ಜೇವರ್ಗಿ: ‘ಹೇಮರಡ್ಡಿ ಮಲ್ಲಮ್ಮ ಕೇವಲ ಒಂದು ವರ್ಗಕ್ಕೆ ಸೀಮಿತರಾಗದೆ ತಮ್ಮ ಸಾತ್ವಿಕ ವಿಚಾರಗಳ ಮೂಲಕ ಮಾನವೀಯ ಸಂದೇಶಗಳನ್ನು ಜಗತ್ತಿಗೆ ಸಾರಿದ್ದಾರೆ. ಅವರ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಂಡು ಬಾಳಬೇಕು’ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಎಇಇ ಗುರುಶಾಂತಯ್ಯ ಗದ್ದಗಿಮಠ ಹೇಳಿದರು.

ಪಟ್ಟಣದ ಮಿನಿ ವಿಧಾನಸೌಧ ಆವರಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಆಯೋಜಿಸಲಾಗಿದ್ದ ಶಿವಶರಣೆ ಹೇಮರಡ್ಡಿ ಮಲ್ಲಮ್ಮ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಅವರು ಮಾತನಾಡಿದರು.

‘ಹೇಮರಡ್ಡಿ ಮಲ್ಲಮ್ಮ ಅವರು ತಮ್ಮ ಸಾತ್ವಿಕ ವಿಚಾರಗಳ ಮೂಲಕ ಸಮಾಜದ ಅಂಕುಡೊಂಕು ತಿದ್ದುವ ಕೆಲಸ ಮಾಡಿದರು. ಅವರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸದೆ ಸರ್ವರೂ ಆರಾಧಿಸುವಂತಾಗಬೇಕು. ಸಮುದಾಯದ ಪ್ರತಿಯೊಬ್ಬರೂ ಒಗ್ಗಟ್ಟಾಗಿ ಜಯಂತಿಗಳನ್ನು ಆಚರಿಸಬೇಕು’ ಎಂದು ಹೇಳಿದರು.

ತಾಲ್ಲೂಕು ಪಂಚಾಯಿತಿ ಇಒ ರವಿಚಂದ್ರರೆಡ್ಡಿ ಮಾತನಾಡಿ, ‘ಶ್ರೀಶೈಲ ಮಲ್ಲಿಕಾರ್ಜುನನ ಮೇಲೆ ಅಪಾರ ನಂಬಿಕೆ ಹೊಂದಿ, ಭಾವನಾತ್ಮಕ ಜೀವಿಯಾಗಿ, ಮಾನಸಿಕ ಶಿವಲಿಂಗ ದೀಕ್ಷೆ ತೊಟ್ಟು ಸಮಾಜ, ನಾಡು–ನುಡಿ ಹಾಗೂ ಮನುಕುಲದ ಉದ್ಧಾರಕ್ಕೆ ಅಪಾರ ಕೊಡುಗೆ ನೀಡಿದ ಮಲ್ಲಮ್ಮರ ವಿಚಾರ ಧಾರೆಗಳು ಮನೆ–ಮನಕ್ಕೆ ತಲುಪುವಂತಾಗಬೇಕು’ ಎಂದರು.

ರೆಡ್ಡಿ ಸಮಾಜದ ಮುಖಂಡರಾದ ಶಂಕರಗೌಡ ಪಾಟೀಲ, ರಾಮಣ್ಣಗೌಡ ಹಾಲಗಡ್ಲಾ, ಮುದುಗೌಡ ಗಿರಿಗೌಡ, ಅಣ್ಣಾರಾವ ಫುಲಾರೆ, ಭೀಮರಾಯ ಖಾದ್ಯಾಪೂರ, ಸಾಯಬಣ್ಣ ಕಲ್ಯಾಣಕರ್ ಸೇರಿದಂತೆ ತಾಲ್ಲೂಕು ಮಟ್ಟದ ವಿವಿಧ ಅಧಿಕಾರಿಗಳು ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260511-31-652635234

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.