ಕಲಬುರಗಿ: ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಭೀಮಾ ತೀರದಲ್ಲಿರುವ ಪುಣ್ಯಕ್ಷೇತ್ರ ಮಣ್ಣೂರಿನ ವೇದೇಶತೀರ್ಥ ಸಂಸ್ಕೃತ ವಿದ್ಯಾಪೀಠದ ಕುಲಪತಿ ಪಂ. ಅನಂತಾಚಾರ್ಯ ಅಕಮಂಚಿಯವರಿಗೆ ರಾಜ್ಯ ಸಂಸ್ಕೃತ ವಿ.ವಿ.ಯಿಂದ ಮಾನ್ಯತೆ ಪಡೆದಿರುವ ಬೆಂಗಳೂರಿನ ದ್ವೈತ ವೇದಾಂತಾಧ್ಯಯನ ಸಂಶೋಧನಾ ಪ್ರತಿಷ್ಠಾನ ವಿದ್ಯಾಧೀಶಾನುಗ್ರಹ ಪ್ರಶಸ್ತಿ ನೀಡಿ ಗೌರವಿಸಿದೆ.

ಉತ್ತರಾದಿ ಮಠದ ಪರಂಪರೆಯಲ್ಲಿ ಆಗಿ ಹೋಗಿರುವ ವಿದ್ಯಾಧೀಶತೀರ್ಥ ಶ್ರೀಗಳ ಹೆಸರಲ್ಲಿ ಈ ಪ್ರಶಸ್ತಿ ನೀಡಲಾಗುತ್ತಿದೆ. ಉತ್ತರಾದಿ ಮಠಾಧೀಶ ಸತ್ಯಾತ್ಮತೀರ್ಥ ಶ್ರೀಗಳು ಬೆಂಗಳೂರಿನಲ್ಲಿ ಪ್ರಶಸ್ತಿ ನೀಡಿದರು.

ಮಣ್ಣೂರು ಭೀಮಾ ತೀರದಲ್ಲಿ ಗುರುಕುಲ ಪರಂಪರೆಯಲ್ಲಿ ವಿದ್ಯಾಪೀಠ ನಡೆಸಿಕೊಂಡು ಹೊರಟಿರುವ ಅನಂತಾಚಾರ್ಯರು 4 ದಶಕಕ್ಕೂ ಹೆಚ್ಚು ಕಾಲದಿಂದ ಸಂಸ್ಕೃತ ಪಾಠಪ್ರವಚನ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260414-34-528478828

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.