ಜೇವರ್ಗಿ: ‘800 ವರ್ಷ ಮೊಘಲರು, 200 ವರ್ಷ ಬ್ರಿಟಿಷರು ಆಳಿದ ಈ ದೇಶದಲ್ಲಿ ಇನ್ನೂ ಜಾತೀಯತೆ, ಅಸ್ಪೃಶ್ಯತೆ, ಮೂಢನಂಬಿಕೆ, ಕಂದಾಚಾರಗಳು ಉಳಿದುಕೊಂಡಿದೆ. ಈ ರಾಮಬಾಣಕ್ಕೆ ಭೀಮಬಾಣವೇ ಮದ್ದು’ ಎಂದು ನೆಲೋಗಿ ವಿರಕ್ತ ಮಠದ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಗೌತಮ ಬುದ್ಧರ ಮೂರ್ತಿ ಪ್ರತಿಷ್ಠಾಪನೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿಯ ಅಂಗವಾಗಿ ಜಯಂತ್ಯುತ್ಸವ ಸಮಿತಿ ವತಿಯಿಂದ ಪಟ್ಟಣದ ಅಂಬೇಡ್ಕರ್ ಭವನದಲ್ಲಿ ಶುಕ್ರವಾರ ಆಯೋಜಿಸಲಾಗಿದ್ದ ‘ಡಾ.ಅಂಬೇಡ್ಕರ್ ಅರಿವು ಉತ್ಸವ’ದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ಮುಖ್ಯ ಭಾಷಣಕಾರರಾಗಿದ್ದ ಬೆಂಗಳೂರಿನ ಸುರೇಶ ಗೌತಮ ಮಾತನಾಡಿ, ‘ಅಂಬೇಡ್ಕರ್ ಕೇವಲ ದಲಿತರಿಗಾಗಿ ದುಡಿಯಲಿಲ್ಲ, ಮಹಿಳೆಯರು, ಹಿಂದುಳಿದ ವರ್ಗದವರ ಏಳಿಗೆಗೆ ದುಡಿದರು. ಸ್ವಾತಂತ್ರ್ಯ ಸಂದರ್ಭದಲ್ಲಿ ನಮ್ಮೆಲ್ಲ ಸಮಸ್ಯೆಗಳಿಗೆ ಬ್ರಿಟಿಷರೇ ಕಾರಣ ಎಂಬಂತಿದ್ದ ಕಾಲದಲ್ಲಿ ಸಮಾಜದಲ್ಲಿನ ಶ್ರೇಣಿಕೃತ ವ್ಯವಸ್ಥೆ ಕೂಡ ಶೋಷಣೆಗೆ ಕಾರಣ ಎಂದು ಅಂತಹ ಅನಿಷ್ಟಗಳ ವಿರುದ್ಧ ಡಾ.ಅಂಬೇಡ್ಕರ್ ಅವರು ಹೋರಾಡಿದರು’ ಎಂದು ತಿಳಿಸಿದರು.

ಅಣದೂರು ಬುದ್ಧ ವಿಹಾರದ ಭಂತೆ ವರಜ್ಯೋತಿ ಸೇರಿದಂತೆ ಇನ್ನಿತರ ಭಂತೇಜಿಗಳು ಸಾನ್ನಿಧ್ಯ ವಹಿಸಿದ್ದರು. ಜಿ.ಪಂ ಮಾಜಿ ಸದಸ್ಯ ಶಾಂತಪ್ಪ ಕೂಡಲಗಿ ಕಾರ್ಯಕ್ರಮ ಉದ್ಘಾಟಿಸಿದರು. ಅಖಿಲ ಭಾರತ ವೀರಶೈವ, ಲಿಂಗಾಯತ ಸಮಾಜದ ರಾಜ್ಯ ಸದಸ್ಯ ರಾಜಶೇಖರ ಸೀರಿ ಮಾತನಾಡಿದರು.

ದಸಂಸ ರಾಜ್ಯ ಸಂಚಾಲಕ ಅರ್ಜುನ ಭದ್ರೆ, ಮರೆಪ್ಪ ಹಳ್ಳಿ, ಜಿ.ಪಂ ಮಾಜಿ ಸದಸ್ಯ ಗುರುಲಿಂಗಪ್ಪಗೌಡ ಮಾಲಿಪಾಟೀಲ, ಚನ್ನಮಲ್ಲಯ್ಯ ಹಿರೇಮಠ, ಬಾಪೂಗೌಡ ಪಾಟೀಲ ಬಿರಾಳ, ವಸಂತ ನರಿಬೋಳ, ಕೆರೆಪ್ಪ ಹಿಪ್ಪರಗಿ, ಸುಭಾಷ ಚನ್ನೂರ, ಭೀಮರಾಯ ಜನಿವಾರ, ಜಯಂತ್ಯುತ್ಸವ ಸಮಿತಿ ಅಧ್ಯಕ್ಷ ಪುಂಡಲೀಕ ಗಾಯಕವಾಡ ಅಧ್ಯಕ್ಷತೆ ವಹಿಸಿದ್ದರು. ಪಂಡಿತ ಮದಗುಣಕಿ, ಅನಿಲ ಟೆಂಗಳಿ, ಡಾ.ಅಶೋಕ ದೊಡ್ಡಮನಿ, ನಿಜಲಿಂಗ ದೊಡ್ಡಮನಿ, ವಿಠಲ ಚಿಕಣಿ, ಮರೆಪ್ಪ ಬೇಗಾರ ಸೇರಿದಂತೆ ನೂರಾರು ಜನ ಭಾಗವಹಿಸಿದ್ದರು.

ಇದೇ ವೇಳೆ ವಿವಿಧ ಸಾಧಕರಿಗೆ ಹಾಗೂ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಇದಕ್ಕೂ ಮುಂಚೆ ಪಟ್ಟಣದ ಬಸವೇಶ್ವರ ಸರ್ಕಲ್ನಿಂದ ಪಂಚಲೋಹದ ಗೌತಮ ಬುದ್ಧರ ಮೂರ್ತಿಯನ್ನು ಮೆರವಣಿಗೆ ಮೂಲಕ ಕರೆತಂದು ಅಂಬೇಡ್ಕರ್ ಭವನದಲ್ಲಿ ಪ್ರತಿಷ್ಠಾಪಿಸಲಾಯಿತು. ಮೆರವಣಿಗೆಯನ್ನು ಜಿ.ಪಂ ಮಾಜಿ ಸದಸ್ಯ ಚಂದ್ರಶೇಖರ ಹರನಾಳ ಉದ್ಘಾಟಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260516-31-1848435509

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.