ಹೇಳಿದರು.

ಪಟ್ಟಣದ ತಹಶೀಲ್ದಾರ್ ಕಚೇರಿಯ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ಆದಿ ಶಂಕರಾಚಾರ್ಯರ ಜಯಂತಿ ಕಾರ್ಯಕ್ರಮದಲ್ಲಿ ಅವರು ಆಶೀರ್ವಚನ ನೀಡಿದರು.

ತಹಶೀಲ್ದಾರ್ ಮಲ್ಲಣ್ಣ ಯಲಗೋಡ ಮಾತನಾಡಿ, ‘ಆದಿ ಶಂಕರಾಚಾರ್ಯರು ಹಾಕಿಕೊಟ್ಟ ದಾರಿಯಲ್ಲಿ ನಡೆಯುವುದು ನಮಗೆಲ್ಲ ಹೆಮ್ಮೆಯ ವಿಷಯ. ತಾಲ್ಲೂಕು ಆಡಳಿತವು ಶಿಸ್ತುಬದ್ಧವಾಗಿ ಜಯಂತಿಯನ್ನು ಆಚರಿಸುವ ಮೂಲಕ ಅವರ ವಿಚಾರಧಾರೆಗಳನ್ನು ಜನಮಾನಸಕ್ಕೆ ತಲುಪಿಸುವ ಪ್ರಯತ್ನ ಮಾಡುತ್ತಿದೆ’ ಎಂದು ಹೇಳಿದರು.

ವಿಪ್ರ ಸಮಾಜದ ತಾಲ್ಲೂಕು ಅಧ್ಯಕ್ಷ ರಮೇಶ ಎನ್.ವಕೀಲ್, ಪಿಕಾರ್ಡ್ ಬ್ಯಾಂಕ್ ಮಾಜಿ ಅಧ್ಯಕ್ಷ ಹಳ್ಳೆಪ್ಪಚಾರ್ಯ ಜೋಶಿ, ಉಮೇಶ ಭಟ್ ಜೋಶಿ ನೆಲೋಗಿ, ರಾಘವೇಂದ್ರ ಕುಲಕರ್ಣಿ ನರಿಬೋಳ, ದತ್ತಾತ್ರೇಯರಾವ ಕುಲಕರ್ಣಿ ಕೋಳಕೂರ, ರಮಾಕಾಂತ ಭಟ್ ಜೋಶಿ ನರಿಬೋಳ, ಶ್ರೀಪಾದರಾವ ಕುಲಕರ್ಣಿ ಯರಗಲ್, ಶ್ಯಾಮರಾವ ಕುಲಕರ್ಣಿ, ವಿನೋದ ಕುಲಕರ್ಣಿ ಸಾತಖೇಡ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260422-31-712697790

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.